Visit Channel

ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡಿದ್ದ ಚಿರತೆ ಸೆರೆ

WhatsApp Image 2020-12-28 at 12.58.33 PM

ಮೈಸೂರು, ಡಿ. 28: ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡು ನರಳುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.

ಮೈಸೂರಿನ ಚಾಮುಂಡಿಬೆಟ್ಟದ ದೇವಿ ಕೆರೆ ಬಳಿ ಘಟನೆ ನಡೆದಿದ್ದು ಅಪರಿಚಿತ ವಾಹನ ಡಿಕ್ಕಿಯಾಗಿ ಗಾಯಗೊಂಡಿದ್ದ ಚಿರತೆಯನ್ನು ಅರವಳಿಕೆ ಮದ್ದು ನೀಡಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಆನೆ ವೈದ್ಯ ಡಾ.ನಾಗರಾಜ್ ನೇತೃತ್ವದಲ್ಲಿ ಚಿರತೆ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಅರವಳಿಕೆ ಮದ್ದು ನೀಡಿ ಚಿರತೆ ಸೆರೆ ಹಿಡಿದಿದ್ದಾರೆ.

ರಾತ್ರಿ ಅಥವಾ ಮುಂಜಾನೆ ವೇಳೆ ಘಟನೆ ನಡೆದಿರಬಹುದು. ಚಿರತೆಯ ಮೇಲೆ ಯಾವುದೇ ಗಾಯಗಳು ಆಗಿಲ್ಲ. ವಾಹನಗಳ ಡಿಕ್ಕಿಯು ಆಗಿರಬಹುದು ಅಥವಾ ಪ್ರಾಣಿಗಳಿಗೆ ಕೆಲವೊಮ್ಮೆ ಪಾರ್ಶ್ವವಾಯು ಆಗಿರುವ ಸಾಧ್ಯತೆ ಗಳಿದೆ. ಎಕ್ಸ್ ರೇ ನಂತರವಷ್ಟೇ ಕಾರಣ ತಿಳಿಯಬಹುದು. ಮುಂದಿನ ಹಂತದಲ್ಲಿ ನಿಖರ ಕಾರಣ ಗೊತ್ತಾಗಲಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.