ರಾಜಸ್ಥಾನದಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಗಾಂಧಿ ಕುಟುಂಬವೇಕೆ ಮೌನ ವಹಿಸಿದೆ : ಅನುರಾಗ ಠಾಕೂರ್!

anurag thakur

ಕಾಂಗ್ರೆಸ್(Congress) ಆಡಳಿತವಿರುವ ರಾಜಸ್ಥಾನದಲ್ಲಿ ಸರಣಿ ಸಾಮೂಹಿಕ ಅತ್ಯಾಚಾರ(Gang Rape) ಪ್ರಕರಣಗಳು ವರದಿಯಾಗುತ್ತಿವೆ.

ಮಹಿಳೆಯರ ಮೇಲೆ ದೌರ್ಜನ್ಯ ಮತ್ತು ಕೊಲೆಗಳಂತ ಭೀಕರ ಘಟನೆಗಳು ನಡೆಯುತ್ತಿದ್ದರು, ಕಾಂಗ್ರೆಸ್ ಅಧ್ಯಕ್ಷೆ(Congress President) ಸೋನಿಯಾ ಗಾಂಧಿ(Sonia Gandhi), ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ(Priyanka Gandhi), ರಾಹುಲ್ ಗಾಂಧಿ(Rahul Gandhi) ಯಾಕೆ ಮೌನವಹಿಸಿದ್ದಾರೆ? ಎಂದು ಕೇಂದ್ರ ಸಚಿವ ಅನುರಾಗ ಠಾಕೂರ್(Anurag Takur) ಗಾಂಧಿ ಕುಟುಂಬದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಕಳೆದ ಕೆಲ ತಿಂಗಳಿಂದ ರಾಜಸ್ಥಾನದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿವೆ. ಆದರು ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಆರೋಪಿಗಳನ್ನು ರಕ್ಷಣೆ ಮಾಡುವ ಮೂಲಕ ಆರೋಪಿಗಳಿಗೆ ಮತ್ತಷ್ಟು ಕುಮ್ಮಕ್ಕು ನೀಡುತ್ತಿದೆ. ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನದಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದರೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜಸ್ಥಾನಕ್ಕೆ ಭೇಟಿ ನೀಡಿಲ್ಲ.

ತನ್ನದೇ ಪಕ್ಷದ ಆಡಳಿತದಲ್ಲಾಗುತ್ತಿರುವ ಘಟನೆಗಳ ಬಗ್ಗೆ ಮಾತನಾಡುತ್ತಿಲ್ಲ. ಇಡೀ ಗಾಂಧಿ ಕುಟುಂಬ ಸುಧೀರ್ಘ ರಜೆ ಮೇಲೆ ತೆರಳಿದ್ದಾರೆಯೇ..? ಎಂದು ವ್ಯಂಗ್ಯವಾಡಿದರು. ಇತ್ತೀಚೆಗೆ ರಾಜಸ್ಥಾನದ ದೌಸಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಇಬ್ಬರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಹತ್ಯೆ ಮಾಡಿದ್ದರು. ಈ ಘಟನೆ ಮರೆಮಾಚುವ ಮುಂಚೆಯೇ ಜೈಪುರ್ ಜಿಲ್ಲೆಯ ಬಸ್ಸಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿದೆ.

ಈ ಎಲ್ಲ ಘಟನೆಗಳನ್ನು ಗಮನಿಸಿದರೆ ರಾಜಸ್ಥಾನದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿವೆ. ಆದರೆ ಕಾಂಗ್ರೆಸ್ ನಾಯಕತ್ವ ಮಾತ್ರ ಈ ಘಟನೆಗಳ ಕುರಿತು ಮೌನ ವಹಿಸಿರುವುದು ದುರದೃಷ್ಟಕರ. ರಾಜ್ಯ ಸರ್ಕಾರ ಇನ್ನಾದರು ಎಚ್ಚೆತ್ತುಕೊಂಡು ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು. ಪ್ರಿಯಾಂಕಾ ಗಾಂಧಿ ರಾಜಸ್ತಾನಕ್ಕೆ ಭೇಟಿ ನೀಡಿ ಮಹಿಳೆಯರ ರಕ್ಷಣೆ ಕುರಿತು ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದರು.

Exit mobile version