vijaya times advertisements
Visit Channel

Preetham Kumar P

ಮತಾಂತರ ನಿಷೇಧ ಕಾಯ್ದೆಗೆ ಕಾಂಗ್ರೆಸ್‌ ತೀವ್ರ ವಿರೋಧ

ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ದ್ವೇಷದ ರಾಜಕಾರಣ ಮಾಡುತ್ತಿದೆ. ಯಾವುದೇ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವುದು ಸರಿಯಲ್ಲ, ಬಿಜೆಪಿ ಸರ್ಕಾರರ ಇಂತಹ ದುಸ್ಸಾಹಸಕ್ಕೆ ಮುಂದಾಗಬಾರದು.

Zoom ಮೀಟಿಂಗ್‌ನಲ್ಲೇ 900 ಉದ್ಯೋಗಿಗಳನ್ನು ವಜಾಗೊಳಿಸಿದ better.com

ಇದು ನೀವು ಕೇಳಲು ಬಯಸುವ ಸುದ್ದಿಯಲ್ಲ. ನೀವು ಈ ಕರೆಯಲ್ಲಿದ್ದರೆ, ನೀವು ವಜಾಗೊಳಿಸುತ್ತಿರುವ ದುರಾದೃಷ್ಟಕರ ಗುಂಪಿನ ಭಾಗವಾಗಿದ್ದೀರಿ, ನಿಮ್ಮ ಉದ್ಯೋಗವನ್ನು ತಕ್ಷಣವೇ ಕೊನೆಗೊಳಿಸಲಾಗುತ್ತಿದೆ ಎಂದು ವಿಶಾಲ್ ಗಾರ್ಗ್ ಝೂಮ್ ಕರೆಯ ಮುಖೇನ ಕಂಪನಿಯ ಉದ್ಯೋಗಿಗಳಿಗೆ ಹೇಳಿದ್ದಾರೆ.

ಜಾತ್ಯತೀತ ಶಕ್ತಿಗಳನ್ನು ಮುಗಿಸುವುದೇ ಕಾಂಗ್ರೆಸ್‌ ಉದ್ದೇಶ – ಹೆಚ್‌ಡಿಕೆ

ದೇವೇಗೌಡರು ಪ್ರಧಾನಿ ಆಗಿದ್ದು ಕಾಂಗ್ರೆಸ್ ನಿಂದ ಎನ್ನುತ್ತಾರೆ. ಆದರೆ  ದೇವೇಗೌಡರು ಪ್ರಧಾನಿ ಮಾಡಿ ಎಂದು ಅರ್ಜಿ‌ ಇಟ್ಟುಕೊಂಡು ಹೋಗಿದ್ರಾ. ನಾನು ಮುಖ್ಯಮಂತ್ರಿ ಆದಾಗ ಕಾಂಗ್ರೆಸ್ ಮುಂದೆ ಅರ್ಜಿ ಇಟ್ಟುಕೊಂಡು ಹೋಗಿದನ್ನಾ. ನಮ್ಮನ್ನ ಬೆಂಬಲ ಕೊಟ್ಟಾಗೆ ಮಾಡಿ ಕುತ್ತಿಗೆ ಕುಯ್ಯುವುದೇ ಇವರ ಕೆಲಸ ಎಂದು ಹೆಚ್.ಡಿಕೆ ಆಕ್ರೋಶ ವ್ಯೆಕ್ತಪಡಿಸಿದರು.

ಕೃಷಿ ಕಾಯ್ದೆ ಹೋರಾಟಕ್ಕೆ ರೈತರು ಬಲಿಯಾಗಿಲ್ಲ – ನರೇಂದ್ರ ಸಿಂಗ್ ತೋಮರ್

ಕೇಂದ್ರ ಸರ್ಕಾರವು ಜಾರಿಗೊಳಿಸಿದ್ದ 3 ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದೊಂದು ವರ್ಷದಿಂದ ರೈತರು ಪ್ರತಿಭಟನೆ ನಡೆಸಿದ್ದರು. ‘ಅನ್ನದಾತ’ರ ಪ್ರತಿಭಟನೆಗೆ ಕೊನೆಗೂ ಮಣಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 3 ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುವುದಾಗಿ ಘೋಷಿಸಿತ್ತು. ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸುಮಾರು 700ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದರು.

ಸೇನಾ ಗೌರವಗಳೊಂದಿಗೆ ಸಿಡಿಎಸ್‌ ಬಿಪಿನ್‌ ರಾವತ್ ಅಂತ್ಯ ಸಂಸ್ಕಾರ

ಇಂದು ಮಧ್ಯಾಹ್ನ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಅವರ ಪಾರ್ಥಿವ ಶರೀರಗಳನ್ನು ಅವರ ಮನೆಯಲ್ಲಿ ಅಂತಿಮ ದರ್ಶನಕ್ಕಾಗಿ ಇರಲಿಸಲಾಗಿತ್ತು. ರಾವತ್ ನಿವಾಸದಲ್ಲಿ ಕೇಂದ್ರ ಗೃಹ ಸಚಿವ ಅಮಿತ್​ ಶಾ, ರಕ್ಷಣಾ ಸಚಿವ ರಾಜನಾಥ್​ ಸಿಂಗ್, ಕಾಂಗ್ರೆಸ್​ ನಾಯಕರಾದ ರಾಹುಲ್​​ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​​​, ಹರ್ಯಾಣ ಸಿಎಂ ಮನೋಹರ್​ ಲಾಲ್​ ಕಟ್ಟಾರ್, ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿಗಳಾದ ಎನ್​.ವಿ. ರಮಣ ಸೇರಿದಂತೆ ಗಣ್ಯಾತಿಗಣ್ಯರು ನಮನ ಸಲ್ಲಿಸಿದರು.

