English English Kannada Kannada

Preetham Kumar P

tvs-scooty

ಪೆಟ್ರೋಲ್‌ ಬೆಲೆ ಏರಿಕೆ ಹಿನ್ನಲೆ, ದ್ವಿಚಕ್ರ ವಾಹನ ಖರೀದಿಯಲ್ಲಿಇಳಿಕೆ

ಕಳೆದ ಮೂರು ವರ್ಷದ ಹಿಂದಿನ ಸ್ಥಿತಿಗೆ ಹೋಲಿಸಿದರೆ ಈ ಬಾರಿ ದ್ವಿಚಕ್ರ ವಾಹನ ಖರೀದಿದಾರರ ಸಂಖ್ಯೆಯಲ್ಲಿ ತೀವ್ರ ಕುಸಿತ ಕಂಡುಬಂದಿದೆ. ಕೋವಿಡ್‌(Covid19) ಅಲೆಯ ಹೊಡೆತದಿಂದಾದ ಆರ್ಥಿಕ ಹಿಂಜರಿತ ಹಾಗೂ ಉದ್ಯೋಗ(Job) ನಾಶಗಳು ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.

ಆರ್ಯನ್ ಖಾನ್ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್

 ಪ್ರಭಾಕರ್ ಸೈಲ್ ಎಂಬಾತ 25 ಕೋಟಿ ರೂಪಾಯಿ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಅಲ್ಲದೆ ಎನ್ ಸಿ ಬಿ ಅಧಿಕಾರಿಗಳು ಖಾಲಿ ಪೇಪರ್ ಮೇಲೆ ಸಹಿ ಮಾಡಿಸಿಕೊಂಡಿರುವ ಬಗ್ಗೆಯೂ ಆರೋಪಿಸಿದ್ದಾನೆ.

ಅಮರಿಂದರ್ ಸಿಂಗ್ ಹೊಸ ಪಕ್ಷ ಘೋಷಣೆ

“ನವಜೋತ್ ಸಿಂಗ್ ಸಿಧು ಅವರು ಎಲ್ಲಿಂದ ಕಣಕ್ಕಿಳಿದರೂ ನಾವು ಅವರ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ” ಎಂದು ಕ್ಯಾಪ್ಟನ್ ಅಮರಿಂದರ್ ಸಿಂಗ್ ಚಂಡೀಗಢದಲ್ಲಿ ಹೇಳಿದ್ದಾರೆ.

ಉಪ ಚುನಾವಣಾ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

ಈ ಅವಧಿಯಲ್ಲಿ ಚುನಾವಣಾ ಪ್ರಚಾರ, ಬಹಿರಂಗ ಸಭೆ-ಸಮಾರಂಭಗಳನ್ನು ನಿಷೇಧಿಸ ಲಾಗಿದೆ. ಆದರೆ ಮನೆ ಮನೆ ಪ್ರಚಾರಕ್ಕೆ ಯಾವುದೇ ಯಾವುದೇ ಅಡ್ಡಿ ಇರುವುದಿಲ್ಲ. ಆದರೆ ಒಂದು ಗುಂಪಿನಲ್ಲಿ ಐದು ಜನರಿಗಿಂತ ಹೆಚ್ಚು ಜನರು ಒಟ್ಟಾಗಿ ಮನೆ ಮನೆ ಪ್ರಚಾರ ಮಾಡುವ ಹಾಗಿಲ್ಲ. ಈ ನಿಯಮ ಅಭ್ಯರ್ಥಿಗಳಿಗೂ ಅನ್ವಯಿಸುತ್ತದೆ. ಚುನಾವಣಾ ನಿಯಮಗಳ ಜೊತೆಗೆ ಕೋವಿಡ್ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.

ರೈಲಿನಲ್ಲಿ ಈ ತಪ್ಪುಗಳನ್ನು ಮಾಡುವುದು ಶಿಕ್ಷಾರ್ಹ ಅಪರಾಧ

ರೈಲ್ವೇಯ ಟ್ವೀಟ್ ಪ್ರಕಾರ, ಈಗ ಪ್ರಯಾಣಿಕರು ಸೀಮೆಎಣ್ಣೆ, ಒಣ ಹುಲ್ಲು, ಒಲೆ, ಪೆಟ್ರೋಲ್,  ಗ್ಯಾಸ್ ಸಿಲಿಂಡರ್, ಬೆಂಕಿಕಡ್ಡಿಗಳು, ಪಟಾಕಿ ಅಥವಾ ರೈಲು ವಿಭಾಗದಲ್ಲಿ ಬೆಂಕಿ ಹರಡುವ ಯಾವುದೇ ವಸ್ತುವಿನೊಂದಿಗೆ ಪ್ರಯಾಣಿಸುವಂತಿಲ್ಲ. ಪ್ರಯಾಣಿಕರ ಪ್ರಯಾಣವನ್ನು ಸುರಕ್ಷಿತವಾಗಿಸಲು ರೈಲ್ವೆ ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದೆ.

