ನಕಲಿ ಅಂಕಪಟ್ಟಿ ಮಾರುತ್ತಿದ್ದ ದಂಪತಿಗಳ ಬಂಧನ

ಬೆಂಗಳೂರು, ಆ. 14: ನಕಲಿ ಅಂಕಪಟ್ಟಿಗಳನ್ನು ತಯಾರಿಸಿ ಮಾರುತ್ತಿದ್ದ ದಂಪತಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ, ಅಂಕಪಟ್ಟಿಗಳನ್ನು ವಶಪಡಿಸಿಕೊಂಡ ಘಟನೆ ಬೆಂಗಳೂರಿನ ಪೀಣ್ಯ ಬಳಿ ನಡೆದಿದೆ.

ಈ ಆರೋಪಿಗಳು ಪ್ರತಿಷ್ಟಿತ ವಿಶ್ವವಿದ್ಯಾಲಯಗಳ ಅಂಕಪಟ್ಟಿಗಳನ್ನು ತಯಾರಿಸಿ  ಮಾರುತ್ತಿದ್ದರು ಈ ಆರೋಪಿಗಳು ಪಂಜಾಬ್‌ ಮೂಲದಿಂದ ಬಂದು ಪೀಣ್ಯದಲ್ಲಿ ನೆಲೆಸಿದ್ದ ಮುಖೇಶ್‌ ಹಾಗೂ ರೋಹಿ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ನೂರಾರು ನಕಲಿ ಅಂಕಪಟ್ಟಿ, ಸೀಲ್‌ಗಳು ಮತ್ತು ಆಸ್ತಿಗೆ ಸಂಬಂಧಪಟ್ಟ ದಾಖಲೆಗಳನ್ನು ವಶಪಡಿಸಿಕೊಂಡಿರುವುದಾಗಿ ಸಿಸಿಬಿ ಪೊಲೀಸರು ತಿಳಿಸಿದರು.

ಕಳೆದ ಹಲವು ವರ್ಷಗಳಿಂದ ಆರೋಪಿಗಳು ಪೀಣ್ಯ ಬಳಿ ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿದ್ದರು. ಐಟಿಐ ತರಗತಿಗಳನ್ನು ನಡೆಸುತ್ತಿದ್ದರು. ಜೊತಗೆ ಪಿಯುಸಿ ಯಲ್ಲಿ ಅನುತೀರ್ಣಗೊಂಡ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಅವರಿಗೆ ಪ್ರತಿಷ್ಟಿತ ವಿಶ್ವವಿದ್ಯಾಲಯಗಳ ಅಂಕಪಟ್ಟಿಗಳನ್ನು ತಯಾರಿಸಿ ಕೊಡುತ್ತಿದ್ದರು. ಇವರು ವಿಶ್ವವಿದ್ಯಾಲಯಗಳ ಬಿ.ಕಾಂ, ಎಂಬಿಎ, ಎಂಟೆಕ್, ಬಿಟೆಕ್ ಹಾಗೂ ಇತರೆ ಕೋರ್ಸಗಳ ಅಂಕಪಟ್ಟಿಗಳನ್ನು ಮುದ್ರಿಸಿ ಮಾರುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ ಸಿಸಿಬಿ ಪೊಲೀಸರು ರವೀಂದ್ರನಾಥ ಟ್ಯಾಗೂರ್ ವಿಶ್ವವಿದ್ಯಾಲಯ, ಸಿ.ವಿ. ರಾಮನ್ ವಿಶ್ವವಿದ್ಯಾಲಯ, ಅಸೆಟ್ ಯುನಿಮರ್ಸಿಟಿ ಹಾಗೂ ಇನ್ನಿತರ ವಿಶ್ವವಿದ್ಯಾಲಯಗಳ ಅಂಕಪಟ್ಟಿಯನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಸಿಸಿಬಿ ಆಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

Exit mobile version