ಬೆಂಗಳೂರಿನಲ್ಲಿ ಮೂವರು ಡ್ರಗ್ ಪೆಡ್ಲರ್‌ಗಳ ಬಂಧನ

ಬೆಂಗಳೂರು ಸೆ 14 : ಒಂದೆಡೆ ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ದಂದೆ ಜೋರಾಗಿದ್ದರೆ, ಇನ್ನೊಂದೆಡೆ ಬೆಂಗಳೂರಿನ ಹಲವೆಡೆಗಳಲ್ಲಿ ಡ್ರಗ್‌ಪೆಡ್ಲರ್‌ಗಳ ಮಟ್ಟಹಾಕುವ ಕಾರ್ಯ ಪೊಲೀಸರು ಮುಂದುವರೆಸಿದಿದ್ದು, ಈ ಹಿನ್ನಲೆಯಲ್ಲಿ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಮತ್ತು ಮಾದಕದ್ರವ್ಯ ನಿಗ್ರಹ ದಳದ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡ ಇಬ್ಬರು ವಿದೇಶಿಯರು ಸೇರಿದಂತೆ  ಮೂವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದೆ.

ನಗರದ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಂಡಿಎಂಎ ಡ್ರಗ್ ಮಾರಾಟ ಮಾಡಲು ಯತ್ನಿಸುತ್ತಿದ್ದ ನೈಜೀರಿಯಾದ ಇಬ್ಬರು ಮತ್ತು ಕೇರಳ ಮೂಲದ ಒಬ್ಬನನ್ನುಪೊಲೀಸರು ಬಂಧಿಸಿದ್ದಾರೆ. ಅವರ ಬಳಿಯಿದ್ದ 210 ಗ್ರಾಂ ತೂಕದ 500 ಎಕ್ಸ್ಟಾಸೆ ಮಾತ್ರೆಗಳು, ಆರು ಮೊಬೈಲ್ ಫೋನ್ ಮತ್ತು ಕೃತ್ಯಕ್ಕೆ ಬಳಸುತ್ತಿದ್ದ ಕಾರು ವಶಪಡಿಸಿಕೊಳ್ಳಲಾಗಿದೆ. ಇವುಗಳ ಅಂದಾಜು ಮೌಲ್ಯ 30 ಲಕ್ಷರೂ.ಗಳೆಂದು ಪೊಲೀಸರು ತಿಳಿಸಿದ್ದಾರೆ

ಈ ಕಾರ್ಯಚರಣೆಯಲ್ಲಿ ಸಿಸಿಬಿ ಸಹಾಯಕ ಪೊಲೀಸ್ ಆಯುಕ್ತ ಕೆ.ಸಿ.ಗೌತಮ್ ನೇತೃತ್ವದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆರ್. ದೀಪಕ್, ಸಿಬ್ಬಂದಿಗಳಾದ ವಿನಯ್, ಶಹನೂರು ರಣಮಲ್ಲೇ, ಶಿವಪ್ಪಕುಡಚಿ, ದ್ಯಾವರಸಯ್ಯ, ರಘು ಮತ್ತು ಆನಂದ ಮತ್ತಿತರರು ಭಾಗವಹಿಸಿದ್ದರು.

Exit mobile version