• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಾಮಾಜಿಕ ನ್ಯಾಯದ ಹೋರಾಟದ ದಿಕ್ಕುತಪ್ಪಿಸುವ ಇನ್ನೊಂದು ರಾಜಕೀಯ ಷಡ್ಯಂತ್ರವೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ವಿಚಾರ: RSS  ಈಶ್ವರಪ್ಪನನ್ನು ಎತ್ತಿಕಟ್ಟಿ  ಹೋರಾಟ ಮಾಡಿಸುತ್ತಿದೆ: ಸಿದ್ದರಾಮಯ್ಯ
0
SHARES
0
VIEWS
Share on FacebookShare on Twitter

ಬೆಂಗಳೂರು, ಫೆ. 14: ಮೀಸಲಾತಿಯನ್ನು ವಿರೋಧಿಸುತ್ತಲೇ ಬಂದಿರುವ ಬಿಜೆಪಿ ನಾಯಕರು ಸಾಲುಸಾಲಾಗಿ ನಿಂತು ಮೀಸಲಾತಿಗಾಗಿ ಕೂಗೆಬ್ಬಿಸಿರುವುದು ಪ್ರಾಮಾಣಿಕ ಜ್ಞಾನೋದಯವೇ? ಸಾಮಾಜಿಕ ನ್ಯಾಯದ ಹೋರಾಟದ ದಿಕ್ಕುತಪ್ಪಿಸುವ ಇನ್ನೊಂದು ರಾಜಕೀಯ ಷಡ್ಯಂತ್ರವೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮಂಡಲ್ ವರದಿಯನ್ನು ವಿರೋಧಿಸಿ ಮೈಗೆ ಬೆಂಕಿಹಚ್ಚಿಕೊಂಡವರು ಯಾರು? ಉನ್ನತ ಶಿಕ್ಷಣದಲ್ಲಿ ಮೀಸಲಾತಿಯನ್ನು ವಿರೋಧಿಸಿ ಬೀದಿಗಿಳಿದವರು ಯಾರು? ಸ್ಥಳೀಯ ಸಂಸ್ಥೆಗಳಲ್ಲಿನ ಮೀಸಲಾತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ ರಾಮಾ ಜೋಯಿಸ್ ಯಾವ ಪಕ್ಷದವರು? ಉತ್ತರಿಸುವಿರಾ ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.

ಜಾತಿಯಿಂದಲೇ ನರಕ, ಧರ್ಮದಿಂದಲೇ ಸ್ವರ್ಗ, ನಾವೆಲ್ಲ ಹಿಂದೂ, ನಾವೆಲ್ಲ ಒಂದು ಎಂದು ಹಿಂದೂ ಸಮಾಜೋತ್ಸವ ನಡೆಸುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ? ಯಾರಾದರೂ ಉತ್ತರಿಸುವಿರಾ?. ಮೀಸಲಾತಿಯನ್ನು ನೇರವಾಗಿ ವಿರೋಧಿಸಲಿಕ್ಕಾಗದ ಸಂಘ ಪರಿವಾರದ ನಾಯಕರು ವಿವಾದ ಸೃಷ್ಟಿಸಿ, ಸಮುದಾಯಗಳನ್ನು ಪರಸ್ಪರ ಕಾದಾಟಕ್ಕಿಳಿಸಿ ಸಾಮಾಜಿಕ ನ್ಯಾಯದ ಹೋರಾಟದ ಹಾದಿ ತಪ್ಪಿಸುವ ಕುಟಿಲ ಕಾರಸ್ಥಾನಕ್ಕೆ ಅಮಾಯಕ ಜನತೆ ಬಲಿಯಾಗಬಾರದು.

