- ಪಶ್ಚಿಮ ಬಂಗಾಳದಲ್ಲಿ ಮತ್ತೆ ಹಿಂಸಾಚಾರ
- ಅಲ್ಲಲ್ಲಿ ಕಲ್ಲುತೂರಾಟ,ಪೊಲೀಸರ ಮೇಲೂ ಹಲ್ಲೆ!
- ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ
West Bengal : ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆಯ (anti waqf protest wb) ವಿರುದ್ಧದ ಪ್ರತಿಭಟನೆ ಹಿಂಸಾತ್ಮಕತೆಗೆ ತಿರುಗಿದೆ. ನಿನ್ನೆ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಉಗ್ರತೆಯನ್ನು ಮೆರೆದಿದ್ದಾರೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಇದರಿಂದಾಗಿ ಪಶ್ಚಿಮ ಬಂಗಾಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.ಕಳೆದ ದಿನ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಸುತಿ ಮತ್ತು ಶಂಶೇರ್‌ಗಂಜ್ ಪ್ರದೇಶಗಳಲ್ಲಿ ಪ್ರತಿಭಟನೆ ಉಗ್ರ ಸ್ವರೋಪ ಪಡೆದುಕೊಂಡಿತ್ತು. ಪೊಲೀಸರು ಪ್ರತಿಭಟನಾಕಾರರನ್ನು ಎಷ್ಟೇ ಪ್ರಯತ್ನಪಟ್ಟರೂ ಕೂಡ ಹತ್ತಿಕ್ಕಲು ಸಾಧ್ಯವಾಗದೇ ವಾತಾವರಣವೇ ಬಿಗುವಾಗಿತ್ತು.
ಈ ಸಂದರ್ಭದಲ್ಲಿ ಆಕ್ರೋಶಗೊಂಡ ಪ್ರತಿಭಟನಾ ನಿರತರನ್ನು ಹತ್ತಿಕ್ಕಲು ಬಂದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಅಲ್ಲದೆ ವಾಹನ ಹಾಗೂ ರೈಲು ಸಂಚಾರಕ್ಕೆ ಅಡ್ಡಿಪಡಿಸಿದ್ದು ಕಂಡು ಬಂದಿದೆ.
ಈ ಸಂದರ್ಭದಲ್ಲಿ ಸುಮಾರು 10 ಪೊಲೀಸರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನೆಯ (anti waqf protest wb) ಬಗ್ಗೆ ಮಾತನಾಡಿದ ಬಂಗಾಳ ಪೊಲೀಸರು ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸುತಿ ಮತ್ತು ಶಂಶೇರ್‌ಗಂಜ್ ಪ್ರದೇಶಗಳಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ ಎಂದಿದ್ದಾರೆ.
ಪೊಲೀಸರು ಗುಂಪನ್ನು ಚದುರಿಸಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರವನ್ನು ಪುನಃ ಆರಂಭಗೊಂಡಿದೆ. ಹಿಂಸಾಚಾರದಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.ದುಷ್ಕರ್ಮಿಗಳನ್ನು ಹಿಡಿಯಲು ಬಲೆ ಬೀಸಲಾಗಿದೆ.
ಅಲ್ಲದೆ ವದಂತಿಗಳನ್ನು ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜನರು ಶಾಂತಿ ಕಾಪಾಡಬೇಕು ಮತ್ತು ವದಂತಿಗಳಿಗೆ ಕಿವಿಗೊಡಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ.
ಅಷ್ಟಕ್ಕೂ ಶುಕ್ರವಾರದ ಪ್ರಾರ್ಥನೆಯ ನಂತರ ಕೆಲವು ಜನರು ಶಂಶೇರ್‌ಗಂಜ್‌ನಲ್ಲಿ (Shasherganj) ಜಮಾಯಿಸಿ ವಕ್ಫ್ ಕಾಯ್ದೆಯ ವಿರುದ್ಧ ಪ್ರತಿಭಟಿಸಲು ಪ್ರಾರಂಭಿಸಿದರು. ಅವರು ರಾಷ್ಟ್ರೀಯ ಹೆದ್ದಾರಿ-12 ಅನ್ನು ತಡೆದರು. ಕೆಲವರು ಪೊಲೀಸ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದಾಗ ಪ್ರತಿಭಟನೆ ಹಿಂಸಾತ್ಮಕವಾಗಿ ಮಾರ್ಪಟ್ಟಿತು.
ಇದು ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆಗೆ ಕಾರಣವಾಯಿತು. ಮತ್ತೊಂದೆಡೆ ಮಾಲ್ಡಾದಲ್ಲಿ ಪ್ರತಿಭಟನಾಕಾರರು ರೈಲ್ವೆ ಹಳಿಗಳ ಮೇಲೆ ಧರಣಿ ನಡೆಸಿದರು. ಇದರಿಂದಾಗಿ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಯಿತು. ಇದರಿಂದಾಗಿ ಪೂರ್ವ ರೈಲ್ವೆಯ ಫರಕ್ಕಾ-ಅಜಿಮ್‌ಗಂಜ್ ವಿಭಾಗದಲ್ಲಿ ರೈಲು ಸಂಚಾರವೂ ಅಸ್ತವ್ಯಸ್ತಗೊಂಡಿದೆ.
ಇದನ್ನು ಓದಿ : ಕರ್ನಾಟಕ ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ದ್ವಿತೀಯ, ಯಾದಗಿರಿಗೆ ಕೊನೆಯ ಸ್ಥಾನ!
ಈ ಬಗ್ಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ X ನಲ್ಲಿ (Himanth Biswa Sarma) ಬರೆದುಕೊಂಡಿದ್ದಾರೆ. ಮುಸ್ಲಿಂ ಜನಸಂಖ್ಯೆ ಸುಮಾರು 40% ರಷ್ಟಿದ್ದು, ವಕ್ಫ್ ಕಾಯ್ದೆಯ ವಿರುದ್ಧದ ಪ್ರತಿಭಟನೆಗಳು ಶಾಂತಿಯುತವಾಗಿ ನಡೆದಿವೆ. ಪೊಲೀಸರು ಅಲ್ಲಿ ಈಗಾಗಲೇ ಸನ್ನದ್ಧರಾಗಿದ್ದಾರೆ. ಆದ್ದರಿಂದ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದಿದ್ದಾರೆ.