Breaking News
ತಮ್ಮ ವೈಫಲ್ಯದ ಬಗ್ಗೆ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಒಳಜಗಳ ಸೃಷ್ಠಿ: ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ಕಿಡಿರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಅಡುಗೆಮನೆಯ ಈ ವಸ್ತುಗಳುಹಫ್ತಾ ವಸೂಲಿಗೆ ಅಬಕಾರಿ ಸಚಿವರ ಫರ್ಮಾನು: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿಮಲಯಾಳಂನ ಪ್ರಸಿದ್ಧ ಗೀತ ರಚನೆಕಾರ, ಕವಿ ಪೂವಾಚಲ್ ಖಾದರ್ ನಿಧನಕೊರೊನಾ‌ ಭೀತಿ ನಡುವೆಯೂ ಶಾಲೆ ಆರಂಭಕ್ಕೆ ಸಲಹೆ: ಸರ್ಕಾರಕ್ಕೆ ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿಯ ವರದಿಉತ್ತರ ಕೊರಿಯಾ: ಇದುವರೆಗೆ ಒಂದೂ ಕೊರೊನಾ ಕೇಸಿಲ್ಲ, ಅನುಮಾನ ವ್ಯಕ್ತಪಡಿಸಿದ ತಜ್ಞರುಮಗುವಿಗೆ ಜನ್ಮ ನೀಡಿದ ಬಳಿಕ ಮಹಿಳೆಯರ ತೂಕ ಹೆಚ್ಚಾಗಲು ಕಾರಣವೇನು?ಡಿಸಿಜಿಐಗೆ ಕೊವ್ಯಾಕ್ಸಿನ್ 3ನೇ ಹಂತದ ಪ್ರಯೋಗಗಳ ಮಾಹಿತಿ ಸಲ್ಲಿಸಿದ ಭಾರತ್ ಬಯೋಟೆಕ್ಮಹಾರಾಷ್ಟ್ರ: 21 ಜನರಲ್ಲಿ ಡೆಲ್ಟಾ ಪ್ಲಸ್ ಪತ್ತೆಸೆ.15ರೊಳಗೆ 9ಜಿಲ್ಲೆಗಳ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ: ತಮಿಳುನಾಡಿಗೆ ಸುಪ್ರೀಂ ಸೂಚನೆ

Sharadhi

ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ಲಸಿಕೆ ನೀಡಿಕೆ ಪ್ರಕ್ರಿಯೆಯ ವೇಗ ಹೆಚ್ಚಳ: ಅಮಿತ್ ಶಾ

18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಉಚಿತ ಕೋವಿಡ್‌ ಲಸಿಕೆ ನೀಡುವ ಪ್ರಧಾನಿಯವರ ನಿರ್ಧಾರದೊಂದಿಗೆ, ಲಸಿಕೆ ಅಭಿಯಾನದ ವೇಗ ಹೆಚ್ಚಿಸುವ ಮೂಲಕ ಪ್ರತಿಯೊಬ್ಬರಿಗೂ ಲಸಿಕೆ ತಲುಪಿಸುವ ಗುರಿಯನ್ನು ಸಾಧಿಸಲಾಗುತ್ತದೆ. ದೊಡ್ಡ ಜನಸಂಖ್ಯೆಯನ್ನು ಹೊಂದಿರುವ ಭಾರತದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಉಚಿತ ಲಸಿಕೆ ನೀಡುವುದಾಗಿ ಹೇಳಿರುವ ಪ್ರಧಾನಿ ನರೇಂದ್ರ ಮೋದಿಯವರ ನಿರ್ಧಾರ ಬಹಳ ದೊಡ್ಡದು ಎಂದು ಹೇಳಿದರು.

ಅಂತರಾಷ್ಟ್ರೀಯ ಯೋಗ ದಿನ : M Yoga App ಲಾಂಚ್ ಮಾಡಿದ ಪ್ರಧಾನಿ ಮೋದಿ

ಇಡೀ ವಿಶ್ವವೇ ಕೊರೋನಾ ಮಹಾಮಾರಿ ವಿರುದ್ಧ ಹೋರಾಟ ಮಾಡುತ್ತಿದ್ದಾಗ, ಯೋಗ ಭರವಸೆಯ ಕಿರಣವಾಯಿತು. ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣದಿಂದಾಗಿ ಭಾರತ ಸೇರಿದಂತೆ ವಿಶ್ವದಲ್ಲಿ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸಿಲ್ಲ. ಆದರೆ ಯೋಗದ ಬಗ್ಗೆ ಇರುವ ಉತ್ಸಾಹ ಮಾತ್ರ ಕಡಿಮೆಯಾಗಿಲ್ಲ ಎಂದು ಹೇಳಿದರು.

