• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕಳಚಿತು ಕನ್ನಡ ಸಾರಸ್ವತ ಲೋಕದ ಮತ್ತೊಂದು ಕೊಂಡಿ: ನಿಘಂಟು ತಜ್ಞ, ಪ್ರೊ.ಜಿ. ವೆಂಕಟಸುಬ್ಬಯ್ಯ ನಿಧನ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಕಳಚಿತು ಕನ್ನಡ ಸಾರಸ್ವತ ಲೋಕದ ಮತ್ತೊಂದು ಕೊಂಡಿ: ನಿಘಂಟು ತಜ್ಞ, ಪ್ರೊ.ಜಿ. ವೆಂಕಟಸುಬ್ಬಯ್ಯ ನಿಧನ
0
SHARES
0
VIEWS
Share on FacebookShare on Twitter

ಬೆಂಗಳೂರು, ಏ. 19: ನಾಡಿನ ಖ್ಯಾತ ಸಂಶೋದಕ, ನಿಘಂಟು ತಜ್ಞ ಫ್ರೊ.ಜಿ. ವೆಂಕಟಸುಬ್ಬಯ್ಯ ಅವರು ಭಾನುವಾರ ತಡರಾತ್ರಿ 1.15ರ ವೇಳೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ
ನಿಧನರಾದರು. ಅವರಿಗೆ 108 ವರ್ಷ ವಯಸ್ಸಾಗಿತ್ತು.

ಶತಾಯುಷಿ ವೆಂಕಟಸುಬ್ಬಯ್ಯ ಅವರು ಮೂತ್ರನಾಳದ ಸಮಸ್ಯೆ ಸೇರಿದಂತೆ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಕಳೆದ 8 ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಾಡೋಜ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಖ್ಯಾತ ವಿದ್ವಾಂಸರು ಹಾಗೂ ಜನಪ್ರಿಯ ಪ್ರಾಧ್ಯಾಪಕರು. ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸುವರ್ಣ ಪದಕದೊಡನೆ ಎಂ.ಎ. ಪದವಿ, ನಂತರ ಬಿ.ಟಿ. ಪದವಿ ಗಳಿಕೆ. ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿ ವೃತ್ತಿಯನ್ನು ಆರಂಭಿಸಿ, ನಂತರ ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಪ್ರಿನ್ಸಿಪಾಲರಾಗಿ, ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಕೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆ ಶ್ರೀಯುತರದಾಗಿತ್ತು.

ನಡೆದಾಡುವ ನಿಘಂಟು, ಶಬ್ಧ ಬ್ರಹ್ಮ ಎಂದು ಜನಜನಿತರಾಗಿದ್ದ ಅವರು ಸಾಹಿತ್ಯ ವಿಮರ್ಶೆ, ಸಂಶೋಧನೆ, ಅನುವಾದ, ನಿಘಂಟು ರಚನೆ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಕೆ. 50 ಪುಸ್ತಕಗಳನ್ನು, 14 ನಿಘಂಟುಗಳನ್ನು ಪ್ರಕಟಗೊಳಿಸಿರುವುದಲ್ಲದೆ ‘ಇಗೋ ಕನ್ನಡ’ ಎಂಬ ಅಂಕಣದಿಂದ ನಾಡಿನಲ್ಲಿ ಮನೆಮಾತಾಗಿದ್ದರು.

ನಿಘಂಟು ಪರಿವಾರ, ಅಕ್ರೂರ ಚರಿತ್ರೆ (ಸಂಪಾದನೆ), ಇಗೋ ಕನ್ನಡ (ಸಾಮಾಜಿಕ ನಿಘಂಟು), ಗತಿ ಪ್ರಜ್ಞೆ, ಕನ್ನಡವನ್ನು ಉಳಿಸಿ ಬೆಳೆಸಿದವರು, ಅನುಕಲ್ಪನೆ, ಕರ್ಣ ಕರ್ಣಾಮೃತ ಮುಂತಾದವು ಪ್ರಮುಖ ಕೃತಿಗಳು. ಹಲವಾರು ಶಿಕ್ಷಕ ತರಬೇತಿ ಕಾಲೇಜುಗಳಲ್ಲಿ ಆಹ್ವಾನಿತ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಶ್ರೀಯುತರ ಪಾಂಡಿತ್ಯಕ್ಕೆ ಸಂದ ಪ್ರಶಸ್ತಿ ಪುರಸ್ಕಾರಗಳು ಹಲವಾರು. ಅವುಗಳಲ್ಲಿ ವಿದ್ಯಾಲಂಕಾರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಶಂಬಾ ಪ್ರಶಸ್ತಿ, ಸೇಡಿಯಾಪು ಪ್ರಶಸ್ತಿ, ಕಾಯಕ ಪ್ರಶಸ್ತಿ, ಪತ್ರಿಕಾ ಅಕಾಡೆಮಿ ವಿಶೇಷ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಹಂಪಿ ವಿಶ್ವವಿದ್ಯಾನಿಲಯದ ನಾಡೋಜ ಪ್ರಶಸ್ತಿ, ಅಂತರಾಷ್ಟ್ರೀಯ ನಿಘಂಟು ಸಮ್ಮೇಳನಗಳಿಗೆ ಆಹ್ವಾನ ಮುಂತಾದವು ಮುಖ್ಯವಾದವು. ಅಲ್ಲದೇ ಜಿ.ವಿ. ಎಂದೇ ಖ್ಯಾತರಾದ ಪ್ರೊ|| ಜಿ. ವೆಂಕಟಸುಬ್ಬಯ್ಯ ಅವರು ಅತ್ಯುತ್ತಮ ಭಾಷಣಕಾರರು ಹಾಗೂ ಸರಳ ಸಜ್ಜನಿಕೆಯ ವಿದ್ವಾಂಸರು ಆಗಿದ್ದರು.

ಪ್ರೊ. ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಿಎಂಗಳಾದ ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು ಹಾಗೂ ನಾಡಿನ ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ.

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !
Vijaya Time

ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !

June 10, 2023
bill
ರಾಜ್ಯ

ಇಂಧನ ಹೊಂದಾಣಿಕೆ ಶುಲ್ಕ ನೆಪ, ಡಬಲ್ ಆಯ್ತು ಕರೆಂಟ್ ಬಿಲ್ ; ಹಲವೆಡೆ ಪ್ರತಿಭಟನೆ

June 10, 2023
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.