ನಾಲ್ಕು ತಿಂಗಳಲ್ಲೇ ಕನಿಷ್ಠ ಕೊರೊನಾ ಪ್ರಕರಣ ದಾಖಲು: 374 ಮಂದಿ ಸಾವು

ನವದೆಹಲಿ, ಜು. 20: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 30,093 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಕಳೆದ ನಾಲ್ಕು ತಿಂಗಳಲ್ಲಿ ದಾಖಲಾಗಿರುವ ಅತಿ ಕಡಿಮೆ ಪ್ರಕರಣಗಳು ಇದಾಗಿದೆ.
24 ಗಂಟೆಗಳಲ್ಲಿ ಕೋವಿಡ್ ನಿಂದಾಗಿ 374 ಮಂದಿ ಮೃತಪಟ್ಟಿದ್ದು, 45,254 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ ದೇಶದಲ್ಲಿ 4,06,130 ಪ್ರಕರಣಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಒಟ್ಟು ಪ್ರಕರಣಗಳ ಸಂಖ್ಯೆ 3,11,74,322 ತಲುಪಿದ್ದು, ಈ ಪೈಕಿ 4,14,482 ಮಂದಿ ಸಾವಿಗೀಡಾಗಿದ್ದಾರೆ ಹಾಗೂ 3,03,53,710 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೂ 41.18 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ಹಾಕಲಾಗಿದೆ.

Exit mobile version