Visit Channel

‘ಶಾರ್ದೂಲ’ ಗೀತೆಗೆ ಭರಪೂರ ಮೆಚ್ಚುಗೆ

9459bc4c-7483-4fc5-bbea-319dd9ec5f7c

ಅಮೋಘ ಕಂಠದಿಂದ ಕೇಳುಗರ ಮನಗೆದ್ದಿರುವ ಸಂಚಿತ್ ಹೆಗಡೆ ಅವರು ‘ಶಾರ್ದೂಲ’ ಚಿತ್ರದ “ಒಂದು ಸಣ್ಣ ತಪ್ಪನ್ನು ಮಾಡಿ ಬಿಡಲೇ ನಾನು..” ಗೀತೆ ಕೂಡ ಜನಪ್ರಿಯತೆಯ ಪಟ್ಟಿ ಸೇರಿದೆ.

ಶಾರ್ದೂಲ ಚಿತ್ರದ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗಷ್ಟೇ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿತ್ತು. ನಿರ್ದೇಶಕ
ಅರವಿಂದ್ ಕೌಶಿಕ್ ಅವರೇ ಬರೆದಿರುವ ಈ ಹಾಡಿಗೆ ಸತೀಶ್ ಬಾಬು ಸಂಗೀತ ನೀಡಿದ್ದಾರೆ. ಭೈರವ ಸಿನಿಮಾಸ್ ಮತ್ತು ಸಿ ವಿ ಆರ್ ಸಿನಿಮಾಸ್ ಲಾಂಛನದಲ್ಲಿ ರೋಹಿತ್ ಶಾಂತಪ್ಪ ಹಾಗೂ ಕಲ್ಯಾಣ್ ಸಿ ನಿರ್ಮಿಸಿರುವ ಈ ಚಿತ್ರ ಆಗಸ್ಟ್ ವೇಳೆಗೆ ತೆರೆಗೆ ಬರುವ ಸಾಧ್ಯತೆಯಿದೆ.
ಥ್ರಿಲ್ಲರ್ ಕಥಾಹಂದರ ಹೊಂದಿದೆ.

ಈ ಹಿಂದೆ ನಮ‌್ ಏರಿಯಲ್ಲೊಂದು‌ ದಿನ, ತುಘಲಕ್ ಹಾಗೂ ಹುಲಿರಾಯ ಚಿತ್ರಗಳನ್ನು ಅರವಿಂದ್ ಕೌಶಿಕ್ ನಿರ್ದೇಶಿಸಿರುವ ಅರವಿಂದ್ ಕೌಶಿಕ್
ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಶಾರ್ದೂಲ ಎನ್ನುವ ಈ ಚಿತ್ರಕ್ಕೆ ದೆವ್ವ ಇರಬಹುದಾ? ಎಂಬ ಅಡಿಬರಹವಿದೆ.
ವೈ.ಜಿ.ಆರ್ ಮನು ಛಾಯಾಗ್ರಹಣ, ಸತೀಶ್ ಬಾಬು ಸಂಗೀತ ನಿರ್ದೇಶನ, ಶಿವರಾಜ್ ಮೇಹು ಸಂಕಲನ ಹಾಗು ಮಾಸ್ ಮಾದ, ವೈಲೆಂಟ್ ವೇಲು ಮತ್ತು ಅಲ್ಟಿಮೇಟ್ ಶಿವು ಅವರ‌ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಪಿ.ಯು.ಸಿ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಚೇತನ್ ಚಂದ್ರ, ನಿರ್ದೇಶಕ, ನಟ ರವಿತೇಜ, ಕೃತ್ತಿಕಾ ರವೀಂದ್ರ, ಐಶ್ವರ್ಯ ಪ್ರಸಾದ್, ಕಲ್ಯಾಣ್, ಹೃಷಿಕೇಶ್, ಮಹೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.