ನವದೆಹಲಿ, ಆ. 23: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 25,072 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದು 160 ದಿನಗಳಲ್ಲೇ ಕನಿಷ್ಠ ಸಂಖ್ಯೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 155 ದಿನಗಳಲ್ಲೇ ಕನಿಷ್ಠ ಅಂದರೆ 3,33,924ಕ್ಕೆ ಕುಸಿದಿದ್ದು, ಒಟ್ಟಾರೆ ಸೋಂಕಿತರಲ್ಲಿ ಇದು 1.03ರಷ್ಟು ಮಾತ್ರ ಎಂದು ತಿಳಿಸಲಾಗಿದೆ.
ಒಂದು ದಿನದಲ್ಲಿ ಕೋವಿಡ್‌ನಿಂದ 389 ಮಂದಿ ಮೃತಪಟ್ಟಿದ್ದು, ಈ ಮೂಲಕ ಒಟ್ಟು ಮೃತಪಟ್ಟವರ ಸಂಖ್ಯೆ 4,34,756ಕ್ಕೆ ಹೆಚ್ಚಳವಾಗಿದೆ. ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 3,24,49,306ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಇದುವರೆಗೆ 58.25 ಕೋಟಿ ಡೋಸ್ ಲಸಿಕೆ ಹಾಕಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.