Breaking News
ಒಂದು ದೇಶ, ಒಂದು ಪಕ್ಷ ಎಂದು ಹೇಳುವ ಬಿಜೆಪಿ ಲಸಿಕೆಗೆ ಒಂದೇ ಬೆಲೆ ಇಟ್ಟಿಲ್ಲ ಯಾಕೆ: ಮಮತಾ ಬ್ಯಾನರ್ಜಿ‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳುಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆ

Sharadhi

ಒಂದು ದೇಶ, ಒಂದು ಪಕ್ಷ ಎಂದು ಹೇಳುವ ಬಿಜೆಪಿ ಲಸಿಕೆಗೆ ಒಂದೇ ಬೆಲೆ ಇಟ್ಟಿಲ್ಲ ಯಾಕೆ: ಮಮತಾ ಬ್ಯಾನರ್ಜಿ

ಲಸಿಕೆಗಳನ್ನು ಕೇಂದ್ರಕ್ಕೆ ₹ 150 ಕ್ಕೆ ಮಾರಾಟ ಮಾಡಲಾಗಿದ್ದು, ಈಗ ರಾಜ್ಯಗಳಿಗೆ ₹ 400 ಕ್ಕೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ₹ 600 ಕ್ಕೆ ಮಾರಾಟ ಮಾಡಲಾಗುತ್ತಿದೆ. ಇದರಲ್ಲಿ ಯಾವುದೇ ತಾರತಮ್ಯ ಇರಬಾರದು. ತುರ್ತು ಸಮಯದಲ್ಲಿ ನೀವು ಜನರಿಗೆ ಸಹಾಯ ಮಾಡುತ್ತೀರಾ ಅಥವಾ ವ್ಯಾಪಾರ ಮಾಡುತ್ತೀರಾ? ಎಂದು ಮಮತಾ ಪ್ರಶ್ನಿಸಿದ್ದಾರೆ.

‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒ

ಎಎನ್​ಐ ಜತೆ ಮಾತನಾಡಿದ ಸಿಇಒ ಸುನೀಲ್ ಸಗ್ಗರ್​, ಇನ್ನು 2 ತಾಸುಗಳ ನಂತರ ನಮ್ಮ ಆಸ್ಪತ್ರೆಯಲ್ಲಿ ಆಕ್ಸಿಜನ್​ ಇರುವುದಿಲ್ಲ. ಹಾಗಾಗಿ ನಾವು ರೋಗಿಗಳನ್ನು ಡಿಸ್​ಚಾರ್ಜ್​ ಮಾಡಿಸಿಬಿಡಿ. ಬೇರೆ ಆಸ್ಪತ್ರೆಗೆ ಆದರೂ ಹೋಗಲಿ ಎಂದು ವೈದ್ಯರಿಗೆ ಹೇಳುತ್ತಿದ್ದೇವೆ. ಎಷ್ಟು ಪ್ರಮಾಣದಲ್ಲಿ ಆಮ್ಲಜನಕ ಕೊಡುತ್ತಿದ್ದೆವೋ, ಅದರಲ್ಲಿ ಸ್ವಲ್ಪ ಕಡಿಮೆ ಮಾಡಲಾಗಿದೆ. ಆದರೂ ತುಂಬ ಕಾಲ ಉಳಿಯುವುದಿಲ್ಲ. ರೋಗಿಗಳನ್ನು ಹಾಗೇ ಇಟ್ಟುಕೊಂಡರೆ ಖಂಡಿತ ಅವರ ಜೀವ ಹೋಗುತ್ತದೆ ಎಂದಿದ್ದಾರೆ. ಹೀಗೆ ಹೇಳುತ್ತ ಹೇಳುತ್ತ ತುಂಬ ಭಾವುಕರಾಗಿದ್ದಾರೆ.

ಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್

ಕೊರೊನಾ ಸೋಂಕು ದೃಢಪಟ್ಟಿರುವ ಜಮೀರ್ ಅಹ್ಮದ್, ನಿನ್ನೆ ಅವರು ಮಾಜಿ ಸಿ.ಎಂ. ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಹಿನ್ನೆಲೆ ಆತಂಕ ಎದುರಾಗಿದೆ.

ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್

ಕೊರೊನಾಕ್ಕೆ ಸಂಬಂಧಿಸಿದಂತೆ ದೆಹಲಿ, ಬಾಂಬೆ, ಸಿಕ್ಕಿಂ, ಮಧ್ಯಪ್ರದೇಶ, ಕೋಲ್ಕತ್ತಾ ಮತ್ತು ಅಲಹಾಬಾದ್ ಈ ಆರು ನ್ಯಾಯಾಲಯಗಳೂ ಉತ್ತಮವಾಗಿಯೇ ಕಾರ್ಯ ನಿರ್ವಹಿಸಿವೆ. ಆದರೆ, ಕೊರೊನಾ ನಿರ್ವಹಣೆ ಕುರಿತಾದ ವಿಚಾರಣೆಯಲ್ಲಿ ಸ್ವಲ್ಪ ಗೊಂದಲ ಸೃಷ್ಟಿಯಾಗಿದೆ. ಹೀಗಾಗಿ ಕೊರೊನಾ ನಿರ್ವಹಣೆ ವಿಚಾರದ ಬಗ್ಗೆ ನಾಳೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದು, ಅಮಿಕಸ್ ಕ್ಯೂರಿಯಾಗಿ ನೇಮಕಗೊಂಡಿರುವ ಹರೀಶ್ ಸಾಳ್ವೆ ಹಾಜರಿರಲಿದ್ದಾರೆ.

ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆ

ಈ ಕೋವಿಡ್ ಲಸಿಕೆ ಪಡೆಯಲು ಶನಿವಾರದಿಂದ ಅಂದರೆ ಏಪ್ರಿಲ್ ೨೮ರಿಂದ ಕೋವಿನ್ ಪ್ಲಾಟ್‌ಫಾರ್ಮ್‌ನಲ್ಲಿ ನಾಗರಿಕರು ಹೆಸರು ನೋಂದಾವಣೆ ಮಾಡಿಕೊಳ್ಳಬಹುದು ಎಂದು ಸರ್ಕಾರ ತಿಳಿಸಿದೆ. ಹಾಗಾದರೆ ಕೋವಿಡ್ ಲಸಿಕೆ ಪಡೆಯಲು ನಾವು ಮಾಡಬೇಕಾಗಿರುವುದು ಏನು ಎಂಬುದನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್

ಕೊರೊನಾ ಕಡಿಮೆಯಾದ ಹಿನ್ನೆಲೆ ರೆಮ್‌ಡಿಸಿವಿರ್‌ ಉತ್ಪಾದನೆ ನಿಲ್ಲಿಸಲಾಗಿತ್ತು. ಈಗ ಮತ್ತೆ ಕೊರೊನಾ ಜಾಸ್ತಿಯಾಗಿದ್ದು, ಬೇಡಿಕೆ ಹೆಚ್ಚಾಗಿದೆ. ಸ್ವಲ್ಪ ದಿನದಲ್ಲಿ ಪೂರೈಕೆ ಸರಿಯಾಗುತ್ತದೆ. ದೇಶದಲ್ಲಿ 8 ರಿಂದ 9 ಕಂಪನಿಗಳು ಮಾತ್ರ ರೆಮ್‌ಡಿಸಿವಿರ್ ಉತ್ಪಾದಿಸುತ್ತಿವೆ ಎಂದರು.

ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳು

ಭಾರತಕ್ಕೆ ಬಂದಿಳಿದ ಯುದ್ಧ ವಿಮಾನಗಳ ಪೈಕಿ ನಾಲ್ಕು ರಫೇಲ್​ ವಿಮಾನಗಳು ಹೊಸ ಬ್ಯಾಚ್​ನ ಭಾಗವಾಗಿದೆ ಎಂದು ಭಾರತೀಯ ವಾಯುಪಡೆ ತಿಳಿಸಿದೆ. ಆದರೆ, ಫ್ರಾನ್ಸ್​ನಿಂದ ಭಾರತಕ್ಕೆ ಬಂದಿಳಿದ ಒಟ್ಟು ಯುದ್ಧ ವಿಮಾನಗಳ ಸಂಖ್ಯೆ ಇನ್ನೂ ತಿಳಿದು ಬಂದಿಲ್ಲ.

ಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಲ್ಲಿ ಏಪ್ರಿಲ್ 16ರಂದು ಯಡಿಯೂರಪ್ಪ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರು ಸಂಪೂರ್ಣ ಗುಣಮುಖರಾಗಿದ್ದು, ಕೋವಿಡ್ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಡಿಸ್ಚಾರ್ಜ್ ಆಗಿದ್ದಾರೆ.

ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿ

ಮೆಟ್ರೋ 2ನೇ ಹಂತದ ಯೋಜನೆಗಳಿಗೆ ಕೇಂದ್ರ ಅನುದಾನ ನೀಡಿದ್ದನ್ನೇ ನೆಪ ಮಾಡಿಕೊಂಡು ಸರ್ಕಾರ ಪ್ರಚಾರಕ್ಕೆ ಧುಮುಕಿದೆ. ರಾಜ್ಯಕ್ಕೆ ಕೇಂದ್ರ ನೀಡುವ ಅನುದಾನವೇನು ಭಿಕ್ಷೆಯಲ್ಲ. ಅದು ನಮ್ಮ ಹಕ್ಕು. ಅದರಲ್ಲಿ ಪ್ರಚಾರ ಪಡೆಯುವ, ಜಾಹೀರಾತು ನೀಡುವ ತುರ್ತು ಏನಿದೆ ಎಂಬುದನ್ನು ಸರ್ಕಾರ ಪರಾಮರ್ಶೆ ಮಾಡಬೇಕಿತ್ತು. ಇದು ಸರ್ಕಾರದ ಹೊಣೆಗೇಡಿತನ ಎಂದು ಟೀಕಿಸಿದರು.

ನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆ

ಆಮ್ಲಜನಕ ಇಲ್ಲದ ಕಾರಣ ಜನರು ಸಾಯುವಂಥ ಪರಿಸ್ಥಿತಿ ಬರಲು ಬಿಡಬಾರದಿತ್ತು’ ಎಂದು ಮ್ಯಾಕ್ಸ್​ ಗ್ರೂಪ್​ನ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.

Submit Your Article