ಟಿ20 ವಿಶ್ವಕಪ್‌ಗೆ ಆಸ್ಟ್ರೇಲಿಯಾ ತಂಡ ಪ್ರಕಟ

ಸಿಡ್ನಿ ಆ 19 : ಚುಟುಕು ಕ್ರಿಕೆಟ್‌ಗೆ ಈಗಾಗಲೇ ವೇಳಾಪಟ್ಟಿ ಪ್ರಕಟಗೊಂಡಿದ್ದು ಈ ಬಾರಿಯ ಟಿ20 ವಿಶ್ವಕಪ್​ ಪಂದ್ಯಾವಳಿಗಳು ಅಕ್ಟೋಬರ್ 17 ರಿಂದ ಶುರುವಾಗಲಿದ್ದು, ನವೆಂಬರ್ 14 ರ ವರೆಗೆ ಯಎಇ ಮತ್ತು ಓಮನ್‌ನಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಇಗಾಗಲೇ ಆಸ್ಟ್ರೇಲಿಯಾ ಕೂಡ ಬಲಿಷ್ಠ 15 ಮಂದಿ ಆಟಾಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದ್ದು ಈ ತಂಡದಲ್ಲಿ ಅನುಭವಿ ಬ್ಯಾಟ್‌ಮನ್‌ಗಳಾದ ಜೈ ರಿಚರ್ಡ್ಸನ್, ಆಂಡ್ರ್ಯೂ ಟೈ, ಜೇಸನ್ ಬೆಹ್ರೆಂಡೋರ್ಫ್, ಅಲೆಕ್ಸ್ ಕ್ಯಾರಿ, ಮೊಯಿಸ್ ಹೆನ್ರಿಕ್ಸ್, ಜೋಸ್ ಫಿಲಿಪ್ ಮತ್ತು ಆಸ್ಟನ್ ಟರ್ನರ್ ಅವರನ್ನು ವಿಶ್ವಕಪ್​ ತಂಡದಿಂದ ಕೈ ಬಿಡಲಾಗಿದೆ.

ಈ ಬಾರಿ ವಿಶ್ವಕಪ್ ತಂಡದಲ್ಲಿ ಜೋಶ್ ಇಂಗ್ಲಿಸ್ ಸ್ಥಾನ ಪಡೆದಿದ್ದಾರೆ. ಇವರು ಇದೇ ಮೊದಲ ಬಾರಿಗೆ ರಾಷ್ಟ್ರೀಯ ತಂಡದಲ್ಲಿ ಸ್ಥಾನದಲ್ಲಿ ಪಡೆದಿದ್ದು ಇವರು ಹಲವು  ಲೀಗ್​ಗಳನ್ನು ಆಡಿದ್ದು  63 ಟಿ20 ಪಂದ್ಯಗಳಿಂದ ಇದುವರೆಗೆ 1645 ರನ್ ಗಳಿಸಿದ್ದಾರೆ. ಇದರಲ್ಲಿ 2 ಶತಕ ಮತ್ತು 11 ಅರ್ಧ ಶತಕಗಳು ಸೇರಿವೆ.

ಆಸ್ಟ್ರೇಲಿಯಾ ಬಿಡುಗಡೆಗೊಳಿಸಿದ ತಂಡ ಇಂತಿದೆ :

ಆರೋನ್ ಫಿಂಚ್ (ನಾಯಕ), ಆಸ್ಟನ್ ಅಗರ್, ಪ್ಯಾಟ್ ಕಮಿನ್ಸ್, ಜೋಶ್ ಹ್ಯಾಝಲ್‌ವುಡ್, ಜೋಸ್ ಇಂಗ್ಲಿಸ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ವಿಪ್ಸನ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್ ಮತ್ತು ಆಡಮ್ ಝಂಪಾ. ಕೇನ್ ರಿಚರ್ಡ್ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್.

Latest News

ರಾಜಕೀಯ

`ನನ್ನಲ್ಲೂ ದಾಖಲೆಗಳಿವೆ ; `ಸರ್ಟಿಫಿಕೇಟ್ ಕೋರ್ಸ್ʼಗಿಂತ ಬೃಹತ್ ಚಾಪ್ಟರ್ 1, 2, 3 ಆಗುತ್ತವೆ, ಬಿಚ್ಚಲೇ? : ಹೆಚ್.ಡಿಕೆ

ಕಟ್ಟಡಗಳ ಹೆಸರಿನಲ್ಲಿ ಕಮೀಷನ್ ಕಾಂಚಾಣ, ಅಧಿಕಾರಿಗಳನ್ನು ಒಳಕ್ಕೆ ಹಾಕಿಕೊಂಡು ಡೀಲ್ ಮಾಡುವ ಅಶ್ವತ್ ನಾರಾಯಣ್, ಇದೇನಾ ನೀವು ನೀಡುತ್ತಿರುವ ಉನ್ನತ ಶಿಕ್ಷಣ?

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.