Mysore: ದಸರಾ (Dasara) ನೋಡಲು ಬಂದಿದ್ದವರು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದು, ಬೇಗ ಹೋಗಿ ಎಂದು ಹೇಳಿದಕ್ಕೆ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ವೈ.ರಾಜು (Y Raju), ಅರುಣ್ ಕೌಶಿಕ್ ಮೇಲೆ ನಡುರಸ್ತೆಯಲ್ಲೇ ಹಲ್ಲೆ ನಡೆಸಿದ್ದಾರೆ.
ರಾಜ್ಯ, ಹೊರ ರಾಜ್ಯದಿಂದೆಲ್ಲ ಸಾವಿರಾರು ಪ್ರವಾಸಿಗರು ಆಗಮಿಸಿ ಮೈಸೂರಿನ (Mysore) ದಸರಾವನ್ನು ಕಣ್ತುಂಬಿಕೊಳ್ಳುತ್ತಿದ್ದು, ಅರಮನೆ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿರುವ ಬೆನ್ನಲ್ಲೆ ಅಹಿತಕರ ಘಟನೆಯೊಂದು ನಡೆದಿದೆ. ಬೇಗ ಹೋಗಿ ಎಂದು ಹೇಳಿದಕ್ಕೆ ದಸರಾ ನೋಡಲು ಬಂದವರು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾರೆ.
ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ವೈ.ರಾಜು, ಅರುಣ್ ಕೌಶಿಕ್ (Arun Kaushik) ಮೇಲೆ ನಡುರಸ್ತೆಯಲ್ಲೇ ಹಲ್ಲೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಬೆಂಗಳೂರಿನ ಐವರ ಮೇಲೆ ಎಫ್ಐಆರ್ ದಾಖಲಾಗಿದೆ.
ಪೊಲೀಸ್ ಸಿಬ್ಬಂದಿ ವೈ.ರಾಜು, ಅರುಣ್ ಕೌಶಿಕ್ ಅವರು, ಮೈಸೂರಿನ ಹಾರ್ಡಿಂಗ್ ಸರ್ಕಲ್ (Harding Circle) ವೃತ್ತದಲ್ಲಿ ಕರ್ತವ್ಯದಲ್ಲಿದ್ದ ರಸ್ತೆಯಲ್ಲಿ ಜನಸಂದಣಿಯನ್ನು ನಿಯಂತ್ರಿಸಲು ಜನರನ್ನು ಬೇಗ ಹೋಗುವಂತೆ ಹೇಳುತ್ತಿದ್ದರು. ಟ್ರಾಫಿಕ್ ಜಾಮ್ (Traffic Jam) ಆಗುತ್ತೆ ಮುಂದೆ ಹೋಗಿ. ಬೇಗ ಹೋಗಿ ಎಂದಿದ್ದಕ್ಕೆ ಐವರು ಸೇರಿಕೊಂಡು ಪೊಲೀಸರ ಮೇಲೆಯೇ ದೌರ್ಜನ್ಯ ಎಸಗಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಟ್ಟನಂತೆ ದಸರಾ ವೀಕ್ಷಣೆಗೆ ಬಂದಿದ್ದ ಬೆಂಗಳೂರು (Bengaluru) ಮೂಲದ ಉಮೇಶ್, ಹರೀಶ್, ಧ್ರುವ, ಲತಾ (Latha), ಗಾನವಿ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ FIR ದಾಖಲಾಗಿದೆ.
ಭವ್ಯಶ್ರೀ ಆರ್.ಜೆ