ಒಮಿಕ್ರಾನ್ ಸೋಂಕು ಪತ್ತೆ ಹಿನ್ನಲೆ, ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ

ಬೆಂಗಳೂರು ಡಿ 2 : ರಾಜ್ಯದಲ್ಲಿ ಮತ್ತೆ ಕೊರೊನಾ ಭೀತಿ ಸೃಷ್ಟಿಯಾಗಿದ್ದು ದಕ್ಷಿಣ ಆಫ್ರಿಕಾದಿಂದ ಬಂದಿರುವ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ.  ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ.

ಇಬ್ಬರ ಸಂಪರ್ಕಿತರನ್ನು ಪತ್ತೆ ಹಚ್ಚಿ ಪರೀಕ್ಷೆ ನಡೆಸಲಾಗುತ್ತಿದ್ದು, ಎಲ್ಲರನ್ನೂ ಐಸೋಲೇಷನ್ ನಲ್ಲಿ ಇರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ರೂಪಾಂತರಿ ಒಮಿಕ್ರಾನ್ ವೇಗವಾಗಿ ಹರಡುತ್ತದೆ. ಆದರೆ ಇದರಿಂದ ಜೀವಕ್ಕೆ ಅಪಾಯ ಇಲ್ಲ. ಇಬ್ಬರಲ್ಲಿ ಈ ಹಿಂದೆಯೇ ಕೊರೋನಾ ದೃಢಪಟ್ಟಿತ್ತು, ಜಿನೋಮ್ ಸೀಕ್ವೆನ್ಸ್ ಗಾಗಿ ಕಳಿಸಲಾಗಿತ್ತು ಹಾಗೂ ಅದರಿಂದ ಒಮಿಕ್ರಾನ್ ಇರುವುದು ದೃಢಪಟ್ಟಿದೆ ಎಂದು ಅವರು ಹೇಳಿದ್ದಾರೆ.

Exit mobile version