ಮೈಸೂರು, ಡಿ. 20: ಎಚ್.ಡಿ.ಕೋಟೆ ತಾಲ್ಲೂಕಿನ ಆಲನಹಳ್ಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ ಹೊಡೆದಿದ್ದು, 12 ಮಂದಿಗೆ ಗಂಭೀರ ಗಾಯಗಳಾಗಿವೆ.
ಆಟೋದಲ್ಲಿ ನಾಲ್ವರು ಮಕ್ಕಳು, ಮಹಿಳೆಯರು ಸೇರಿದಂತೆ 12 ಮಂದಿ ಪ್ರಯಾಣಿಸುತ್ತಿದ್ದರು. ಅವರು ಹುಣಸೂರು ತಾಲ್ಲೂಕಿನ ಗೋಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿದೆ.
ಪ್ರಯಾಣಿಕರು ನಂಜನಗೂಡು ದೇವಸ್ಥಾನಕ್ಕೆಂದು ತೆರಳುತ್ತಿದ್ದರು. ಈ ವೇಳೆ ಚಾಲಕನಿಗೆ ನಿಯಂತ್ರಣ ತಪ್ಪಿ ಆಟೋ ಮಗುಚಿ ಬಿದ್ದಿದೆ. ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡವರನ್ನು ಮೈಸೂರು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.