ಟ್ರ್ಯಾನ್ಸ್ ಫರ್ ಮಾಡಿದ್ದನ್ನು ಪ್ರಶ್ನಿಸಿ ಏಕಾಂಗಿ ಪ್ರತಿಭಟನೆ ನಡೆಸಿದ ಡಿ’ಗ್ರೂಪ್ ಮಹಿಳಾ ಸಿಬ್ಬಂದಿ ಬಂಧನ

ಮೈಸೂರು, ಫೆ. 01: ಅನಾರೋಗ್ಯದಿಂದ ಬಳಲುತ್ತಿರುವ ನನ್ನನ್ನು ಕಚೇರಿಯಿಂದ ಕಚೇರಿಗೆ ನಿಯೋಜನೆ ಮಾಡುವ ಮೂಲಕ ಅಧಿಕಾರಿಗಳು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಧರಣಿ ನಡೆಸುತ್ತಿದ್ದ ಡಿ’ಗ್ರೂಪ್ ನೌಕರ ಮಹಿಳೆಯನ್ನು ಅಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ.

ತನಗಾದ ಅನ್ಯಾಯದ ವಿರುದ್ಧ ಧರಣಿ ನಡೆಸುತ್ತಿದ್ದ ಮಹಿಳೆಯನ್ನು ಸೌಜನ್ಯಕ್ಕೂ ಕರೆದು ವಾತನಾಡಿಸಿ ಸಮಸ್ಯೆ ಬಗೆಹರಿಸಲು ಮುಂದಾಗದ ಅಧಿಕಾರಿ ವರ್ಗ, ಆಕೆಯ ವಿರುದ್ಧ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು ನೀಡಿದ ಪರಿಣಾಮ, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡ ಲಕ್ಷ್ಮೀಪುರಂ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.

ಆಕೆಯ ಹೆಸರು ಮಧು. ಆಕೆಯ ಪತಿ ಸುರೇಶ್ ಎಂಬವರು ಕಂದಾಯ ಇಲಾಖೆ ನೌಕರರಾಗಿದ್ದರು. ಕಳೆದ 6 ವರ್ಷಗಳ ಹಿಂದೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ. ಅನುಕಂಪದ ಆಧಾರದ ಮೇಲೆ ಆಕೆಗೆ ಡಿ ಗ್ರೂಪ್ ನೌಕರಿ ನೀಡಲಾಗಿದೆ. ಮೊದಲಿಗೆ ಬೆಂಗಳೂರಿನ ಕೆ.ಆರ್.ಪುರಂನ ತಾಲ್ಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು, ನಂತರ ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ವರ್ಗಾವಣೆ ಮಾಡಿಸಿಕೊಂಡು ಬಂದಿದ್ದಾರೆ.

ಆಕೆ ಕಳೆದ ಹಲವಾರು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದಾರೆ. ಮಹಿಳೆ ಎಂಬುದನ್ನು ಗಮನಿಸದೆ ಅಧಿಕಾರಿ ವರ್ಗವು ಆಕೆಯನ್ನು ಒಂದು ವರ್ಷ ಮೂರು ತಿಂಗಳ ಅವಧಿಯಲ್ಲಿ ಮೈಸೂರು ಜಿಲ್ಲಾಧಿಕಾರಿ ಕಚೇರಿ, ನಂಜನಗೂಡು ತಾಲ್ಲೂಕು ಕಚೇರಿ, ಚಿಕ್ಕಯ್ಯನ ಛತ್ರ ನಾಡ ಕಚೇರಿ ಹಾಗೂ ಸಿದ್ದಾರ್ಥನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ನಿಯೋಜನೆ ಮೇಲೆ ಕೆಲಸಕ್ಕೆ ನೇಮಿಸಿದ್ದಾರೆ. ಇದೀಗ ಮತ್ತೆ ನಂಜನಗೂಡು ತಾಲ್ಲೂಕು ಕಚೇರಿಗೆ ಆಕೆಯನ್ನು ನಿಯೋಜಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ಅವರು, ನಾನೂ ಕೂಡ ಎಲ್ಲ ಡಿ ಗ್ರೂಪ್ ನೌಕರರಂತೆ ಕೆಲಸ ನಿರ್ವಹಿಸುತ್ತಿದ್ದೆ. ಪತಿಯನ್ನು ಕಳೆದುಕೊಂಡವಳು ಎಂಬ ಕಾರಣಕ್ಕಾಗಿ ಕೆಲವರು ನನಗೆ ಲೈಂಗಿಕವಾಗಿ ಕಿರುಕುಳ ನೀಡಲಾರಂಭಿಸಿದರು. ಇದನ್ನು ವಿರೋಧಿಸಿದ ಕಾರಣ ನನ್ನನ್ನು ಕಚೇರಿಯಿಂದ, ಕಚೇರಿಗೆ ಬದಲಾಯಿಸಲಾಗುತ್ತಿತ್ತು.

