Breaking News
ತಮ್ಮ ವೈಫಲ್ಯದ ಬಗ್ಗೆ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಒಳಜಗಳ ಸೃಷ್ಠಿ: ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ಕಿಡಿರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಅಡುಗೆಮನೆಯ ಈ ವಸ್ತುಗಳುಹಫ್ತಾ ವಸೂಲಿಗೆ ಅಬಕಾರಿ ಸಚಿವರ ಫರ್ಮಾನು: ಸರ್ಕಾರದ ವಿರುದ್ಧ ಎಚ್‌ಡಿಕೆ ವಾಗ್ದಾಳಿಮಲಯಾಳಂನ ಪ್ರಸಿದ್ಧ ಗೀತ ರಚನೆಕಾರ, ಕವಿ ಪೂವಾಚಲ್ ಖಾದರ್ ನಿಧನಕೊರೊನಾ‌ ಭೀತಿ ನಡುವೆಯೂ ಶಾಲೆ ಆರಂಭಕ್ಕೆ ಸಲಹೆ: ಸರ್ಕಾರಕ್ಕೆ ಡಾ.ದೇವಿಪ್ರಸಾದ್ ಶೆಟ್ಟಿ ಸಮಿತಿಯ ವರದಿಉತ್ತರ ಕೊರಿಯಾ: ಇದುವರೆಗೆ ಒಂದೂ ಕೊರೊನಾ ಕೇಸಿಲ್ಲ, ಅನುಮಾನ ವ್ಯಕ್ತಪಡಿಸಿದ ತಜ್ಞರುಮಗುವಿಗೆ ಜನ್ಮ ನೀಡಿದ ಬಳಿಕ ಮಹಿಳೆಯರ ತೂಕ ಹೆಚ್ಚಾಗಲು ಕಾರಣವೇನು?ಡಿಸಿಜಿಐಗೆ ಕೊವ್ಯಾಕ್ಸಿನ್ 3ನೇ ಹಂತದ ಪ್ರಯೋಗಗಳ ಮಾಹಿತಿ ಸಲ್ಲಿಸಿದ ಭಾರತ್ ಬಯೋಟೆಕ್ಮಹಾರಾಷ್ಟ್ರ: 21 ಜನರಲ್ಲಿ ಡೆಲ್ಟಾ ಪ್ಲಸ್ ಪತ್ತೆಸೆ.15ರೊಳಗೆ 9ಜಿಲ್ಲೆಗಳ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ: ತಮಿಳುನಾಡಿಗೆ ಸುಪ್ರೀಂ ಸೂಚನೆ

Sharadhi

ವಿಜಯೇಂದ್ರ ಅವರಿಂದ ಕಿಕ್ ಬ್ಯಾಕ್ ಪಡೆದ ಆರೋಪ: ಎಸಿಬಿ ತನಿಖೆಗೆ ಸಿದ್ದರಾಮಯ್ಯ ಆಗ್ರಹ

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಎರಡು ಕಾರಣಗಳಿಗಾಗಿ ಈ ಆರೋಪ ಗಂಭೀರ ಸ್ವರೂಪದ್ದಾಗಿದೆ. ಮೊದಲನೆಯದಾಗಿ ಆರೋಪ ನೇರವಾಗಿ ಸಿಎಂ ಅವರ ಮಗನ ಮೇಲಿದೆ. ಎರಡನೆಯದಾಗಿ ಆಡಳಿತ ಪಕ್ಷದ ಶಾಸಕರೇ ಆರೋಪ ಮಾಡಿದ್ದಾರೆ. ತರಾತುರಿಯಲ್ಲಿ ನೀರಾವರಿ ಇಲಾಖೆ ಸ್ಪಷ್ಟನೆ ನೀಡಿದ್ದನ್ನು ನೋಡಿದರೆ ಹಗರಣವನ್ನು ಮುಚ್ಚಿಹಾಕುವ ಪ್ರಯತ್ನ ಸ್ಪಷ್ಟವಾಗಿದೆ ಎಂದರು.

ಇರಾನ್ ನೂತನ ಅಧ್ಯಕ್ಷರಾಗಿ ಇಬ್ರಾಹಿಂ ರೈಸಿ ಆಯ್ಕೆ

ಈ ಬಾರಿ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿತ್ತು. ರೈಸಿ ಅವರ ಪರ 1.78 ಕೋಟಿ ಮತಗಳು ಚಲಾವಣೆಯಾಗಿವೆ. ರೈಸಿ ಅವರ ಪ್ರತಿಸ್ಪರ್ಧಿಯಾಗಿದ್ದ ಮೊಹಸೆನ್‌ ರೆಝಿ 33 ಲಕ್ಷ ಹಾಗೂ ಹೆಮ್ಮಟ್ಟಿ 24 ಲಕ್ಷ ಮತಗಳನ್ನು ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರಿಸ್ಥಿತಿ ಸರಿಯಾಗಿ ಅವಲೋಕಿಸಿ ಲಾಕ್ ಡೌನ್ ನಿರ್ಬಂಧ ಸಡಿಲಿಸಿ: ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಎಚ್ಚರಿಕೆ

ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್ ಕುಮಾರ್‌ ಭಲ್ಲಾ, ‘ಪ್ರಸ್ತುತ ಸನ್ನಿವೇಶದಲ್ಲಿ ಸೋಂಕಿನ ಪ್ರಸರಣಕ್ಕೆ ತಡೆಯೊಡ್ಡಲು ಲಸಿಕೆ ಹಾಕುವ ಪ್ರಕ್ರಿಯೆ ನಿರ್ಣಾಯಕವಾಗಿದೆ. ಆದ್ದರಿಂದ, ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಲಸಿಕೆ ಹಾಕುವ ವೇಗವನ್ನು ಹೆಚ್ಚಿಸಬೇಕು.

ರಾಜ್ಯದಲ್ಲಿ ಕೊರೋನಾದಿಂದಾಗಿ ಅನಾಥರಾದ 48 ಮಕ್ಕಳು

ಸಾಂಕ್ರಾಮಿಕ ರೋಗವು ಈಗಾಗಲೇ ಕರ್ನಾಟಕದಾದ್ಯಂತ ನೂರಾರು ಮಕ್ಕಳ ಬಾಲ್ಯದ ಮೇಲೆ ಭಾರಿ ಪರಿಣಾಮವನ್ನುಂಟು ಮಾಡಿದೆ. ಕೋವಿಡ್‌ ಸೋಂಕಿನ ಕಾರಣದಿಂದಾಗಿ ರಾಜ್ಯಾದ್ಯಂತ 48 ಮಕ್ಕಳು ತಮ್ಮ ಹೆತ್ತವರನ್ನು ಕಳೆದುಕೊಂಡಿದ್ದಾರೆ. ನೂರಾರು ಮಂದಿ ಕೊರೊನಾ ಕಾರಣದಿಂದಾಗಿ ತಮ್ಮ ಓರ್ವ ಪೋಷಕರನ್ನು ಕಳೆದುಕೊಂಡಿದ್ದಾರೆ.

ಗರ್ಭಿಣಿಯರು ಹಾಗಲಕಾಯಿ ಸೇವಿಸಬಾರದು, ಯಾಕೆ ಗೊತ್ತಾ

ಹಾಗಲಕಾಯಿಯಲ್ಲಿರುವ ಅಣು ವಿಸೈನ್ ಫೆವಿಸಂಗೆ ಕಾರಣವಾಗಬಹುದು, ಇದು ನಿಮ್ಮ ದೇಹದ ಅಂಗಾಂಶಗಳಿಗೆ ಆಮ್ಲಜನಕವನ್ನು ಸಾಗಿಸುವ ಕೆಂಪು ರಕ್ತ ಕಣಗಳ ನಾಶವಾಗಿದೆ. ಇದು ರಕ್ತಹೀನತೆಗೆ ಕಾರಣವಾಗಬಹುದು ಮತ್ತು ಗರ್ಭಧಾರಣೆಯ ತೊಂದರೆಗಳಿಗೆ ಕಾರಣವಾಗಬಹುದು.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಗೊಂದಲಕ್ಕೆ ಬ್ರೇಕ್‌; ಗ್ರೇಡ್‌ ಬದಲು ಅಂಕ ಪರಿಗಣನೆ

ಹಳೇ ಪದ್ಧತಿಯನ್ನೇ ಅಂದ್ರೆ, ಈ ಬಾರಿ ಗ್ರೇಡ್ ಬದಲು ಅಂಕಗಳ ಪರಿಗಣನೆಗೆ ತೆಗೆದುಕೊಳ್ಳಲು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ. ವಿದ್ಯಾರ್ಥಿಗಳ ಮುಂದಿನ ಭವಿಷ್ಯ ದೃಷ್ಟಿಯಿಂದ ಈ ಇಲಾಖೆ ಈ ತೀರ್ಮಾನಕ್ಕೆ ಬಂದಿದ್ದು, ದ್ವಿತೀಯ ಪಿಯುಸಿ ಫಲಿತಾಂಶ ನೀಡುವ ಸಂಬಂಧ‌ ಈಗಾಗಲೇ 12 ಜನರ ತಜ್ಞರ ಸಮಿತಿ ರಚನೆ ಸಮಿತಿಯಲ್ಲಿ ಈ ಕುರಿತು ಸಹಮತ ದೊರೆತ ಕಾರಣ ಅಂಕಗಳನ್ನ ಪರಿಗಣನೆಗೆ ತೆಗೆದುಕೊಂಡು ಪಾಸ್ ಮಾಡಲು ಮುಂದಾಗಿದೆ.

