ಮೈಸೂರು, ಡಿ. 18: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದಡಿ ಎಸಿಎಫ್ ಶಿವಶಂಕರ್ ಅವರ ನಿವಾಸ ಕಚೇರಿ ಸೇರಿದಂತೆ ಒಟ್ಟು 5 ಕಡೆ ಎಸಿಬಿ ದಾಳಿ ನಡೆಸಿದೆ.
ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಶುಕ್ರವಾರ ಬೆಳಿಗ್ಗೆ ಶಿವಶಂಕರ್ ನಿವಾಸ, ಕಚೇರಿ ಸೇರಿ ಹಲವು ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದು, ದಾಖಲೆಗಳನ್ನು ಸಂಗ್ರಹಿಸಿದ್ದಾರೆ.
ಶಿವಶಂಕರ್ ಅವರು ಅರಣ್ಯ ಇಲಾಖೆಯ ಸ್ಯಾಂಡಲ್ ಡಿಪೊದಲ್ಲಿ ಎಸಿಎಫ್ ಆಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿರುವ ಇವರ ಮನೆಯ ಮೇಲೆ ಎಸಿಬಿಯ 40ಕ್ಕೂ ಹೆಚ್ಚಿನ ಸಿಬ್ಬಂದಿ ದಾಳಿ ನಡೆಸಿದ್ದಾರೆ.