ರಾಜ್ಯದಲ್ಲಿ ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ? ಮರೆತುಬಿಟ್ಟಿದ್ದರೆ ನೆನಪಿಸಬಯಸುತ್ತೇನೆ: ಕೇಂದ್ರ ಮತ್ತು ರಾಜ್ಯದಲ್ಲಿರುವುದು ಭಾರತೀಯ ಜನತಾ ಪಕ್ಷದ ಸರ್ಕಾರ. ಅಲ್ಲಿನ ಪ್ರಧಾನಿ ನರೇಂದ್ರ ಮೋದಿ ಹಾಗೂ ಇಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ. ಈಗಿನ ಮೀಸಲಾತಿ ಬದಲಾವಣೆ-ಹೆಚ್ಚಳದ ಬೇಡಿಕೆಗೆ ತಮಿಳುನಾಡಿನ ಮಾದರಿಯಲ್ಲಿ ಕರ್ನಾಟಕದ ಮೀಸಲಾತಿಯನ್ನು ಶೇಕಡಾ 73ಕ್ಕೆ ಹೆಚ್ಚಿಸಬೇಕೆಂದು ಕಾಂಗ್ರೆಸ್ ಸರ್ಕಾರವೇ ಮಾಡಿರುವ ಕಾನೂನು ಮಾತ್ರ ಪರಿಹಾರ. ಅದರ ಅನುಷ್ಠಾನ ಕೇಂದ್ರದ ಬಿಜೆಪಿ ಸರ್ಕಾರದ ಕೈಯಲ್ಲಿದೆ.

ಮೀಸಲಾತಿ ಹೆಚ್ಚಳಕ್ಕಾಗಿ ಆಧಾರ ಕೋರುತ್ತಿರುವ ನ್ಯಾಯಾಲಯಕ್ಕೆ ಕರ್ನಾಟಕದಲ್ಲಿ ನಡೆದಿರುವ ಸಾಮಾಜಿಕ-ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯೇ ಉತ್ತರ. ರಾಜ್ಯ ಬಿಜೆಪಿ ಸರ್ಕಾರ ಮೀಸಲಾತಿ ಹೆಚ್ಚಳದ ಪರವಾಗಿದ್ದರೆ ಮೊದಲು ನಡೆಸಿದ್ದ ಈ ಸಮೀಕ್ಷೆಯನ್ನು ಸ್ವೀಕರಿಸಿ, ಶಿಫಾರಸುಗಳನ್ನು ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.

Related News

ತಾಂತ್ರಿಕ ದೋಷದಿಂದ ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್ ಸ್ಥಳಾಂತರ: ಮತ್ತೆ ಸಂಚಾರ ಆರಂಭ
ಪ್ರಮುಖ ಸುದ್ದಿ

ತಾಂತ್ರಿಕ ದೋಷದಿಂದ ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್ ಸ್ಥಳಾಂತರ: ಮತ್ತೆ ಸಂಚಾರ ಆರಂಭ

October 3, 2023
ಸಕ್ಕರೆ ಕಾಯಿಲೆಯಿಂದ ನೀವು ಬಳಲುತ್ತಿದ್ದೀರಾ? ಹಾಗಾದ್ರೆ ಡ್ರೈಫ್ರೂಟ್ಸ್ ಅನ್ನು ಈ ರೀತಿ ಸೇವಿಸಿ
ಆರೋಗ್ಯ

ಸಕ್ಕರೆ ಕಾಯಿಲೆಯಿಂದ ನೀವು ಬಳಲುತ್ತಿದ್ದೀರಾ? ಹಾಗಾದ್ರೆ ಡ್ರೈಫ್ರೂಟ್ಸ್ ಅನ್ನು ಈ ರೀತಿ ಸೇವಿಸಿ

October 3, 2023
ಈಶಾನ್ಯ, ಉತ್ತರ ಭಾರತದಲ್ಲಿ ಸರಣಿ ಭೂಕಂಪ – ಆತಂಕದಲ್ಲಿ ಜನತೆ..!
ದೇಶ-ವಿದೇಶ

ಈಶಾನ್ಯ, ಉತ್ತರ ಭಾರತದಲ್ಲಿ ಸರಣಿ ಭೂಕಂಪ – ಆತಂಕದಲ್ಲಿ ಜನತೆ..!

October 3, 2023
ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್
ದೇಶ-ವಿದೇಶ

ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್

October 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.