Visit Channel

ರಾಜ್ಯದ ಪೊಲೀಸ್‌ ಸಿಬ್ಬಂದಿಗಳಿಗಾಗಿ ಮನೆ ನಿರ್ಮಾಣ – ಆರಗ ಜ್ಞಾನೇಂದ್ರ

ಬೆಂಗಳೂರು ಡಿ 18 : ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್‌ ಸಿಬ್ಬಂದಿಗಳ ಅನುಕೂಲಕ್ಕಾಗಿ ರಾಜ್ಯಾದ್ಯಂತ  10 ಸಾವಿರ ಮನೆ ನಿರ್ಮಾಣ ಮಾಡಲಾಗುವುದು ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ಇಂದು ವಿಧಾನಸಭೆಯಲ್ಲಿ, ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಶಿವಲಿಂಗೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜ್ಯದ ಪೊಲೀಸರು, ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ ಸೌಲಭ್ಯ ಒದಗಿಸಲು,ರಾಜ್ಯ ಸರಕಾರ ಬದ್ಧವಾಗಿದೆ. ರಾಜ್ಯದಲ್ಲಿ “ಪೊಲೀಸ್-ಗೃಹ ೨೦೨೫’ ಎಂಬ ಯೋಜನೆಯನ್ನು ಸರಿಸುಮಾರು ಹತ್ತು ಸಾವಿರ ವಸತಿ ಗೃಹಗಳನ್ನು, ಪೊಲೀಸ್ ಸಿಬ್ಬಂದಿಗಳಿಗೆ ಇನ್ನೂ ಐದು ವರ್ಷಗಳಲ್ಲಿ ಕಟ್ಟಿಕೊಡಲಾಗುವುದು ಎಂದು ಮಾಹಿತಿ ನೀಡಿದರು.

 ಸದಸ್ಯರು ಎತ್ತಿದ, ಶಿಥಿಲಾವಸ್ಥೆಯಲ್ಲಿರುವ ಗಂಡಸಿ ಪೊಲೀಸ್ ಠಾಣೆ ಕುರಿತ ಪ್ರಶ್ನೆಗೆ ಸಚಿವರು “ರಾಜ್ಯದಲ್ಲಿ ಸುಮಾರು ಒಂದು ನೂರು ಪೊಲೀಸ್ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದ್ದು, ಹಳೆಯ ಹಾಗೂ ಶಿಥಿಲಗೊಂಡಿರುವ ಕಟ್ಟಡಗಳನ್ನು ದುರಸ್ಥಿ ಗೊಳಿಸಲಾಗುವುದೂ” ಎಂದು ಸಚಿವರು ತಿಳಿಸಿದರು.

“ಪೊಲೀಸ್ ಸಿಬ್ಬಂದಿಗಳಿಗೆ, ಕರ್ತವ್ಯ ನಿರ್ವಹಿಸಲು ಉತ್ತಮ ವಾತಾವರಣ ಹಾಗೂ ವಾಸಿಸಲು ಸುಸಜ್ಜಿತ ಮನೆಯನ್ನು ಒದಗಿಸುತ್ತೇವೆ” ಎಂದು ಸಚಿವರು ಸದನಕ್ಕೆ ತಿಳಿಸಿದರು.

Latest News

Russia
ದೇಶ-ವಿದೇಶ

ಜನಸಂಖ್ಯೆ ಹೆಚ್ಚಳಕ್ಕೆ 10 ಮಕ್ಕಳಿಗೆ ಜನ್ಮ ನೀಡಿದ್ರೆ 13 ಲಕ್ಷ ಬಹುಮಾನ : ರಷ್ಯಾ ಅಧ್ಯಕ್ಷ ಪುಟಿನ್‌ ಘೋಷಣೆ

ರಷ್ಯಾದ ರಾಜಕೀಯ(Russia Politics) ಮತ್ತು ಭದ್ರತಾ ತಜ್ಞ ಡಾ ಜೆನ್ನಿ ಮ್ಯಾಥರ್ಸ್, ಟೈಮ್ಸ್ ರೇಡಿಯೊದಲ್ಲಿ ಈ ಕುರಿತು ಮಾತನಾಡಿ, “ಮದರ್ ಹೀರೋಯಿನ್” ಎಂದು ಕರೆಯಲ್ಪಡುವ ಬಹುಮಾನ ಯೋಜನೆ

Dakshina Kannada
ರಾಜ್ಯ

ವಿಜಯಟೈಮ್ಸ್ ಇಂಪ್ಯಾಕ್ಟ್ ; ಬಂಟ್ವಾಳ ಸೇತುವೆಯ ದುಸ್ಥಿತಿ ನೋಡಲು ದಿಢೀರನೇ ಬಂದ ಅಧಿಕಾರಿಗಳು!

ಕಳಪೆ ಕಾಮಗಾರಿ ದುರಂತದ ಬಗ್ಗೆ ವಿಜಯಟೈಮ್ಸ್ ತಂಡ ಮಾಡಿದ್ದ ವರದಿಗೆ ಅಧಿಕಾರಿಗಳು ಈಗ ದಿಢೀರ್ ಎಚ್ಚೆತ್ತುಕೊಂಡಿದ್ದಾರೆ.

IT Minister
ದೇಶ-ವಿದೇಶ

5G ಬಿಡುಗಡೆಗೆ ತಯಾರಿ ಮಾಡಿಕೊಳ್ಳಿ : ಟೆಲಿಕಾಂ ಕಂಪನಿಗಳಿಗೆ ಐಟಿ ಸಚಿವ ಅಶ್ವಿನಿ ವೈಷ್ಣವ್ ಸೂಚನೆ

ಇನ್ನು ಏರ್ಟೆಲ್(Airtel) ಮತ್ತು ಜಿಯೋ(Jio) ಈ ತಿಂಗಳ ಕೊನೆಯಲ್ಲಿ ತಮ್ಮ 5G ಸೇವೆಗಳ ಮೊದಲ ಹಂತವನ್ನು ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.