ಕರ್ನಾಟಕದಲ್ಲಿ ಧಾರಾಕಾರ ಮಳೆ: ಸಚಿವರುಗಳೊಂದಿಗೆ ಬಿಎಸ್ ವೈ ಚರ್ಚೆ

ಕಳೆದ ನಾಲ್ಕು ದಿನಗಳಿಂದ ಸತತ ಮಳೆಯಿಂದಾಗಿ ಬಣಕಲ್, ಕೊಟ್ಟಿಗೆಹಾರ, ಬಾಲೂರು ಮತ್ತು ಚಾರ್ಮಾಡಿ ಘಾಟಿಗಳ ಸುತ್ತಮುತ್ತ 39.58 ಸೆಂಟಿ ಮೀಟರ್ ಮಳೆಯಾಗಿದೆ. ಬಾಲೂರು, ಬಣಕಲ್, ದೇವಗನೂಲ್, ಜರ್ಗಲ್ ಮತ್ತು ಚಕಮಕಿ ಸುತ್ತಮುತ್ತ ಕಳೆದ ನಾಲ್ಕೈದು ದಿನಗಳಿಂದ ವಿದ್ಯುತ್ ಇಲ್ಲದಾಗಿದೆ.

ಧಾರವಾಡ ಮಳೆ: ಕೆರೆ ಒಡೆದು ಅಪಾರ ಜಮೀನು ಹಾನಿ

ಧಾರವಾಡ ಜಿಲ್ಲೆಯಲ್ಲಿ ಮಳೆ ಬಿಟ್ಟು ಬಿಡದೆ ಸುರಿಯುತ್ತಿದೆ. ಧಾರಕಾರ ಮಳೆಯಿಂದ ಕೆರೆ ಕಟ್ಟೆ ಒಡೆದು ರೈತರ ಜಮೀನುಗಳಿಗೆ ನೀರು ನುಗ್ಗಿದ ಘಟನೆ ಕಲಘಟಗಿ ತಾಲೂಕಿನ ಹಟಕಿನಾಳ ಗ್ರಾಮದಲ್ಲಿ ನಡೆದಿದೆ. ಹಟಕಿನಾಳ ಗ್ರಾಮದ ಜಿಗಳಿ ಕೆರೆ ಒಡೆದು ಅವಾಂತರ ಸೃಷ್ಟಿಯಾಗಿದೆ. ನೂರಾರು ಎಕರೆಯಲ್ಲಿ ಬೆಳೆದ ಬೆಳಗಳು ಸಂಪೂರ್ಣ ಜಲಾವೃತಗೊಂಡಿದೆ. ಭತ್ತ, ಸೋಯಾಬಿನ್, ಕಬ್ಬು, ಹತ್ತಿ, ಗೋವಿನಜೋಳ ಬೆಳೆಗಳು ಜಲಾವೃತಗೊಂಡಿವೆ. ಕೆಲ ದಿನಗಳ ಹಿಂದೆ ಸುರಿದ ಮಳೆಗೆ ಹಲವಾರು ರೈತರು ಮುಂಗಾರು ಬಿತ್ತನೆ ಮಾಡಿದ್ದರು.

ಕಳೆದ 24 ಗಂಟೆಯಲ್ಲಿ 60,753 ಹೊಸ ಕೊರೊನಾ ಕೇಸ್

ಒಂದೇ ದಿನದಲ್ಲಿ 1647 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಅದರಲ್ಲಿ 648 ಸಾವು ಮಹಾರಾಷ್ಟ್ರದಿಂದ ಮತ್ತು 287 ತಮಿಳುನಾಡಿನಿಂದ ವರದಿಯಾಗಿದೆ. ಮತ್ತೊಂದೆಡೆ ಕೊರೊನಾ ಲಸಿಕೆ ಅಭಿಯಾನ ಕೂಡ ಭರದಿಂದ ಸಾಗುತ್ತಿದೆ. ಇದುವರೆಗೆ 27,23,88,783 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.

ಮಿಲ್ಖಾ ಸಿಂಗ್‌ ನಿಧನ: ಪ್ರಧಾನಿ ಸೇರಿ ಗಣ್ಯರಿಂದ ಸಂತಾಪ ಸೂಚನೆ

ನಿರ್ಮಲ್​ ಕೌರ್​ ಅವರು ಕೋವಿಡ್​ನಿಂದಾಗಿಯೇ ಕೊನೆಯುಸಿರೆಳೆದಿದ್ದರು. ಕಳೆದ ಒಂದು ತಿಂಗಳಿನಿಂದ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಿಲ್ಕಾ ಸಿಂಗ್​​ ಅವರು ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಮತ್ತೆ ಕೊರೋನಾ ಪರೀಕ್ಷೆ ಮಾಡಿ, ಬುಧವಾರ ಅವರನ್ನು ಸಾಮಾನ್ಯ ವಾರ್ಡಿಗೆ ಶಿಫ್ಟ್ ಮಾಡಲಾಗಿತ್ತು. ಅವರ ಆರೋಗ್ಯ ಸ್ಥಿತಿ ನಿನ್ನೆ ಗಂಭೀರವಾಗಿತ್ತು. ಪಿಜಿಐಎಂಇಆರ್​ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲು ಮಾಡಲಾಗಿತ್ತು.

Submit Your Article