Visit Channel

ಕೇಂದ್ರದ ಮಾಜಿ ಸಚಿವರ ಪತ್ನಿ ಹತ್ಯೆ; ಚಿನ್ನಾಭರಣ ದೋಚಿ ಪರಾರಿ

vijaya-karnataka - 01

ದೆಹಲಿ, ಜು. 07: ದಿವಂಗತ ಮಾಜಿ ಕೇಂದ್ರ ಸಚಿವ ಕುಮಾರಮಂಗಲಮ್ ಅವರ ಪತ್ನಿಯ ಬರ್ಬರ ಕಿಟ್ಟಿ ಕುಮಾರಮಂಗಲಮ್ ಅವರನ್ನು ದುಷ್ಕರ್ಮಿಗಳು ಇಂದು ಬರ್ಬರವಾಗಿ ಕೊಲೆಗೈದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದಕ್ಷಿಣ ದೆಹಲಿಯ ವಸಂತ್ ಸಾಗರ್‌ನ ಅವರ ನಿವಾಸದಲ್ಲಿ 67 ವಯಸ್ಸಿನ ಕಿಟ್ಟಿ ಅವರ ಮೃತದೇಹ ಪತ್ತೆಯಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ದಿಂಬಿನಿಂದ ಉಸಿರುಗಟ್ಟಿಸಿ ಅವರನ್ನು ಕೊಲೆಗಯ್ಯಲಾಗಿದೆ ಎಂದು ಪೊಲೀಸ್ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ನಿನ್ನೆ ರಾತ್ರಿ ಸುಮಾರು 9 ಗಂಟೆ ಹೊತ್ತಿಗೆ ಅವರು ತಮ್ಮ ಮನೆಕೆಲಸದ ಮಹಿಳೆ ಜೊತೆ ಇದ್ದ ಹೊತ್ತಿನಲ್ಲಿ ಪರಿಚಯಸ್ತ ಧೋಬಿ ಮತ್ತು ಆತನ ಇಬ್ಬರು ಸಹಚರು ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಮನೆಕೆಲಸದ ಮಹಿಳೆಯನ್ನು ಆರೋಪಿಗಳು ಕೋಣೆಯಲ್ಲಿ ಕೂಡಿಹಾಕಿದ್ದು ಮಹಿಳೆಗೂ ಸಣ್ಣಪುಟ್ಟ ಗಾಯಗಳಾಗಿವೆ.

ಸುಮಾರು ರಾತ್ರಿ 11 ಗಂಟೆ ಹೊತ್ತಿಗೆ ಪೊಲೀಸರು ಮಾಹಿತಿ ಪಡೆದು ಪ್ರಕರಣದ ಮುಖ್ಯ ಆರೋಪಿಯನ್ನು ಬಂಧಿಸಿದ್ದಾರೆ. ಉಳಿದ ಇಬ್ಬರು ಆರೋಪಿಗಳಿಗಾಗಿ ಶೋಧ ಮುಂದುವರೆದಿದೆ.

67 ವರ್ಷ ವಯಸ್ಸಿನ ಕಿಟ್ಟಿ ಕುಮಾರಮಂಗಲಂ ಸುಪ್ರೀಂ ಕೋರ್ಟ್‌ ನ್ಯಾಯವಾದಿಯಾಗಿದ್ದರು. ಅವರ ಪತಿ ಪಿಆರ್ ಕುಮಾರಮಂಗಲಂ 1984 ರಲ್ಲಿ ಮೊಟ್ಟಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿದ್ದರು. ನಂತರ 1991 ರಿಂದ 92 ರ ವರೆಗೆ ಸಂಸದೀಯ ವ್ಯವಹಾರ ಮತ್ತು ಕಾನೂನು, ನ್ಯಾಯ ಮತ್ತು ಕಂಪನಿ ವ್ಯವಹಾರಗಳ ರಾಜ್ಯ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. 1992 ರಿಂದ 93 ರ ಅವಧಿಯಲ್ಲಿ ಸಂಸದೀಯ ವ್ಯವಹಾರಗಳ ಸಚಿವರಾಗಿ ಮತ್ತು 1998 ರಲ್ಲಿ ದೇಶದ ವಿದ್ಯುತ್ ಸಚಿವರಾಗಿ ಸೇವೆ ಸಲ್ಲಿಸಿದ್ದರು.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.