ಅಪರಿಚಿತ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮುಕಾಶ್ಮೀರ, ಡಿ. 26: ಶೋಪಿಯಾನ್ ಜಿಲ್ಲೆಯ ಕನಿಗಂ ಪ್ರದೇಶದಲ್ಲಿ ನಡೆದ ಭಾರತೀಯ ಸೇನೆಯ ಎನ್ ಕೌಂಟರ್‌ನಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರನ್ನು ಹೊಡೆದುರುಳಿಸಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ. ಇದೇ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಪ್ರತಿ ದಾಳಿ ನಡೆಸಿದ ಪಡೆಗಳು ಎನ್‌ ಕೌಂಟರ್‌ಗೆ ಇಬ್ಬರು ಬಲಿಯಾಗಿದ್ದಾರೆ. ಇನ್ನೂ ಉಗ್ರರ ಶೋಧಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Exit mobile version