ಈ ಹಿಂದೆ ಇದ್ದ ಎಡಿಸಿ ಅವರು ನಿನ್ನನ್ನು ಸಿದ್ದಾರ್ಥನಗರದ ಬಳಿಯ ಜಿಲ್ಲಾಧಿಕಾರಿ ಕಚೇರಿಗೆ ನಿಯೋಜಿಸಲಾಗುತ್ತಿದೆ. ನೀನು ಸಮೀಪದಲ್ಲಿಯೇ ಮನೆ ವಾಡಿಕೊ ಎಂದು ತಿಳಿಸಿದ್ದರು. ಅದರಂತೆ ನಾನು ವಿದ್ಯಾನಗರದಲ್ಲಿ ಮನೆ ವಾಡಿಕೊಂಡಿದ್ದೇನೆ. 12 ವರ್ಷದ ಹೆಣ್ಣು ಮಗಳು ಹಾಗೂ ತಾಯಿಯೊಂದಿಗೆ ವಾಸಿಸುತ್ತಿದ್ದೇನೆ. ಪ್ರತೀ ದಿನ ನಂಜನಗೂಡಿಗೆ ಹೋಗಿ ಬರುವುದು ಕಷ್ಟವಾಗುತ್ತಿದೆ.

ಈ ಸಂಬಂಧ ಅಧಿಕಾರಿಗಳ ಕಾಲು ಹಿಡಿದು ಬೇಡಿಕೊಂಡರೂ ಯಾರೂ ಕೂಡ ಕರುಣೆ ತೋರುತ್ತಿಲ್ಲ. ಹೀಗಾಗಿ ಅನ್ಯ ದಾರಿ ಇಲ್ಲದೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕುಳಿತಿದ್ದೇನೆ. ನನಗೆ ನ್ಯಾಯಸಿಗುವವರೆಗೂ ನಾನು ಇಲ್ಲಿಂದ ಕದಲುವುದಿಲ್ಲ. ನನ್ನನ್ನು ತಾಲ್ಲೂಕು ಕಚೇರಿಗೆ ವರ್ಗಾವಣೆ ವಾಡಿಕೊಡಬೇಕು. ನಾನು ಎಲ್ಲರಂತೆ ಕೆಲಸ ಮಾಡದಿದ್ದಲ್ಲಿ ನನ್ನ ಮೇಲೆ ಕ್ರಮ ತೆಗೆದುಕೊಳ್ಳಲಿ ಎಂದು ಹೇಳಿದರು.

Latest News

ದೇಶ-ವಿದೇಶ

ರೇಷನ್ ಕಾರ್ಡ್ ಹೊಂದಿರುವ ಬಡವರಿಗೆ ರಾಷ್ಟ್ರಧ್ವಜ ಖರೀದಿಸುವಂತೆ ಒತ್ತಾಯಿಸುತ್ತಿದ್ದಾರೆ : ರಾಹುಲ್ ಗಾಂಧಿ

ಇದು ಬಿಜೆಪಿ ಸರ್ಕಾರದ ಪ್ರಚಾರ ಪಿತೂರಿ. ಈ ರೀತಿ ಮಾಡುವ ಮೂಲಕ ಬಿಜೆಪಿಯು “ರಾಷ್ಟ್ರೀಯತೆ”ಯನ್ನು ಮಾರಾಟ ಮಾಡುತ್ತಿದೆ ಮತ್ತು ಬಡವರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದ್ದಾರೆ.

ರಾಜಕೀಯ

`ಬ್ಲ್ಯಾಕ್‌ ಮೇಲ್‌ ಕುಮಾರಸ್ವಾಮಿʼ ; ಕಣ್ಣೀರ ಕೋಡಿಯಿಂದ ಕುಟುಂಬಕ್ಕೆ ಲಾಭವೇ ಹೊರತು ಜನತೆಗೇನು ಲಾಭ? : ಅಶ್ವಥ್ ನಾರಾಯಣ್‌

ನೀವು ಈವರೆಗೆ ಹೇಳಿದ ಸುಳ್ಳುಗಳನ್ನು ಎಣಿಸಲು ಸಾಧ್ಯವೇ? ಎಂದು ಸಚಿವ(Minister) ಅಶ್ವಥ್‌ ನಾರಾಯಣ್(Ashwath Narayan) ಪ್ರಶ್ನಿಸಿದ್ದಾರೆ.

ದೇಶ-ವಿದೇಶ

ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದ ಭಾರತೀಯ ಸೇನೆ ; ದಾಳಿಯಲ್ಲಿ ಮೂವರು ಯೋಧರು ಹುತಾತ್ಮ!

ಸ್ವಾತಂತ್ರ್ಯ ದಿನಾಚರಣೆ(Independence Day) ಸಂದರ್ಭದಲ್ಲಿ ಉಗ್ರರು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ದೇಶ-ವಿದೇಶ

‘ಡಾನಿ’ ಬುಡಕಟ್ಟು ಜನಾಂಗದಲ್ಲಿ ಬೆರಳನ್ನು ಕತ್ತರಿಸುವುದೇ ಸಂಪ್ರದಾಯವಂತೆ!

ಇಂಡೋನೇಷ್ಯಾದ, ಪಪುವಾ ಗಿನಿಯಾ ದ್ವೀಪದಲ್ಲಿ ವಾಸಿಸುವ ಎಲ್ಲಾ ಡಾನಿ ಬುಡಕಟ್ಟಿನ ಮಹಿಳೆಯರನ್ನು ಕತ್ತರಿಸಿದ ಬೆರಳುಗಳಿಂದ ಬದುಕಲು ಒತ್ತಾಯಿಸಲಾಗುತ್ತದೆ.