ಆರ್ಯನ್‌ ಖಾನ್ ಡ್ರಗ್ಸ್‌ ಕಳ್ಳಸಾಗಣಿಕೆಯಲ್ಲೂ ತೊಡಗಿಸಿಕೊಂಡಿದ್ದ – ಎನ್‌ಸಿಬಿ

ಮುಂಬೈ ಅ 26 : ಡ್ರಗ್ಸ್‌ ಕೇಸ್‌ನಲ್ಲಿ ಬಂಧಿತನಾಗಿರುವ ಶಾರುಖ್ ಪುತ್ರ ಆರ್ಯನ್ ಖಾನ್ ಡ್ರಗ್ಸ್‌ ಕಳ್ಳಸಾಗಣಿಕೆಯಲ್ಲೂ ಕೂಡ ತೊಡಗಿಸಿಕೊಂಡಿದ್ದಾರೆ ಎಂದು ಎನ್‌ಸಿಬಿ ಅಧಿಕಾರಿಗಳು ಆರೋಪಿಸಿದ್ದಾರೆ.

 ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಿಂಗಳ ಆರಂಭದಲ್ಲಿ ಬಂಧಿತರಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರ ಜಾಮೀನಿಗೆ ವಿರೋಧ ವ್ಯಕ್ತಪಡಿಸಿರುವ ಎನ್ ಸಿಬಿ, ಆರ್ಯನ್ ಖಾನ್ ಕೇವಲ ಡ್ರಗ್ಸ್ ಸೇವಿಸುವುದಿಲ್ಲ. ಅವರು ಡ್ರಗ್ಸ್ ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮಂಗಳವಾರ ಆರೋಪಿಸಿದೆ.

ಆರ್ಯನ್ ಖಾನ್ ಮತ್ತು ಶಾರುಖ್ ಖಾನ್ ಅವರ ಮ್ಯಾನೇಜರ್ ಪೂಜಾ ದದ್ಲಾನಿ ಎಂಬ ಮಹಿಳೆ ತನಿಖೆಯ ದಾರಿತಪ್ಪಿಸುವ ಪ್ರಯತ್ನದಲ್ಲಿ ಪ್ರಕರಣದ ಸಾಕ್ಷಿ ಮತ್ತು ಸಾಕ್ಷ್ಯಗಳನ್ನು ತಿರುಚುತ್ತಿದ್ದಾರೆ ಎಂದು ಎನ್ ಸಿಬಿ ಬಾಂಬೆ ಹೈಕೋರ್ಟ್ ಗೆ ತಿಳಿಸಿದೆ.

ಮತ್ತೊಂದೆಡೆ, ಆರ್ಯನ್ ಖಾನ್ ಅವರ ವಕೀಲರು ಹೆಚ್ಚುವರಿ ಟಿಪ್ಪಣಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದು, ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಮತ್ತು ಕೆಲವು ರಾಜಕೀಯ ವ್ಯಕ್ತಿಗಳ ನಡುವಿನ ಆರೋಪ, ಪ್ರತ್ಯಾರೋಪಗಳಿಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ

Exit mobile version