50ರೂ ಗಿಂತ ಹೆಚ್ಚಿನ ರೀಚಾರ್ಜ್‌ ಮೇಲೆ ಪ್ರೊಸೆಸಿಂಗ್ ಶುಲ್ಕ ವಿಧಿಸಲಿರುವ ಫೋನ್ ಪೇ

ಫೋನ್ ಪೇ ಮೂಲಕ ರೀಚಾರ್ಜ್ ಮಾಡುವವರಿಗೆ ಶುಲ್ಕ ವಿಧಿಸುವ ಸಣ್ಣ ಪ್ರಮಾಣದ ಪ್ರಯೋಗ ಇದಾಗಿದ್ದು, ಇದರಲ್ಲಿ ಕೆಲವು ಬಳಕೆದಾರರು ಮೊಬೈಲ್ ರೀಚಾರ್ಜ್ ಗಳಿಗೆ ಚಾರ್ಜಿಂಗ್ ಶುಲ್ಕ ಪಾವತಿಸಬೇಕಿದೆ ಎಂದು ಫೋನ್ ಪೇ ಹೇಳಿಕೊಂಡಿದೆ. ಅಂದರೆ, ಅದು ನಿಮ್ಮ ಖಾತೆಯು ಪ್ರಾಯೋಗಿಕ ಗುಂಪಿನ ಅಡಿಯಲ್ಲಿ ಬರುತ್ತದೆಯೇ ಎಂಬುದನ್ನು ಅವಲಂಬಿಸಿರುತ್ತದೆ. ಈ ಪ್ರಯೋಗ ಯಶಸ್ವಿಯಾದರೆ ಶೀಘ್ರದಲ್ಲೇ ಫೋನ್ ಪೇ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಇನ್ನು ಫೋನ್ ಪೇ ಎಲ್ಲಾ ಪಾವತಿ ಸೇವೆಗಳ ಮಾದರಿಯಲ್ಲಿಯೇ ಕ್ರೆಡಿಟ್ ಕಾರ್ಡ್ ಗಳ ಮೂಲಕ ಮಾಡಿದನು ಎಲ್ಲಾ ವಹಿವಾಟುಗಳಿಗೆ ಶುಲ್ಕ ವಿಧಿಸುತ್ತಿದೆ. ಆದರೆ ಇತರೆ ಪಾವತಿ ಸೇವೆಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವುದಿಲ್ಲ ಎಂದು ಫೋನ್ ಪೇ ಹೇಳಿದೆ.

ಭಾರತ ತಂಡದ ಕೋಚ್‌ ಹುದ್ದಗೆ ಅರ್ಜಿ ಸಲ್ಲಿಸಿದ ಕ್ರಿಕೆಟ್‌ ದಿಗ್ಗಜ

ನಿರೀಕ್ಷೆಯಂತೆಯೇ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಟೀಮ್ ಇಂಡಿಯಾದ ಮುಖ್ಯ ಕೋಚ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾದ ಮುಖ್ಯ ಕೋಚ್ ಹುದ್ದೆಗೆ ದ್ರಾವಿಡ್ ಮತ್ತಷ್ಟು ಹತ್ತಿರವಾಗಿದ್ದಾರೆ. ಬಿಸಿಸಿಐ ಟೀಮ್ ಇಂಡಿಯಾ ಕೋಚ್ ಹುದ್ದೆಗೆ ದ್ರಾವಿಡ್ ಆಯ್ಕೆಗೆ ಸಂಬಂಧಿಸಿದ ಅಧಿಕೃತ ಪ್ರಕ್ರಿಯೆಗಳನ್ನು ನಡೆಸಲಿದೆ

Waqar Younis

ವಾಖರ್ ಯೂನಿಸ್‌ ಹೇಳಿಕೆಗೆ ಕ್ರಿಕೆಟ್‌ ದಿಗ್ಗಜರಿಂದ ತೀವ್ರ ಆಕ್ರೋಶ

ಈತನ ಹೇಳಿಕೆಗೆ ಜಾಗತಿಕ ಮಟ್ಟದಲ್ಲಿ ಭಾರೀ ಟೀಕೆಗಳು ವ್ಯಕ್ತವಾಗಿದ್ದು, ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಟ್ವೀಟ್ ಮಾಡಿ, ಇದು ಜಿಹಾದಿ ಮನಸ್ಥಿತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ರಿಕೆಟ್ ಕಮೆಂಟೇಟರ್ ಹರ್ಷ ಭೋಗ್ಲೆ ಅವರು, ವಾಖರ್ ಯೂನಿಸ್ ಅವರ ಹೇಳಿಕೆ ಬೇಸರ ತರಿಸಿದೆ ಎಂದಿದ್ದಾರೆ.

ಪಟಾಕಿ ಅಂಗಡಿಗೆ ಬೆಂಕಿ 6 ಮಂದಿ ಸಾವು

ಶಂಕರಾಪುರಂನಲ್ಲಿ ದಿನಸಿ ಅಂಗಡಿಯಲ್ಲಿ ದೀಪಾವಳಿ ಸಮಯವಾಗಿರುವುದರಿಂದ ಕೆಲ ದಿನಗಳ ಹಿಂದೆ ಪಟಾಕಿ ಅಂಗಡಿಯನ್ನು ತೆರೆಯಲಾಗಿತ್ತು. ಕಟ್ಟಡದ ಮೊದಲ ಮಹಡಿಯಲ್ಲಿ ಪಟಾಕಿಗಳನ್ನು ಸಂಗ್ರಹಿಸಿಡಲಾಗಿತ್ತು. ನಿನ್ನೆ ರಾತ್ರಿ ಪಟಾಕಿಗಳು ತುಂಬಿದ್ದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಪಟಾಕಿಗಳು ಒಂದರ ನಂತರ ಒಂದರಂತೆ ಅವ್ಯಾಹತವಾಗಿ ಸ್ಫೋಟಗೊಳ್ಳಲು ಆರಂಭಿಸಿದವು

Submit Your Article