ಗೃಹ ಮಂತ್ರಿಗಳ ವಿವಾದಾತ್ಮಕ ಹೇಳಿಕೆಗೆ ಸಾರ್ವಜನಿಕರಿಂದ ಆಕ್ರೋಶ

ಮೈಸೂರು ಆ 26 : ಮೈಸೂರು ನಗರದ ಹೆಲಿಪ್ಯಾಡ್ ಬಳಿಯ ವಾಟರ್ ಟ್ಯಾಂಕ್​​​​ನ ಗುಡ್ಡದ ಬಳಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು ಈ ಬಗ್ಗೆ ರಾಜಕೀಯ ಪಕ್ಷಗಳು ಅರೋಪ ಪ್ರತ್ಯಾರೋಪದಲ್ಲಿ ತೊಡಗಿದೆ ಜೊತೆಗೆ ಗೃಹ ಮಂತ್ರಿಗಳ ಹೇಳಿಕೆಗಳು ಕೂಡ ವಿವಾದವನ್ನು ಎಬ್ಬಿಸಿದೆ.

ಗೃಹ ಮಂತ್ರಿಗಳ ಹೇಳಿಕೆಗೆ ಖಂಡನೆ : ಯುವತಿ ಮತ್ತು ಯುವಕ ಆ ಸಮಯದಲ್ಲಿ ಅಲ್ಲಿಗೆ ಹೋಗಿದ್ದೇ ತಪ್ಪು, ಯುವತಿ ಸಂಜೆ 7.30 ಕ್ಕೆ ಅಲ್ಲಿಗೆ ಹೋಗಬಾರದಿತ್ತು ಎಂದು ಬೇಜವಾಬ್ದಾರಿಯುತವಾದ ಹೇಳಿಕೆಯನ್ನು ನೀಡಿದ್ದಾರೆ.  ಸಂಜೆ ನಂತರ ಮಹಿಳೆ ಮನೆಯಿಂದ ಹೊರಗೆ ಬಂದಿದ್ದೇ ತಪ್ಪು ಎಂಬಂತಹ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಗೃಹ ಸಚಿವರ ವಿರುದ್ದ ಭಾರೀ ವಿರೋಧ ವ್ಯಕ್ತವಾಗಿದೆ. ಇದೊಂದೆ ಹೇಳಿಕೆಯಲ್ಲದೆ ಕಾಂಗ್ರೆಸಿಗರ ಮೇಲೂ ವಾಗ್ದಾಳಿ ಮಾಡಿರುವ ಅವರು ಬಿಜೆಪಿ ಸರ್ಕಾರಯಿದೆ ಎಂಬ ಕಾರಣಕ್ಕೆ ಕಾಂಗ್ರೆಸ್ ಅರ್ಥವಿಲ್ಲದೆ ಆರೋಪಗಳನ್ನು ಮಾಡುತ್ತಿದೆ ಈ ರೀತಿಯ ರಾಜಕೀಯ ಲಾಭ ಪಡೆಯುವುದು ಸರಿಯಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ, ಗೃಹ ಸಚಿವರು, ಸರ್ಕಾರ ಮತ್ತು ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ನವರು ಈಗಾಗಲೇ ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಆರಗ ಜ್ಞಾನೇಂದ್ರ ಮೈಸೂರು ನಗರದ ಹೊರವಲಯದಲ್ಲಿ ಅತ್ಯಾಚಾರವಾಗಿದ್ದು, ಕಾಂಗ್ರೆಸ್ ನವರು ಗೃಹ ಸಚಿವರನ್ನು ಅತ್ಯಾಚಾರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಮತ್ತೊಂದು ಬೇಜಾವಬ್ದಾರಿಯುತ ಹೇಳಿಕೆ ನೀಡಿದ್ದು ಇದಕ್ಕೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ.

Exit mobile version