ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಅರುಣ್ ಮಿಶ್ರಾ

ನವದೆಹಲಿ, ಜೂ. 02: ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾ.ಅರುಣ್ ಕುಮಾರ್ ಮಿಶ್ರಾ ಅವರು ಇಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಅವರು ಸುಪ್ರೀಂ ಕೋರ್ಟ್‌ನಿಂದ ನಿವೃತ್ತರಾದರು.

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿಯಾಗಿರುವ ನ್ಯಾ.ಹೆಚ್. ಎಲ್. ದತ್ತು ಅವರು 2020 ರ ಡಿಸೆಂಬರ್‌ನಲ್ಲಿ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದಾಗಿನಿಂದ ಎನ್‌ಎಚ್‌ಆರ್‌ಸಿ ಮುಖ್ಯಸ್ಥರ ಹುದ್ದೆ ಖಾಲಿ ಇತ್ತು.

ಮಿಶ್ರಾ ಬಗ್ಗೆ:
ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು 1978 ರಲ್ಲಿ ವಕೀಲರಾಗಿ ಸೇರಿಕೊಂಡರು ಮತ್ತು 1998-99ರಲ್ಲಿ ಬಾರ್ ಕೌನ್ಸಿಲ್ ಆಫ್ ಇಂಡಿಯಾದ ಕಿರಿಯ ಅಧ್ಯಕ್ಷರಾಗಿ ಆಯ್ಕೆಯಾದರು. ಅವರು ಅಕ್ಟೋಬರ್ 1999 ರಲ್ಲಿ ಮಧ್ಯಪ್ರದೇಶ ಹೈಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡರು. ಅವರು ಜುಲೈ 7, 2014 ರಂದು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗುವ ಮುನ್ನ ರಾಜಸ್ಥಾನ ಹೈಕೋರ್ಟ್ ಮತ್ತು ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದರು.

Exit mobile version