KPSC : ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

Bengaluru: ಕರ್ನಾಟಕ ಲೋಕಸೇವಾ ಆಯೋಗವು ವಾಣಿಜ್ಯ ತೆರಿಗೆಗಳ ಇಲಾಖೆಯ ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದೀಗ ಕರ್ನಾಟಕ ಲೋಕಸೇವಾ ಆಯೋಗವು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಸೆಪ್ಟೆಂಬರ್ (September) 1 ರಂದು ಅಧಿಸೂಚಿಸಿ, ಅರ್ಜಿ ಆಹ್ವಾನಿಸಿದ್ದು, ಆನ್ಲೈನ್ (Online) ಅರ್ಜಿಗೆ 1 ತಿಂಗಳು ಅವಧಿ ವಿಸ್ತರಣೆ ಮಾಡಿದ್ದು, ಪರೀಕ್ಷೆಗೆ ಪರಿಷ್ಕೃತ ದಿನಾಂಕಗಳನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಹೊಸ ವೇಳಾಪಟ್ಟಿಯಂತೆ ಅರ್ಜಿ ಸಲ್ಲಿಸಬಹುದು.

ನೇಮಕಾತಿ ಪ್ರಾಧಿಕಾರ: ಕರ್ನಾಟಕ ಲೋಕಸೇವಾ ಆಯೋಗ
ಉದ್ಯೋಗ ಇಲಾಖೆ : ವಾಣಿಜ್ಯ ತೆರಿಗೆ ಇಲಾಖೆ
ಹುದ್ದೆಗಳ ಸಂಖ್ಯೆ : 230
ವೇತನ ಶ್ರೇಣಿ : ರೂ.33,450-62,600.
ಶೈಕ್ಷಣಿಕ ಅರ್ಹತೆ : ಅರ್ಥಶಾಸ್ತ್ರ / ಗಣಿತ / ಕಾಮರ್ಸ್ ಪದವಿ

ಪರೀಕ್ಷಾ ದಿನಾಂಕಗಳು:
ಕನ್ನಡ ಭಾಷಾ ಪರೀಕ್ಷೆ ದಿನಾಂಕ : 20-01-2024
ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : 21-01-2024

ಪರೀಕ್ಷಾ ದಿನಾಂಕಗಳು: 15 (HK Posts)
ಕನ್ನಡ ಭಾಷಾ ಪರೀಕ್ಷೆ ದಿನಾಂಕ : 06-01-2024
ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : 07-01-2024

ಅರ್ಜಿ ಶುಲ್ಕ :
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ 600 ರೂ.ಗಳು
ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 300 ರೂ.ಗಳು
ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ.ಗಳು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ.

ವಯೋಮಿತಿ :
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ / ಪ್ರವರ್ಗ-1 40 ವರ್ಷ.

ಅರ್ಜಿ ಹಾಕುವ ವಿಧಾನ
1ನೇ ಹಂತ : ಪ್ರೊಫೈಲ್ ಕ್ರಿಯೇಟ್(Profile Creation)
2ನೇ ಹಂತ : ಅಪ್ಲಿಕೇಶನ್ ಸಬ್ಮಿಷನ್(Application Submission)
3ನೇ ಹಂತ : ಅಪ್ಲಿಕೇಶನ್ ಶುಲ್ಕ ಪಾವತಿ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 01-09-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ 230 (RPC Posts) : 31-10-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ 15 (HK Posts) : 30-10-2023

Exit mobile version