ಆಸ್ತಿ ತೆರಿಗೆ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು, ಡಿ. 28: ಹೊಸ ವರ್ಷಕ್ಕೆ ರಾಜ್ಯ ಸರ್ಕಾರವು, ಜನರಿಗೆ ಬಿಗ್ ಶಾಕ್ ನೀಡಲು ಮುಂದಾಗಿದೆ. ಆಸ್ತಿ ತೆರಿಗೆಯು ಶೇ.15ರಿಂದ ಶೇ.30ರಷ್ಟು ಹೆಚ್ಚಳ ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಈ ಮೂಲಕ ರಾಜ್ಯದ ಜನರಿಗೆ ಬಿಗ್ ಶಾಕ್ ನೀಡಿದೆ.

ಇಂದು ನಡೆದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯದ ಪಾಲಿಕೆ, ನಗರ, ಪುರಸಭೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಸೂದೆಗೆ ಅಂಗೀಕಾರ ಲಭಿಸಿದೆ. ಈ ಮೂಲಕ ಆಸ್ತಿ ತೆರಿಗೆ ಶೇ.15ರಿಂದ 30ರಷ್ಟು ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಇಂತಹ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲಿದೆ. ವಾಣಿಜ್ಯ ಕಟ್ಟಡದ ತೆರಿಗೆ ಹೆಚ್ಚಳಕ್ಕೂ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಮೂಲಕ ರಾಜ್ಯದ ಜನರಿಗೆ ಬಿಗ್ ಶಾಕ್ ನೀಡಲಿದೆ.

Exit mobile version