ಹಿಂದೂ ಕಾರ್ಯಕರ್ತರ ಮೇಲೆ ಪುತ್ತೂರಿನಲ್ಲಿ ಆರಕ್ಷಕರ ದೌರ್ಜನ್ಯ : ಇಬ್ಬರು ಪೊಲೀಸರ ಅಮಾನತು

Mangalore: ಡಿವಿ ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ (Atrocities on Hindu activists) ಭಾವಚಿತ್ರದ ಬ್ಯಾನರ್‌ ಹಾಕಿ ಚಪ್ಪಲಿ ಹಾರ ಹಾಕಿರುವ

ಆರೋಪಿಗಳಿಗೆ ಪೊಲೀಸರು ಚಿತ್ರಹಿಂಸೆ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.ಈ ವಿಚಾರವಾಗಿ ಜಿಲ್ಲೆಯ ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರನ್ನು ಹಿಂಸಾತ್ಮಕವಾಗಿ ನಡೆಸಿಕೊಂಡ ಪೊಲೀಸ್ ಅಧಿಕಾರಿಗಳ ವಿರುದ್ಧ

ಕೊನೆಗೂ ಕ್ರಮ ಕೈಗೊಳ್ಳಲಾಗಿದ್ದು, ಓರ್ವ ಉಪ ನಿರೀಕ್ಷಕ ಹಾಗೂ ಪೇದೆಯನ್ನು ಅಮಾನತು (Atrocities on Hindu activists) ಮಾಡಲಾಗಿದೆ.

ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡಿತ್ತು. ಈ ಹಿನ್ನೆಲೆಯಲ್ಲಿ ಬೇಸರಗೊಂಡು ನಳಿನ್ ಕುಮಾರ ಕಟೀಲ್, ಡಿವಿ ಸದಾನಂದಗೌಡ ಬ್ಯಾನರ್ ಗೆ

(Banner) ಹಿಂದು ಕಾರ್ಯಕರ್ತರು ಚಪ್ಪಲಿಹಾರ ಹಾಕಿ ಆಕ್ರೋಶ ಹೊರಹಾಕಿದ್ದರು.

ಬ್ಯಾನರ್ ಕಟ್ಟಿದ್ದ ಹಿಂದು ಕಾರ್ಯಕರ್ತನ್ನು ಬಂಧಿಸುವಂತೆ ಆಗಲೇ ಎಫ್‌ಐಆರ್ (FIR) ದಾಖಲಿಸಲಾಗಿತ್ತು. ಅದರಂತೆ ಪೊಲೀಸರು ಶಿಕ್ಷೆ ಕೊಟ್ಟು ಅಮಾನವೀಯವಾಗಿ ವರ್ತಿಸಿದ್ದಾರೆ. ಇದರಿಂದ ಹಿಂದು ಕಾರ್ಯಕರ್ತರು ಗಂಭೀರ

ಗಾಯಗೊಂಡು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ರಾಜ್ಯಾದ್ಯಂತ ಕಾರ್ಯಕರ್ತರು ಪುತ್ತೂರಿನಲ್ಲಿ ನಡೆದ ಪೊಲೀಸರ ದೌರ್ಜನ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿ, ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ರು.

ಇದನ್ನು ಓದಿ: ಮರಭೂಮಿ ಪಕ್ಕದಲ್ಲೇ ಸಮುದ್ರವಿರುವ ಅಪರೂಪದ ತಾಣ ಇಲ್ಲಿದೆ ನೋಡಿ!

ಈ ವಿಚಾರವಾಗಿ ಪುತ್ತೂರು (Puttur) ಗ್ರಾಮಾಂತರ ಉಪ ನಿರೀಕ್ಷಕ ಶ್ರೀನಾಥ್ ರೆಡ್ಡಿ (Srinath Reddy) ಹಾಗೂ ನಗರ ಠಾಣೆ ಕಾನ್ ಸ್ಟೇಬಲ್ ಅವರನ್ನು ಅಮಾನತುಗೊಳಿಸಿ ಎಂದು ಜಿಲ್ಲಾ ಎಸ್ಪಿ ವಿಕ್ರಂ ಅಮಟೆ ಆದೇಶ ಹೊರಡಿಸಿದ್ದಾರೆ.

ಡಿವೈಎಸ್ಪಿ ವೀರಯ್ಯ ಹಿರೇಮಠ ಅವರನ್ನು ರಜೆ ಮೇಲೆ ಕಳುಹಿಸಿದ ಎಸ್ಪಿ, ಡಿವೈಎಸ್ಪಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಮೇಲಧಿಕಾರಿಗಳಿಗೆ ಶಿಫಾರಸು ಮಾಡಿದ್ದಾರೆ.

ಇದೇ ವೇಳೆ ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ

(DYSP) ನೇತೃತ್ವದಲ್ಲಿ ಪೊಲೀಸರ ವಿರುದ್ಧ ತನಿಖೆ ನಡೆಸಲಾಗುವುದು.

ಥಳಿಸಿದ ಹಿಂದೂ ಕಾರ್ಯಕರ್ತ ಅವಿನಾಶ್ (Avinash) ದೂರಿನ ಆಧಾರದ ಮೇಲೆ ಈ ಎಫ್‌ಐಆರ್ ದಾಖಲಾಗಿದೆ.

ಪುತ್ತೂರಿನಲ್ಲಿ ಹಿಂದೂ ಹೋರಾಟಗಾರರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರುವ ಬಗ್ಗೆ ಎಸ್ಪಿ ವಿಕ್ರಂ (Vikram) ಅಮಾಟೆ ಅವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮೊಕ್ಕಾಂ ಹೂಡಿದ್ದಾರೆ.

ಪ್ರಕರಣದ ಗಂಭೀರತೆಯನ್ನು ಅರಿತ ಎಸ್ಪಿ ಠಾಣೆಗೆ ತೆರಳಿ ಪುತ್ತೂರು ಡಿವೈಎಸ್ಪಿ ವೀರಯ್ಯ ಹಿರೇಮಠ, ಸಂಪ್ಯ ಎಸ್ಸೈ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದರು. ಎಸ್ಪಿ ವಿಕ್ರಂ ಪ್ರಕರಣದ ಮಾಹಿತಿ ಪಡೆದರು

ರಶ್ಮಿತಾ ಅನೀಶ್

Exit mobile version