ಅತ್ತಿಬೆಲೆ ಅಗ್ನಿಅವಘಡ: ಪಟಾಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಧಿಕಾರಿಗಳ ಅಮಾನತು

Bengaluru: ನಾಲ್ವರು ಅಧಿಕಾರಿಗಳನ್ನು ಅತ್ತಿಬೆಲೆ (Attibele Crackers Disaster) ಪಟಾಕಿ ದುರಂತ ಪ್ರಕರಣಕ್ಕೆ ಸಬಂಧಿಸಿದಂತೆ ಅಮಾನತು ಮಾಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ

(Siddaramaiah) ಸೂಚನೆ ಬೆನ್ನಲ್ಲೆ ಇದೀಗ ಡಿಇ ಕಾಯ್ದಿರಿಸಿ ಪಾರದರ್ಶಕವಾದ ವರದಿ ನೀಡದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದ ಮೇಲೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಆನೇಕಲ್ (Anekal) ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್ (Shashidhar Madyal), ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು

ಸೇವೆಯಿಂದ ಅಮಾನತುಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸಿರುವುದಲ್ಲದೆ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

ಪಟಾಕಿ ಅಂಗಡಿಗೆ 1 ಸಾವಿರ ಕೆ.ಜಿ ಮಾತ್ರ ಸ್ಟಾಕ್ (Stock) ಇಡಲು ಅವಕಾಶ ನೀಡಲಾಗಿತ್ತು. ಪರವಾನಿಗೆ ನೀಡುವಾಗ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೆ ಪರವಾನಿಗೆ ನೀಡಿರುವ ಹಿನ್ನಲೆಯಲ್ಲಿ

ಈ ಅವಘಡಕ್ಕೆ ಕಾರಣವೆಂದು 4 ಜನ ಅಧಿಕಾರಿಗಳನ್ನ ಸೇವೆಯಿಂದ ಅಮಾನತು ಮಾಡಿ (Attibele Crackers Disaster) ಇಲಾಖೆ ತನಿಖೆಗೆ ಆದೇಶಿಸಲಾಗಿದೆ.

ಅತ್ತಿಬೆಲೆ @Attibele ಅಗ್ನಿ ಅವಘಡಕ್ಕೆ ಅಧಿಕಾರಿಗಳೇ ಹೊಣೆ ಎಂದು ವರದಿ ಬಂದಿದ್ದು, ಈ ಪ್ರಕರಣದಲ್ಲಿ ಇನ್ನಷ್ಟು ಅಧಿಕಾರಿಗಳ ತಲೆದಂಡವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಪೊಲೀಸ್ ಮತ್ತು

ಅಗ್ನಿಶಾಮಕ ಠಾಣೆ ಇಲಾಖೆ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವ ಸಾಧ್ಯತೆಗಳಿವೆ.

ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳೂ ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು

ಸೂಚಿಸಿದರು ಮತ್ತು ಅಮಾನತಿನ ಕುರಿತು ಡಿಸಿ ಹಾಗೂ ಎಸ್‍ಪಿಗೆ ಸಿಎಂ ಸೂಚನೆ ನೀಡಿದ್ದರು.

ಇದೀಗ ಸಿಎಂ ಸೂಚನೆ ಬೆನ್ನಲ್ಲೆ ಇದೀಗ ಡಿಇ ಕಾಯ್ದಿರಿಸಿ ಪಾರದರ್ಶಕವಾದ ವರದಿ ನೀಡದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದ ಮೇಲೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಅತ್ತಿಬೆಲೆ- ಹೊಸೂರು #Hosuru ಗಡಿ ಭಾಗದಲ್ಲಿ ಬರುವ ಪಟಾಕಿಗಳ ಕುರಿತು ತೀವ್ರ ನಿಗಾ ವಹಿಸಲು ಸೂಚಿಸಿದರು. ಈ ಕುರಿತು ನ್ಯಾಯಾಲಯಗಳ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು

ಎಲ್ಲ ರೀತಿಯ ಕ್ರಮ ಕೈಗೊಳ್ಳಲು ಸೂಚಿಸಿದರು. ಹಸಿರು ಪಟಾಕಿಗಳ ಮಾರಾಟವನ್ನೂ ಖಾತರಿಪಡಿಸಿಕೊಳ್ಳಲು ಸೂಚಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K Shivakumar) ಅವರು ಮಾತನಾಡಿ, ರಾಜಕೀಯ ಸಮಾವೇಶಗಳಲ್ಲಿ ಹಾಗೂ ವಿವಾಹ ಸಮಾರಂಭಗಳಲ್ಲಿ ಸುರಕ್ಷತೆಯ

ದೃಷ್ಟಿಯಿಂದ ಪಟಾಕಿ ಬಳಕೆಯನ್ನು ನಿಷೇಧಿಸುವಂತೆ ಸಲಹೆ ನೀಡಿದರು.

ಇದನ್ನು ಓದಿ: ಇಂದು ಮತ್ತು ನಾಳೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

Exit mobile version