ಹಾಸನ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಇದ್ದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಭರ್ತಿಗೆ ಕಳೆದ ತಿಂಗಳು ಅಧಿಸೂಚನೆ ಬಿಡುಗಡೆ ಮಾಡಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಹಾಸನ ಜಿಲ್ಲೆಯಾದ್ಯಂತ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಕ್ಕೆ ಕಳೆದ ತಿಂಗಳು ಅರ್ಜಿ ಆಹ್ವಾನಿಸಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 13 ಕೊನೆ ದಿನವಾಗಿದ್ದು, ಆಸಕ್ತರು ಅರ್ಜಿಸಲ್ಲಿಸಬಹುದಾಗಿದೆ
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು, ಪ್ರಮುಖ ದಿನಾಂಕಗಳು, ಇತರೆ ಮಾಹಿತಿ ಈ ಕೆಳಗಿನಂತಿದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 14-09-2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 13-10-2021
ಅರ್ಜಿ ಸಲ್ಲಿಸಲು ವೆಬ್ಸೈಟ್ : www.anganwadirecruit.kar.nic.in
ವಿದ್ಯಾರ್ಹತೆ
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿಸಲ್ಲಿಸಲು SSLC ಪಾಸ್ ಆಗಿರಬೇಕು.
ಅಂಗನವಾಡಿ ಸಹಾಯಕಿಯರ ಹುದ್ದೆಗೆ ಕನಿಷ್ಟ 4ನೇ ತರಗತಿ ಪಾಸ್ ಆಗಿರಬೇಕು. ಗರಿಷ್ಟ 9ನೇ ತರಗತಿ ತೇರ್ಗಡೆ ಹೊಂದಿರುವವರು ಸಹ ಅರ್ಜಿ ಸಲ್ಲಿಸಬಹುದು.
ಯಾವುದೇ ಹುದ್ದೆಗಳಿಗೆ 10 ನೇ ತರಗತಿ ನಂತರ ಹೆಚ್ಚಿನ ಶಿಕ್ಷಣ ಪಡೆದವರು ಅರ್ಜಿ ಸಲ್ಲಿಸಲು ಅವಕಾಶ ಇಲ್ಲ.