ಬೆಂಗಳೂರು, ಫೆ. 04: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಸಾಹಿತಿಗಳು, ಕಲಾವಿದರು, ಸಿನಿಮಾ ನಟ ನಟಿಯರು ಬೆಂಬಲ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾವೆಲ್ಲರೂ ರೈತರು ಬೆಳೆದ ಅನ್ನ ತಿನ್ನುವವರಲ್ಲವೇ? ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ ಎಂದಿದ್ದಾರೆ.
ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು ಎಂದು ಕರೆ ನೀಡಿದ್ದಾರೆ.
ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ.
— Siddaramaiah (@siddaramaiah) February 4, 2021
ಈ ಮಣ್ಣಿನ ಎಲ್ಲ ಸಾಹಿತಿಗಳು,
ಕಲಾವಿದರು
ವಿಶೇಷವಾಗಿ
ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು.
ನಾವೆಲ್ಲರೂ ರೈತರು ಬೆಳೆದ ಅನ್ನ ತಿನ್ನುವವರಲ್ಲವೇ?#FarmersProtest