ಬಿಗ್ ಬಾಸ್ ಸೀಸನ್ 8ರ‌ ಪುನರಾರಂಭಕ್ಕೆ ಮುಹೂರ್ತ ಫಿಕ್ಸ್: ಜೂನ್​ 23ರಿಂದ ಸೆಕೆಂಡ್ ಇನ್ನಿಂಗ್ಸ್ ಸ್ಟಾರ್ಟ್

ಕೊರೊನಾ ನಡುವೆಯೂ ಬಿಗ್​ ಬಾಸ್​ ಸೀಸನ್​ 8ರ ಸಂಚಿಕೆ ಯಾವುದೇ ಅಡೆತಡೆಗಳಿಲ್ಲದೆ ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ನಡೆಸಲಾಗುತ್ತಿತ್ತು. ಆದರೆ ಕೊರೊನಾ ಎರಡನೇ ಅಲೆ ಆರಂಭವಾದ ಬಳಿಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿತ್ತು.

ಕೊರೊನಾ ವಿರುದ್ಧದ ಹೋರಾಟದಲ್ಲಿ ಯೋಗ ಎಂಬುದು ಭರವಸೆಯ ಕಿರಣವಾಗಿದೆ: ಪ್ರಧಾನಿ ಮೋದಿ

7ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಇಂದು ಇಡೀ ಜಗತ್ತು ಕೋವಿಡ್-19 ವಿರುದ್ಧ ಹೋರಾಡುತ್ತಿದ್ದು, ಯೋಗ ಭರವಸೆಯ ಕಿರಣವಾಗಿ ಪರಿಣಮಿಸಿದೆ. ಕಳೆದ ಎರಡು ವರ್ಷಗಳಲ್ಲಿ ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಯಾವುದೇ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸದಿದ್ದರು, ಯೋಗದ ಮೇಲಿನ ಉತ್ಸಾಹ ಕೊಂಚವು ಕಡಿಮೆಯಾಗಿಲ್ಲ.

ಸೋಂಕಿನ ಅಪಾಯದ ಬಗ್ಗೆ ನಿರ್ಲಕ್ಷ್ಯತೋರದೆ, ಒಗ್ಗಟ್ಟಿನಿಂದ ಕೊರೊನಾ ಹಿಮ್ಮೆಟ್ಟಿಸೋಣ: ಸಿಎಂ‌ ಯಡಿಯೂರಪ್ಪ

ರಾಜ್ಯದಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮಗಳನ್ನು ಸಡಿಲಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು, ಜಿಲ್ಲಾವಾರು ಪರಿಸ್ಥಿತಿಗಳನ್ನು ಪರಿಗಣಿಸಿ, ಅದಕ್ಕನುಗುಣವಾಗಿ ಸಡಿಲಿಸಲಾಗುತ್ತಿದೆ.

ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಕೋವಿಡ್-19 ಲಸಿಕೆ ವಿತರಣೆ

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಇನ್ನು ಮುಂದೆ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಲಸಿಕೆಯನ್ನು ಪೂರೈಕೆ ಮಾಡಲಾಗುವುದು ಎಂದು ತಿಳಿಸಿದ್ದರು. ಅಲ್ಲದೆ ಡಿಸೆಂಬರ್ ಅಂತ್ಯದ ವೇಳೆಗೆ ದೇಶದ ಎಲ್ಲ ಅರ್ಹ ಜನರಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ.

ತಿಂಗಳುಗಳ ಬಳಿಕ ಸಾರಿಗೆ ಬಸ್ ಸಂಚಾರ ಆರಂಭ: ಮೈಸೂರು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಿಗೆ ಇಂದಿನಿಂದ ಬಸ್ ಸಂಚಾರ ಆರಂಭ

ರಾಜ್ಯದಲ್ಲಿ ತಲ್ಲಣ ಮೂಡಿಸಿದ್ದ ಕೊರೊನಾ ಆರ್ಭಟ ತಣ್ಣಗಾದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಲಾಕ್ ಡೌನ್ ನಿಯಮಗಳನ್ನು ಸಡಿಲಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾಧ್ಯಂತ ಸಾರಿಗೆ ಬಸ್ ಸಂಚಾರ ಆರಂಭಿಸಲು ಕೆಎಸ್ಆರ್ಟಿಸಿ ನಿರ್ಧರಿಸಿದೆ. ಹೀಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಬಸ್​ ಸಂಚಾರ ಆರಂಭವಾಗಲಿದ್ದು, ಮೊದಲ ಹಂತದಲ್ಲಿ 3 ಸಾವಿರ ಬಸ್​ ಕಾರ್ಯಾಚರಣೆ ಆರಂಭಿಸಲಿವೆ.

