ಮುಂಬೈ, ಜ. 09: ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ಜನರಲ್ ಆಸ್ಪತ್ರೆಯಲ್ಲಿ ಅಗ್ನಿ ದುರಂತದಿಂದಾಗಿ 10 ಮಕ್ಕಳು ಸಾವಿಗೀಡಾಗಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ನವಜಾತ ಶಿಶುಗಳ ತೀವ್ರ ನಿಗಾಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷಗಳಲ್ಲಿ ಇಡೀ ವಾರ್ಡ್ ಅನ್ನು ವ್ಯಾಪಿಸಿತು. ಘಟನೆಯಲ್ಲಿ 10 ಮಕ್ಕಳು ಮೃತಪಟ್ಟಿದ್ದು, 7 ಮಕ್ಕಳನ್ನು ರಕ್ಷಿಸಲಾಗಿದೆ. ಮೃತಪಟ್ಟ ಮಕ್ಕಳು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಬೆಂಕಿ ಕಾಣಿಸಿಕೊಂಡುರುವುದಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.