Visit Channel

ಮನೆಗಳ್ಳತನ, ಸರಗಳ್ಳತನ ಪ್ರಕರಣದ ಆರೋಪಿಗಳ‌ ಬಂಧನ: ಬೆಂಗಳೂರು ಈಶಾನ್ಯ ಪೊಲೀಸರ ಭರ್ಜರಿ ಭೇಟೆ

kallathana

ಬೆಂಗಳೂರು, ಮಾ. 22: ರಾಜ್ಯ ರಾಜಧಾನಿ ಬೆಂಗಳೂರಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಹಾಗೂ ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಹೆಡೆಮುರಿ ಕಟ್ಟಿರುವ ಪೊಲೀಸರು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಹಲವು ಠಾಣೆಗಳಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಈಶಾನ್ಯ ವಿಭಾಗದ ಪೊಲೀಸರು, ಬೆಂಗಳೂರು ನಗರದ ಹಲವು ಠಾಣೆಗಳ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡಿದ, ರಾತ್ರಿ ಮನೆ ಬೀಗ ಮುರಿದು ಕಳ್ಳತನ ಮಾಡಿದ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಗಳನ್ನು ಹಾಗೂ ಅಕ್ರಮ ಹಣ ಸಂಪಾದಿಸುವ ಸಲುವಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಲ್ಲದೇ, ಬಂಧಿತ ಆರೋಪಿಗಳಿಂದ 50 ಲಕ್ಷ ರೂ. ಮೌಲ್ಯದ 1.2 kg ಚಿನ್ನಾಭರಣ ಹಾಗೂ 10 ಲಕ್ಷ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಈ ಬೃಹತ್ ಕಾರ್ಯಾಚರಣೆ ಕೈಗೊಂಡ ಈಶಾನ್ಯ ವಿಭಾಗದ ಪೊಲೀಸ್ ಸಿಬ್ಬಂದಿ ಕಾರ್ಯ ಶ್ಲಾಘನೆ ವ್ಯಕ್ತಪಡಿಸಿರುವ ಹಿರಿಯ ಅಧಿಕಾರಿಗಳು, ಪೊಲೀಸ್ ತಂಡಕ್ಕೆ ಒಟ್ಟು 1,05,000ರೂ. ಬಹುಮಾನ ಘೋಷಿಸಲಾಗಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.