ಹೆಲಿಕಾಪ್ಟರ್ ದುರಂತದ ಬಗ್ಗೆ ಸಮಗ್ರ ತನಿಖೆ – ವಾಯುಸೇನೆ

ಹೆಲಿಕಾಪ್ಟರ್​ ಪತನದ ಪ್ರಕರಣವನ್ನು ತ್ರಿ-ಸೇವಾ ತನಿಖೆಗೆ ಐಎಫ್​ ಆದೇಶ ನೀಡಿದೆ. ಇದರ ಮುಂದಾಳತ್ವವನ್ನು ಏರ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಟ್ರೈನಿಂಗ್ ಕಮಾಂಡ್ ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ನೇತೃತ್ವ ವಹಿಸಲಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಸಂಸತ್ತಿಗೆ ತಿಳಿಸಿದ್ದರು. ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ಅವರು ವಾಯುಸೇನೆಯ ಹಿರಿಯ ಹೆಲಿಕಾಪ್ಟರ್ ಪೈಲಟ್ ಆಗಿದ್ದಾರೆ.

ಒಮಿಕ್ರೋನ್‌ ಭೀತಿ ಮತ್ತಷ್ಟು ಹೆಚ್ಚಳ

ಗೋವಾದ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಶುಕ್ರವಾರ ಈ ಕುರಿತು ಟ್ವೀಟ್ ಮಾಡಿ, ಯುಕೆಯಿಂದ ಎಐ-146 ವಿಮಾನ ಆಗಮಿಸಿದ ಬಳಿಕ 237 ಪ್ರಯಾಣಿಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು. ಈ ಪೈಕಿ ಮೂವರು ಪ್ರಯಾಣಿಕರಲ್ಲಿ ಸೋಂಕು ಕಾಣಿಸಿ ಕೊಂಡಿದೆ ಎಂದು ಹೇಳಿದ್ದಾರೆ. ಮಾರ್ಗಸೂಚಿ ಅನ್ವಯ ಕೋವಿಡ್ ಪಾಸಿಟಿವ್ ಪ್ರಯಾಣಿಕರನ್ನು ಕ್ವಾರಂಟೈ‌ನ್‌ಗೆ ಒಳ ಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಎಂಟು ದಿನಗಳ ಬಳಿಕ ಅಥವಾ ಅದಕ್ಕಿಂತ ಮೊದಲು ಸೋಂಕಿನ ಲಕ್ಷಣಗಳು ಕಾಣಿಸಿ ಕೊಂಡರೆ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಹೇಳಿದ್ದಾರೆ.

basavaraja bommai

ವರುಣ್ ಸಿಂಗ್ ಅವರಿಗೆ ಅತ್ಯುತ್ತಮ ಚಿಕಿತ್ಸೆ – ಬಸವರಾಜ್‌ ಬೊಮ್ಮಾಯಿ

ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕುಳಿದ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಭೇಟಿ ಮಾಡಿದ್ದೇನೆ. ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ತಜ್ಞ ವೈದ್ಯರಿಂದ ಅವರಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು

ಕೊರೊನಾ

ರಾಜ್ಯದಲ್ಲಿ ಕೊರೊನಾ 3ನೇ ಅಲೆ ಆಂತಕವಿಲ್ಲ

ಈ ಕುರಿತು ಮಾತನಾಡಿದ ರಾಜ್ಯ ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿ (TAC) ಅಧ್ಯಕ್ಷ ಡಾ ಎಂಕೆ ಸುದರ್ಶನ್, ಇದು ಕಡಿಮೆ ಸೋಂಕಿನ ಪ್ರಮಾಣಕ್ಕೆ ಉತ್ತಮ ಸೂಚಕವಾಗಿದೆ. “ಪರೀಕ್ಷೆಯು ದಿನಕ್ಕೆ 60,000 ರಿಂದ ಒಂದು ಲಕ್ಷ ಜನರಿಗೆ ಹೆಚ್ಚಿದ ನಂತರವೂ, ರಾಜ್ಯದ ದೈನಂದಿನ ಧನಾತ್ಮಕ ಪ್ರಮಾಣವು 1% ಕ್ಕಿಂತ ಕಡಿಮೆಯಾಗಿದೆ” ಎಂದು ಅವರು ಹೇಳಿದರು. ಕ್ಲಸ್ಟರ್ ಏಕಾಏಕಿ ಸಂಭವಿಸಿದ್ದರೂ, ಕ್ಯಾಸೆಲೋಡ್ ಗಮನಾರ್ಹವಾಗಿ ಹೆಚ್ಚಿಲ್ಲ ಎಂದು ಅವರು ಹೇಳಿದರು. “ಮೂರನೇ ತರಂಗದ ಯಾವುದೇ ಸೂಚನೆ ಇಲ್ಲ,” ಅವರು ಹೇಳಿದರು.