ಜಮ್ಮು-ಕಾಶ್ಮೀರದಲ್ಲಿ ಬೇರೆ ರಾಜ್ಯದವರು ಮತ ಚಲಾಯಿಸಬಹುದು ; ಕಣಿವೆ ರಾಜ್ಯದ ಹೊಸ ಚುನಾವಣಾ ನಿಯಮಗಳ ವಿವರ ಇಲ್ಲಿದೆ

JK

ಶ್ರೀನಗರ : ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ(Jammu & Kashmir) ಹೊಸ ಚುನಾವಣಾ ನಿಯಮಗಳನ್ನು ಚುನಾವಣಾ ಆಯೋಗ ಜಾರಿಗೊಳಿಸಿದೆ. ಸ್ಥಳೀಯ ಮೂಲಭೂತವಾದವನ್ನು ನಿಯಂತ್ರಿಸುವ ಮತ್ತು ಪ್ರಜಾತಾಂತ್ರಿಕ ವ್ಯವಸ್ಥೆಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಕ್ರಮವಾಗಿದೆ ಎನ್ನಲಾಗಿದೆ.

ಉದ್ಯೋಗಿಗಳು, ವಿದ್ಯಾರ್ಥಿಗಳು, ಕಾರ್ಮಿಕರು, ಅಥವಾ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಮಾನ್ಯವಾಗಿ ವಾಸಿಸುವ ಹೊರಗಿನವರು ಸೇರಿದಂತೆ ಸ್ಥಳೀಯರಲ್ಲದವರು ಅಂದರೆ ಬೇರೆ ರಾಜ್ಯದವರು ತಮ್ಮ ಹೆಸರನ್ನು ಮತದಾನ ಪಟ್ಟಿಯಲ್ಲಿ ನೋಂದಾಯಿಸಲು ಮತ್ತು ಮತ(Vote) ಚಲಾಯಿಸಲು ಅವಕಾಶ ನೀಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯ ಚುನಾವಣಾ ಅಧಿಕಾರಿ ಹಿರ್ದೇಶ್ ಕುಮಾರ್ ಅವರು ಪ್ರಕಟಣೆ ಹೊರಡಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸುವ ಅಥವಾ ಕೆಲಸ ಮಾಡುವ ಸ್ಥಳೀಯರಲ್ಲದವರು ಸೇರಿದಂತೆ ಯಾವುದೇ ಭಾರತೀಯ ನಾಗರಿಕರು ತಮ್ಮ ಹೆಸರನ್ನು ಮತದಾನ ಪಟ್ಟಿಯಲ್ಲಿ ಸೇರಿಸಬಹುದು. ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಬಹುದು ಎಂದು ಹಿರ್ದೇಶ್ ಕುಮಾರ್ ಹೇಳಿದ್ದಾರೆ. ಅದೇ ರೀತಿ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಕೇಂದ್ರಗಳಲ್ಲಿ ನಿಯೋಜಿಸಲಾದ ಸಶಸ್ತ್ರ ಪಡೆಗಳ ಸಿಬ್ಬಂದಿ ಕೂಡ ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಬಹುದು ಎಂದು ಅವರು ಹೇಳಿದ್ದಾರೆ.

ಭಾರತದ ಇತರೆ ರಾಜ್ಯಗಳಲ್ಲಿ ಇರುವಂತೆ ಒರ್ವ ವ್ಯಕ್ತಿ ಭಾರತದ ಯಾವುದಾದರೂ ರಾಜ್ಯದಲ್ಲಿ ತನ್ನ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡು ಮತ ಚಲಾಯಿಸಬಹುದು. ಆದರೆ ಆತ ಆ ಪ್ರದೇಶದಲ್ಲಿ ಸ್ಥಳೀಯ ನಿವಾಸಿಯಾಗಿರಬೇಕು. ಭಾರತದ ಯಾವುದಾದರೂ ಪ್ರದೇಶದಲ್ಲಿ ಮತ ಚಲಾಯಿಸಲು ಆತನಿಗೆ ಅವಕಾಶ ನೀಡಲಾಗುತ್ತದೆ. ಈ ನಿಯಮವನ್ನು ಇದೀಗ ಕಣಿವೆ ರಾಜ್ಯದಲ್ಲಿಯೂ ಜಾರಿಗೆ ತರಲಾಗಿದೆ. ಆದರೆ ಈ ನಿಯಮವನ್ನು ಜಮ್ಮು ಮತ್ತು ಕಾಶ್ಮೀರದ ಪ್ರಾದೇಶಿಕ ಪಕ್ಷಗಳು ಟೀಕಿಸಿವೆ.

Exit mobile version