ಕೋರಮಂಗಲದಲ್ಲಿ ಭೀಕರ ರಸ್ತೆ ಅಪಘಾತ ಶಾಸಕ ಪುತ್ರ ಸೇರಿ 7 ಬಲಿ

ಬೆಂಗಳೂರು ಆ 31 : ನಿನ್ನೆ ತಡರಾತ್ರಿ ನಗರದ ಕೋರಮಂಗಲ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹೊಸುರು ಶಾಸಕ ಪುತ್ರ ಸೇರಿ 7 ಮಂದಿ ಸಾವನಪ್ಪಿದ್ದಾರೆ.

ಘಟನೆ ವಿವರ : ನಿನ್ನೆ ತಡರಾತ್ರಿ ಸುಮಾರು 1.30ಕ್ಕೆ ಕೋರಮಂಗಲದ ಮಂಗಳ ಕಲ್ಯಾಣಮಂಟಪದ ಬಳಿ ಫುಟ್ಪಾತ್ ಮೇಲಿನ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದೆ

ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ. ಗುದ್ದಿದ ರಭಸಕ್ಕೆ 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆಗೆ ದಾಖಲಿಸಿದ ವೇಳೆ ಮೃತಪಟ್ಟಿದ್ದಾರೆ. ಅಪಘಾತಕ್ಕೆ ಅತಿ ವೇಗವೇ ಕಾರಣ ಎಂದು ತಿಳಿದುಬಂದಿದೆ. ವೇಗದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ . ಫುಟ್‌ಪಾತ್‌ ಹತ್ತಿ 2 ಬೊಲ್ಲಾರ್ಡ್ಸ್‌ಗೆ ಕಾರು ಡಿಕ್ಕಿಯಾಗಿದೆ. ಬಳಿಕ ಪಕ್ಕದ ಕಟ್ಟಡದ ಗೋಡೆಗೂ ಗುದ್ದಿದ್ದು ನಂತರ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರಿನ ಮುಂದಿನ ಸೀಟ್‌ ತುಂಬಾ ರಕ್ತದ ಕಲೆಗಳಿದ್ದು ಕಾರಿನ ಎಡಭಾಗದ 2 ಟೈರ್‌ ಸಂಪೂರ್ಣ ಪೀಸ್‌ಪೀಸ್‌ ಆಗಿದೆ. ಕಾರಿನ ಮುಂದಿನ ಸೀಟ್‌ನಲ್ಲಿ ಮೂವರು ಕುಳಿತಿದ್ದು ಹಿಂಬದಿ ಸೀಟ್‌ನಲ್ಲಿ ನಾಲ್ವರು ಕುಳಿತಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಘಟನೆಯಲ್ಲಿ ಮೃತರಾದವರನ್ನು ಹೊಸೊರು ಶಾಸಕ ಪುತ್ರರಾದ ಹೊಸೂರು ಮೂಲದ ಕರುಣಾಸಾಗರ್, ಪತ್ನಿ ಬಿಂದು,ಕೇರಳ ಮೂಲದ ಅಕ್ಷಯ್ ಗೋಯಲ್, ಇಶಿತಾ,ಧನುಷಾ,ಹುಬ್ಬಳ್ಳಿಯ ರೋಹಿತ್, ಹರಿಯಾಣ ಮೂಲದ ಉತ್ಸವ್ ಮೃತ ದುರ್ದೈವಿಗಳು. ಎಂದು ಗುರುತಿಸಲಾಗಿದೆ.

Latest News

ದೇಶ-ವಿದೇಶ

ಮನೆ ಮತ್ತು ಕಾರ್ಪೊರೇಟ್ ಕಚೇರಿಗಳ ಮೇಲೆ ಶೇ.18 ರಷ್ಟು ಜಿಎಸ್‌ಟಿ ? ; ಏನಿದು ಗೊಂದಲ ಇಲ್ಲಿದೆ ಮಾಹಿತಿ

ಹೊಸ ನಿಯಮಗಳ ಪ್ರಕಾರ, ಜಿಎಸ್‌ಟಿ ನೋಂದಾಯಿತ ಹಿಡುವಳಿದಾರನು ರಿವರ್ಸ್ ಚಾರ್ಜ್ ಮೆಕ್ಯಾನಿಸಂ (RCM) ಅಡಿಯಲ್ಲಿ ತೆರಿಗೆಯನ್ನು ಪಾವತಿಸಲು ಹೊಣೆಗಾರನಾಗಿರುತ್ತಾನೆ.

ಪ್ರಮುಖ ಸುದ್ದಿ

ತಾಜುದ್ದೀನ್ಜುನೈದೀ ಮತ್ತು  ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಗಣ್ಯರ ಸಂತಾಪ

ಪ್ರಖ್ಯಾತ ಗಾಯಕರು, ತಮ್ಮ ಸುಸ್ವರದ ಮೂಲಕ ಕವಿ ಗೀತೆಗಳಿಗೆ ಮೆರುಗು ತಂದುಕೊಟ್ಟಿದ್ದ ಶ್ರೀ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ.

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!