ಗುವಾಹಟಿ, ಮೇ. 24: ಅಸ್ಸಾಂನ ಕಾರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ಪೊಲೀಸರು ಮತ್ತು ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ ದಿಮ್ಸಾ ನ್ಯಾಷನಲ್ ಲಿಬರೇಷನ್ ಆರ್ಮಿ (ಡಿಎನ್ಎಲ್ಎ) ಸಂಘಟನೆಗೆ ಸೇರಿದ 6 ಉಗ್ರರು ಹತ್ಯೆಯಾಗಿದ್ದಾರೆ.
ಕಾರ್ಬಿ ಆಂಗ್ಲಾಂಗ್ನ ಧಾನ್ಸಿರಿ ಪ್ರದೇಶದಲ್ಲಿ ಈ ಜಂಟಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಕಾರ್ಬಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಶಂಕಿತ ಡಿಎನ್ಎಲ್ಎ ಉಗ್ರರಿಂದ ಇಬ್ಬರು ವ್ಯಾಪಾರಿಗಳ ಹತ್ಯೆಯಾದ ನಂತರ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಮೃತ ಉಗ್ರರಿಂದ ಅಪಾರ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಂದು ಅಸ್ಸಾಂನ ವಿಶೇಷ ಪೊಲೀಸ್ ಮಹಾನಿರ್ದೇಶಕ ಜಿ.ಪಿ.ಸಿಂಗ್ ತಿಳಿಸಿದರು.
ಜಿಲ್ಲೆಯಲ್ಲಿ ಕೊಲೆ, ಸುಲಿಗೆ ಮಾಡುತ್ತಿದ್ದ ಡಿಎನ್ಎಲ್ಎ ಸಂಘಟನೆಯ ಉಗ್ರರನ್ನು ಬಂಧಿಸಲು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.