Visit Channel

ಕುಮಾರಸ್ವಾಮಿ ಜೋಕರ್ ಇದ್ದಂತೆ: ಯಾವ ಪಾರ್ಟಿಗೂ ಅಡ್ಜೆಸ್ಟ್ ಆಗ್ತಾರೆ: HDK ವಿರುದ್ಧ CPY ವಾಗ್ದಾಳಿ

FotoJet-1-13

ಮಂಗಳೂರು, ಫೆ. 26: ಮಾಜಿ ಸಿಎಂ ಕುಮಾರಸ್ವಾಮಿ ಅವಕಾಶವಾದಿ ರಾಜಕಾರಣಿ, ಒಂದು ತರಹ ಜೋಕರ್ ತರಹ ಇದ್ದಂಗೆ ಎಂದು ಸಚಿವ ಸಿ.ಪಿ. ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ.

ಮಂಗಳೂರು ನಗರಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಕುಮಾರಸ್ವಾಮಿ ಯಾವ ಪಾರ್ಟಿಯಾದರೂ ಅಡ್ಜೆಸ್ಟ್ ಮೆಂಟ್ ಆಗುತ್ತಾರೆ. ಅಂದ್ರೆ ಕುಮಾರಸ್ವಾಮಿಗೆ ನೈತಿಕತೆ, ಸಿದ್ದಾಂತ ಯಾವುದೂ ಇಲ್ಲ ಎಂದ ಅವ್ರು ಸಿಎಂ ಆಗಿದ್ದಾಗ ಕುಮಾರಸ್ವಾಮಿ ಉಡಾಫೆಯಾಗಿ ವರ್ತಿಸಿದ್ದರು.

ಕುಮಾರಸ್ವಾಮಿಯವರಿಗೆ ಆತಂಕ ಕಾಡುತ್ತಿದೆ. ದಿನಬೆಳಗೆದ್ದು ಕುಮಾರಸ್ವಾಮಿ ಜನರ ಕಡೆ ಹೋಗುತ್ತಿದ್ದಾರೆ. ಅಧಿಕಾರ ಇದ್ದಾಗ ಏನೂ ಮಾಡಲಿಲ್ಲ ಎಂದರು.

ಅಧಿಕಾರ ಇಲ್ಲದಾಗ ಜನರ ಬಳಿ ಹೋಗಿ ಗೋಳಾಡುವುದು, ಕಣ್ಣೀರು ಹಾಕುವುದು ಅವರ ಗುಣವಾಗಿಬಿಟ್ಟಿದೆ. 2023 ರ ಚುನಾವಣೆಯಲ್ಲಿ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿಗೆ ಬಹುಮತ ಸಿಗಲಿದೆ. ಈ ಮೂಲಕ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸಂಪೂರ್ಣ ನೆಲಕಚ್ಚುತ್ತದೆ ಎಂಬ ವಿಚಾರ ಅರಿತು ಮಾಜಿ ಸಿಎಂ ಕುಮಾರಸ್ವಾಮಿ ಆತಂಕದಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.