ಜೈಪುರ ಸೆಪ್ಟೆಂಬರ್ 17: ರಸ್ತೆ ಅಪಘಾತಕ್ಕೀಡಾದವರಿಗೆ ಸಹಾಯ ಮಾಡುವವರಿಗೆ 5,000 ರೂ ಬಹುಮಾನದ ಜೊತೆಗೆ ಪ್ರಮಾಣಪತ್ರವನ್ನು ನೀಡಿ ಪ್ರಶಂಸಿಸುವ ಮಹತ್ವದ ಯೋಜನೆಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮುಂದಾಗಿದ್ದಾರೆ.
ಅಫಘಾತಕ್ಕೀಡಾದವರಿಗೆ ಸಹಾಯ ಹಸ್ತ ಚಾಚಿದರೆ ತಮ್ಮ ಮೇಲೆ ಕೇಸ್ ಬೀಳುತ್ತದೆ ಎಂಬ ಕಾರಣಕ್ಕೆ ಅನೇಕ ಮಂದಿ ಸುಮ್ಮನಾಗುತ್ತಾರೆ ಅದನ್ನು ಹೋಗಲಾಡಿಸುವ ಸಲುವಾಗಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ತಾನ ಸರ್ಕಾರ ರಸ್ತೆ ಅಪಘಾತದಲ್ಲಿ ಗಾಯಗೊಂಡ ವರಿಗೆ ಸಹಾಯ ಮಾಡುವವರಿಗೆ ಈಗ 5,000 ರೂ ಬಹುಮಾನದ ಜೊತೆಗೆ ಪ್ರಮಾಣಪತ್ರವನ್ನು ನೀಡಿ ಪ್ರಶಂಸಿಸುವ ಮಹತ್ವದ ಯೋಜನೆಗೆ ಮುಂದಾಗಿದ್ದು, ರಾಜಸ್ಥಾನದಲ್ಲಿ ಪ್ರತಿದಿನ ರಸ್ತೆ ಅಪಘಾತಗಳು ಸಂಭವಿಸುತ್ತವೆ. ಈ ಅಪಘಾತ ಗಳಲ್ಲಿ ಅನೇಕ ಜನರು ಗಾಯಗೊಳ್ಳುತ್ತಿದ್ದಾರೆ. ಹೀಗೆ ಗಾಯಗೊಂಡ ಜನರಿಗೆ ಸಹಾಯ ಮಾಡಲು ಹೆಚ್ಚಿನ ಜನ ಕಾನೂನಿಗೆ ಹೆದರಿ ಮುಂದೆ ಬರುವುದಿಲ್ಲ. ಪರಿಣಾಮ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಅನೇಕ ಜನ ಸಾವನ್ನಪ್ಪುತ್ತಿದ್ದಾರೆ. ಈಗ ಅಂತಹ ಜನರ ಜೀವ ಉಳಿಸಲು ರಾಜಸ್ಥಾನ ಸರ್ಕಾರ ಹೊಸ ಯೋಜನೆಯೊಂಧನ್ನು ಆರಂಭಿಸಿದ್ದು, ಈ ಯೋಜನೆಯಡಿ, ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುವ ಜನರಿಗೆ ಸರ್ಕಾರದಿಂದ 5000 ರೂಪಾಯಿ ಮತ್ತು ಪ್ರಮಾಣ ಪತ್ರ ನೀಡಲಾಗುತ್ತದೆ ಎಂದು ಗುಜರಾತ್ ಸರ್ಕಾರ ಘೋಷಿಸಿದೆ.
ಬಹುಮಾನ ಪಡೆಯಲು ಇರುವ ವಿಧಾನ : ಅಪಘಾತಕ್ಕೀಡಾದವರಿಗೆ ಸಹಾಯ ಮಾಡುವ ವ್ಯಕ್ತಿಯು ಈ ಯೋಜನೆಯಡಿ ಬಹುಮಾನವನ್ನು ಪಡೆಯಲು ಬಯಸಿದರೆ, ಆತ ಆಸ್ಪತ್ರೆಯಲ್ಲಿರುವ CMO ಗೆ ಎಲ್ಲಾ ಸರಿಯಾದ ಮಾಹಿತಿಯನ್ನು ನೀಡಬೇಕಾಗುತ್ತದೆ. ವ್ಯಕ್ತಿಯು ತನ್ನ ಸರಿಯಾದ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ವಿವರಗಳನ್ನು ನೀಡಬೇಕು. ನಂತರ CMO ಈ ಮಾಹಿತಿಯ ಆಧಾರದ ಮೇಲೆ ವರದಿಯನ್ನು ಸಿದ್ಧಪಡಿಸುತ್ತದೆ ಮತ್ತು ಆಸ್ಪತ್ರೆಗೆ ಕರೆತಂದ ವ್ಯಕ್ತಿ ಗಂಭೀರವಾಗಿದ್ದಾನೋ ಇಲ್ಲವೋ ಮತ್ತು ತಕ್ಷಣದ ಚಿಕಿತ್ಸೆ ಪಡೆದಿದ್ದಾನೋ ಇಲ್ಲವೋ ಎಂದು ನಿರ್ಧರಿಸಿ ನಂತರ ಮೊತ್ತವನ್ನು ವರ್ಗಾವಣೆ ಮಾಡಲಾಗುತ್ತದೆ.