ಏಷ್ಯಾಕಪ್ 2023ಕ್ಕೆ ಭಾರತೀಯ ಕ್ರಿಕೆಟ್‌ ತಂಡ ಪ್ರಕಟ : ಯಾರ್ಯಾರಿಗೆ ಅವಕಾಶ..?

Mumbai: ಅಜಿತ್ ಅಗರ್ಕರ್ ನೇತೃತ್ವದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಆಯ್ಕೆ ಸಮಿತಿಯು (AsiaCup 2023 Indian team) ಏಷ್ಯಾ ಕಪ್ಗಾಗಿ ಭಾರತೀಯ ಪುರುಷರ ಕ್ರಿಕೆಟ್

ತಂಡವನ್ನು (AsiaCup 2023 Indian team) ಇಂದು ಪ್ರಕಟ ಮಾಡಿದೆ.

ಏಷ್ಯಾಕಪ್ನಲ್ಲಿ ಸ್ಥಾನ ಪಡೆಯುವೇ ಅನುಮಾನ ಎನ್ನಲಾಗುತ್ತಿದ್ದ ಕನ್ನಡಿಗ ಕೆ.ಎಲ್.ರಾಹುಲ್ಗೆ ಈ ಬಾರಿ ಮತ್ತೊಮ್ಮೆ ತಂಡದಲ್ಲಿ ಆಡಲು ಅವಕಾಶ ನೀಡಲಾಗಿದೆ. ಇನ್ನು ಗಾಯದ ಸಮಸ್ಯೆಯಿಂದ ತಂಡದಿಂದ

ಹೊರಗುಳಿದಿದ್ದ ವೇಗಿ ಜಸ್ಪ್ರೀತ್ ಬುಮ್ರಾ, ಮತ್ತು ಮದ್ಯಮ ಕ್ರಮಾಂಕದಲ್ಲಿ ಆಡಲು ಶ್ರೇಯಸ್ ಅಯ್ಯರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಉಪನಾಯಕರನ್ನಾಗಿ

ನೇಮಿಸಲಾಗಿದೆ. ಇನ್ನು ಸ್ಪಿನ್ನರ್ ಕುಲದೀಪ್ ಯಾದವ್ ತಂಡದಲ್ಲಿ ಸ್ಥಾನ ಪಡೆದಿದ್ದರೆ, ಯುಜುವೇಂದ್ರ ಚಹಾಲ್ ಅವರನ್ನು ಕೈಬಿಡಲಾಗಿದೆ.

ಈ ಬಾರಿಯ ಏಷ್ಯಾ ಕಪ್ 2023 ಆಗಸ್ಟ್ 30 ರಿಂದ ಸೆಪ್ಟೆಂಬರ್ 17ರ ವರೆಗೆ ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಫ್ಘಾನಿಸ್ತಾನ,

ಬಾಂಗ್ಲಾದೇಶ ಮತ್ತು ನೇಪಾಳ ಹೀಗೆ ಒಟ್ಟು ಆರು ತಂಡಗಳು ಭಾಗವಹಿಸುತ್ತಿವೆ.

ರೈಲಿನಲ್ಲಿ ಬೆಂಕಿ: ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ, ತಪ್ಪಿದ ಭಾರಿ ಅವಘಡ

ತಂಡದಲ್ಲಿ ಯಾರಿದ್ದಾರೆ?
ರೋಹಿತ್ ಶರ್ಮಾ (ನಾಯಕ), , ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶುಭಮನ್ ಗಿಲ್ ಕೆ.ಎಲ್ ರಾಹುಲ್, ಸೂರ್ಯಕುಮಾರ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ಯಾದವ್,

ತಿಲಕ್ ವರ್ಮಾ ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, , ಪ್ರಸಿದ್ಧ್ ಕೃಷ್ಣ ಮತ್ತು ಸಂಜು ಸ್ಯಾಮ್ಸನ್, ಮೊಹಮ್ಮದ್ ಶಮಿ,

ಮೊಹಮ್ಮದ್ ಸಿರಾಜ್ ತಂಡದಲ್ಲಿದ್ದಾರೆ.

Exit mobile version