4 ವರ್ಷಗಳಿಂದಲೂ ಡ್ರಗ್ಸ್‌ ಸೇವಿಸುತ್ತಿದ್ದ ಆರ್ಯನ್‌ ಖಾನ್‌

 ಮುಂಬೈ, ಅ.5: ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿ ಸಿಕ್ಕಿಬಿದ್ದಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನಾಲ್ಕು ವರ್ಷಗಳ ಹಿಂದಿನಿಂದಲೇ ಡ್ರಗ್ಸ್ ಸೇವನೆ ಮಾಡುತ್ತಿದ್ದೆ  ಜೊತೆಗೆ ಯುಕೆ, ದುಬೈನಲ್ಲಿ ವಿಹಾರಕ್ಕೆ ಹೋಗುತ್ತಿದ್ದಾಗಲೂ  ಡ್ರಗ್ಸ್ ಸೇವಿಸುತ್ತಿದ್ದೆ ಎಂದು ತನಿಖಾಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದಾನೆ.

ಎನ್ ಸಿಬಿ ಅಧಿಕಾರಿಗಳು ಆರ್ಯನ್ ಖಾನ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಸಂದರ್ಭದಲ್ಲೇ ಅರ್ಯನ್ ಖಾನ್ ಪೂರ್ತಿಯಾಗಿ ಅತ್ತಿದ್ದಾನೆ. ಆನಂತರ, ತಾನು ನಾಲ್ಕು ವರ್ಷಗಳಿಂದ ಡ್ರಗ್ಸ್ ಸೇವನೆ ಮಾಡುತ್ತಿದ್ದೇನೆ ಎಂದು ಅಧಿಕಾರಿಗಳಲ್ಲಿ ಒಪ್ಪಿಕೊಂಡಿದ್ದಾನೆ. ಅಲ್ಲದೆ, ಯುಕೆ, ದುಬೈ ಇನ್ನಿತರ ದೇಶಗಳಿಗೆ ಪ್ರವಾಸ ಹೋಗುತ್ತಿದ್ದ ಸಂದರ್ಭದಲ್ಲಿಯೂ ಆರ್ಯನ್ ಖಾನ್ ಡ್ರಗ್ಸ್ ಸೇವನೆ ಮಾಡುತ್ತಿದ್ದ ಎಂಬುದನ್ನೂ ಒಪ್ಪಿಕೊಂಡಿದ್ದಾಗಿ ಅಧಿಕಾರಿಗಳಿಂದ ತಿಳಿದುಬಂದಿದೆ.

ಶಾರುಖ್ ಪುತ್ರ ಆರ್ಯನ್ ಖಾನ್ ಸೇರಿ ಎಂಟು ಮಂದಿಯನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದರು. ಐಷಾರಾಮಿ ಕ್ರೂಸ್ ಹಡಗಿನಲ್ಲಿ ದೆಹಲಿ ಮೂಲದ ಕಂಪನಿಯೊಂದು ಪಾರ್ಟಿ ಆಯೋಜಿಸಿತ್ತು. ಈ ಪಾರ್ಟಿಗೂ ಹಡಗು ಸಂಸ್ಥೆಗೂ ಯಾವುದೇ ಸಂಬಂಧ ಇಲ್ಲವೆಂದು ಹಡಗು ಕಂಪನಿ ತಿಳಿಸಿದೆ. ಈ ಪ್ರಕರಣದಲ್ಲಿ ಮುನ್ ಮುನ್ ಧಮೇಚಾ, ಅರ್ಬಾಜ್ ಮರ್ಚೆಂಟ್, ಇಸ್ಮೀತ್ ಸಿಂಗ್, ಮೋಹಕ್ ಜಸ್ವಾಲ್ ಗೋಮಿತ್ ಚೋಪ್ರಾ, ನೂಪುರ ಸಾರಿಕಾ ಮತ್ತು ವಿಕ್ರಾಂತ್ ಜೋಕರ್ ಬಂಧಿತರಾಗಿದ್ದಾರೆ

Exit mobile version