ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ; ಸೋನಿಯಾ ಗಾಂಧಿಯನ್ನು ಭೇಟಿಯಾಗಲು ಮುಂದಾದ ಸಿಎಂ ಅಶೋಕ್ ಗೆಹ್ಲೋಟ್

Congress

Rajasthan : ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್(Ashok Gehlot meets sonia gandhi) ಇಂದು ದೆಹಲಿಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ಸಜ್ಜಾಗಿದ್ದಾರೆ.

ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸದ್ಯ ತಮ್ಮ ರಾಜ್ಯ ರಾಜಕೀಯ ಅಖಾಡದಲ್ಲಿ ಗೊಂದಲ ಉಂಟಾಗಿದ್ದು,.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ (Ashok Gehlot meets sonia gandhi) ತಮ್ಮ ನಾಮನಿರ್ದೇಶನವನ್ನು ಸಲ್ಲಿಸುತ್ತಾರೋ? ಇಲ್ಲವೋ? ಎಂಬುದರ ಬಗ್ಗೆ ಚರ್ಚಿಸಲು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ಸಜ್ಜಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : https://vijayatimes.com/actor-chethan-ahimsa-allegation/

ಭಾನುವಾರ ರಾತ್ರಿ 82 ಶಾಸಕರು ವಿಧಾನಸಭೆ ಸ್ಪೀಕರ್ ಸಿಪಿ ಜೋಶಿ ಅವರಿಗೆ ರಾಜೀನಾಮೆ(Resignation) ಸಲ್ಲಿಸಿದ ನಂತರ ರಾಜ್ಯ ರಾಜಕೀಯದಲ್ಲಿ ಗೊಂದಲಗಳು ಸ್ಫೋಟಗೊಂಡಿದೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಗೆಹ್ಲೋಟ್ ಗೆದ್ದರೆ ಮುಂದಿನ ಮುಖ್ಯಮಂತ್ರಿಯಾಗಿ ಸಚಿನ್ ಪೈಲಟ್ ಆಯ್ಕೆಯನ್ನು ವಿರೋಧಿಸಿ ರಾಜೀನಾಮೆ ನೀಡಿದ ಶಾಸಕರು ಮೂರು ಅಂಶಗಳ ಅಜೆಂಡಾವನ್ನು ನೀಡಿದರು.

ಅವರ ಬೇಡಿಕೆಗಳಲ್ಲಿ ಜೂನ್ 2020 ರಲ್ಲಿ ಸರ್ಕಾರವನ್ನು ಉರುಳಿಸುವ ಪ್ರಯತ್ನ ನಡೆದಾಗ, ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿದ್ದ 102 ಶಾಸಕರಿಂದ ಆಯ್ಕೆಯಾದ ಮುಖ್ಯಮಂತ್ರಿ ಹೆಸರು ಕೂಡ ಸೇರಿದೆ.

ಹೊಸ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಿಸಿದ ನಂತರ ರಾಜಸ್ಥಾನದಲ್ಲಿ ಸಂಭವನೀಯ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ನಡೆಯಬೇಕು ಎಂದು ಗೆಹ್ಲೋಟ್ ಶಿಬಿರದಲ್ಲಿರುವ ಶಾಸಕರು ಪಕ್ಷದ ಹೈಕಮಾಂಡ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ : https://vijayatimes.com/turkish-singer-cuts-off-her-hair/

ಮೂರನೆಯದಾಗಿ, ಅಶೋಕ್ ಗೆಹ್ಲೋಟ್ ಅವರ ಆಯ್ಕೆಯನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು. ಇದು ಕಾಂಗ್ರೆಸ್ ನಾಯಕತ್ವ ಮತ್ತು ಗೆಹ್ಲೋಟ್ ನಿಷ್ಠಾವಂತರ ನಡುವಿನ ಬಿಕ್ಕಟ್ಟಿಗೆ ಕಾರಣವಾಯಿತು, ಪಕ್ಷದ ಹೈಕಮಾಂಡ್ ತನ್ನ ಪಕ್ಷದ ಮಲ್ಲಿಕಾರ್ಜುನ ಖರ್ಗೆ ಮತ್ತು ಅಜಯ್ ಮಾಕನ್ ಅವರಿಂದ ವರದಿಯನ್ನು ಕೇಳಿದೆ.

ಈ ಮಧ್ಯೆ ಸೋನಿಯಾ ಗಾಂಧಿಗೆ ನೀಡಿದ ತಮ್ಮ ವರದಿಯಲ್ಲಿ ರಾಜ್ಯದ ಬಿಕ್ಕಟ್ಟಿಗೆ ಗೆಹ್ಲೋಟ್ ಹೊಣೆಗಾರರಲ್ಲ ಎಂದು ಹೇಳಿದರು. ಆದರೆ ಸಮಾನಾಂತರ ಸಭೆ ಕರೆದ ಪ್ರಮುಖ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದ್ದಾರೆ.

ಶಾಂತಿ ಧರಿವಾಲ್, ಮಹೇಶ್ ಜೋಶಿ ಮತ್ತು ಶಾಸಕ ಧರ್ಮೇಂದ್ರ ರಾಥೋಡ್ ಸೇರಿದಂತೆ,

https://fb.watch/fPAQHqmZ_E/

ಗೆಹ್ಲೋಟ್ ಕ್ಯಾಂಪ್‌ನ ಹಲವಾರು ಕ್ಯಾಬಿನೆಟ್ ಮಂತ್ರಿಗಳು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯನ್ನು ಬುಡಮೇಲು ಮಾಡುವ ಉದ್ದೇಶದಿಂದ ಸಮಾನಾಂತರ ಸಭೆಯನ್ನು ಆಯೋಜಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪಕ್ಷದ ಅಧ್ಯಕ್ಷರ ಸೂಚನೆ ಮೇರೆಗೆ ಶಾಸಕಾಂಗ ಸಭೆ ಕರೆಯಲಾಗಿದ್ದು, ಪಕ್ಷದ ವೀಕ್ಷಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅಜಯ್ ಮಾಕನ್ ಅವರ ಸಮ್ಮುಖದಲ್ಲಿ ಸಭೆ ನಡೆಸಬೇಕಿತ್ತು ಎಂದು ಹೇಳಲಾಗಿದೆ.

Exit mobile version