ಸ್ನೇಹ ರಾಣಾ ಸಾಹಸಮಯ ಬ್ಯಾಟಿಂಗ್: ಇಂಗ್ಲೆಂಡ್ ಹಾಗೂ ಭಾರತ ವನಿತೆಯರ ನಡುವಿನ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯ

ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ 9 ವಿಕೆಟ್ ನಷ್ಟಕ್ಕೆ 396 ರನ್ ಗಳಿಸಿ ತನ್ನ ಪ್ರಥಮ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ 231 ರನ್ ಗಳಿಗೆ ಆಲೌಟ್ ಆಗುವ ಮೂಲಕ 165 ರನ್ ಗಳ ಹಿನ್ನಡೆಯೊಂದಿಗೆ ಫಾಲೋ ಆನ್ ಸಂಕಷ್ಟಕ್ಕೆ ಸಿಲುಕಿತು.

ಜೂನ್ 21ರಿಂದ ರಸ್ತೆಗಿಳಿಯಲಿರುವ ಬಿಎಮ್‌ಟಿಸಿ ಬಸ್‌ಗಳು: ಷರತ್ತುಗಳನ್ನು ಅನ್ವಯ

ಸರ್ಕಾರದ ಅನುಮತಿ ಮೇರೆಗೆ ಮೊದಲ ಶಿಫ್ಟ್ ನಲ್ಲಿ 1,000 ಬಸ್ ಗಳು, ಎರಡನೇ ಶಿಫ್ಟ್‌ನಲ್ಲಿ 800 – 1000 ಬಸ್ ಗಳು ರಸ್ತೆಗಿಳಿಯಲು ಸಿದ್ಧವಿದೆ. ಸದ್ಯ 90% ಸಾರಿಗೆ ಸಿಬ್ಬಂದಿಗಳಿಗೆ ವ್ಯಾಕ್ಸಿನೇಷನ್‌ ಆಗಿದೆ. ಪ್ರಯಾಣಿಕರೂ ಪ್ರೊಟೋಕಾಲ್ ಪಾಲಿಸಬೇಕು. ಸಾಮಾಜಿಕ ಅಂತರಕ್ಕಾಗಿ ಶೇ 50% ಪ್ರಯಾಣಿಕರಿಗೆ ವ್ಯವಸ್ಥೆ ಮಾಡಲಾಗಿದೆ. ಬಸ್‌ನಲ್ಲಿ ಪ್ರಯಾಣಿಸುವವರಿಗೆ ಮಾಸ್ಕ್ ಕಡ್ಡಾಯ ಎಂದು ಎಚ್ಚರಿಸಿದರು.

ಆಂಧ್ರ ರಾಜ್ಯಪಾಲರಾಗಿ ಯಡಿಯೂರಪ್ಪ? ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಖಚಿತ!?

ಆಂಧ್ರ ಪ್ರದೇಶದ ಹಾಲಿ ರಾಜ್ಯಪಾಲರ ಅಧಿಕಾರಾವಧಿ ಜುಲೈಗೆ ಅಂತ್ಯವಾಗಲಿದೆ. ಆ ಸ್ಥಾನಕ್ಕೆ ಯಡಿಯೂರಪ್ಪರನ್ನು ನೇಮಿಸುವ ಸಾಧ್ಯತೆಗಳು ಕಾಣುತ್ತಿವೆ. ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರು ದೆಹಲಿಗೆ ಮರಳುತ್ತಿದ್ದಂತೆಯೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡ ಹಾಗೂ ಗೃಹ ಸಚಿವ ಅಮಿತ್ ಷಾ ಅವರು ದೆಹಲಿಗೆ ಬರುವಂತೆ ಯಡಿಯೂರಪ್ಪರಿಗೆ ಬುಲಾವ್‌ ನೀಡಿರುವುದಾಗಿ ತಿಳಿದು ಬಂದಿದೆ.

Submit Your Article