Visit Channel

ಹಾಜಬ್ಬ ಅವರನ್ನು ಶ್ಲಾಘಿಸಿದ ಅನುಷ್ಕಾ ಶರ್ಮಾ

ನವದೆಹಲಿಭಾರತದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಸಮಾಜ ಸೇವಕ ಹರೇಕಳ ಹಾಜಬ್ಬ ಅವರ ಪ್ರಯತ್ನವನ್ನು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಶ್ಲಾಘಿಸಿದ್ದಾರೆ.

68 ವರ್ಷದ ಹಣ್ಣು ಮಾರಾಟಗಾರ ಹಾಜಬ್ಬ ತಮ್ಮ ಗ್ರಾಮದಲ್ಲಿ ಶಾಲೆ ನಿರ್ಮಿಸುವ ಮೂಲಕ ಗ್ರಾಮೀಣ ಶಿಕ್ಷಣದಲ್ಲಿ ಕ್ರಾಂತಿ ಯನ್ನು ತಂದಿದ್ದಕ್ಕಾಗಿ ಪ್ರಶಸ್ತಿ ಪಡೆದಿದ್ದಾರೆ.

ಅನುಷ್ಕಾ ಅವರು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ಇನ್ ಸ್ಟಾಗ್ರಾಮ್ ನಲ್ಲಿ ಹಾಜಬ್ಬರನ್ನು ಪ್ರಶಂಸಿದ್ದಾರೆ . ಸಮಾಜಕ್ಕೆ ಹಾಜಬ್ಬ ಅವರ ಕೊಡುಗೆಯನ್ನು ಗುರುತಿಸಿ ಅಭಿನಂದನೆ ಸಲ್ಲಿಸಿದ್ದಾರೆ

ಅನುಷ್ಕಾ ಸ್ವತಃ ಪ್ರಾಣಿ ಹಕ್ಕು ಕಾರ್ಯಕರ್ತೆಯಾಗಿದ್ದು, ವಿವಿಧ ಸಂದರ್ಭಗಳಲ್ಲಿ ಸಮಸ್ಯೆಗಳಿಗೆ ಧ್ವನಿ ಎತ್ತಿದ್ದಾರೆ. ಅನುಷ್ಕಾ ಹಾಗೂ ಅವರ ಪತಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಮುಂಬೈನಲ್ಲಿ ಪ್ರಾಣಿಗಳ ಆಶ್ರಯ ನಡೆಸುತ್ತಿದ್ದಾರೆ.

ಕೋವಿಡ್ -19 ಸಂತ್ರಸ್ತರಿಗೆ ಸಹಾಯ ಮಾಡಲು ನಿಧಿ ಸಂಗ್ರಹಿಸಲು ಇಬ್ಬರೂ ಪ್ರಯತ್ನಗಳನ್ನು ಮಾಡಿದ್ದರು. ಅವರಿಬ್ಬರು ತಮ್ಮ ಚಾರಿಟಿಗೆ ಧನಸಹಾಯ ವನ್ನೂ ಮಾಡಿದ್ದರು.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.