vijaya times advertisements
Visit Channel

ಪಾಕ್‌ ಗೆಲುವು ದಾಖಲಿಸಿದ್ದಕ್ಕೆ ಗಳಗಳನೆ ಅತ್ತ ಅಜಂ ಸಿದ್ದಿಕ್ಕಿ. ಯಾರು ಈ ಅಜಂ ?

azam siddique

ಅಬುದಾಬಿ ಅ 23 : ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್(T20 World Cup 2021) ಪಂದ್ಯದಲ್ಲಿ ಪಾಕಿಸ್ತಾನ ಎದುರು ಭಾರತವು 10 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ. ಮೊದಲ ಬಾರಿಗೆ ವಿಶ್ವಕಪ್‌ನಂತಹ ಪಂದ್ಯಾವಳಿಯಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಸೋಲು ಕಂಡಿದೆ. ಪಾಕ್ ನಾಯಕ ಬಾಬರ್ ಅಜಂ (68) ಮತ್ತು ಮೊಹಮ್ಮದ್ ರಿಜ್ವಾನ್ (79) ಭರ್ಜರಿ ಅರ್ಧಶತಕ ಬಾರಿಸಿ ತಮ್ಮ ತಂಡಕ್ಕೆ ಅದ್ಭುತ ಜಯ ತಂದುಕೊಟ್ಟರು. ಭಾರತದ ವಿರುದ್ಧ ಪಾಕಿಸ್ತಾನವು ಐತಿಹಾಸಿಕ ವಿಜಯ ಸಾಧಿಸಿದ ಬಳಿಕ ದುಬೈನ ಕ್ರೀಡಾಂಗಣದಲ್ಲಿ ವ್ಯಕ್ತಿಯೊಬ್ಬರು ಅಳಲು ಪ್ರಾರಂಭಿಸಿದ್ದಾರೆ. ಸದ್ಯ ವಿಡಿಯೋ ಸೋಷಿಯಲ್ ಮೀಡಿಯಾ(Social Media)ದಲ್ಲಿ ಸಖತ್ ವೈರಲ್ ಆಗಿದೆ.

ಭಾರತದ ವಿರುದ್ಧ ಪಾಕಿಸ್ತಾನ ತಂಡವು ಅಮೋಘ ಗೆಲುವು ಸಾಧಿಸುತ್ತಿದ್ದಂತೆಯೇ ಕ್ರೀಡಾಂಗಣದಲ್ಲಿ ಕುಳಿತು ಪಂದ್ಯ ವೀಕ್ಷಿಸುತ್ತಿದ್ದ ವ್ಯಕ್ತಿಯೊಬ್ಬರು ಇದ್ದಕ್ಕಿದ್ದಂತೆಯೇ ಅಳಲು ಶುರು ಮಾಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾನಗಳಲ್ಲಿ ಸಖತ್ ಸದ್ದು ಮಾಡುತ್ತಿದೆ. ಅಷ್ಟಕ್ಕೂ ಈ ವ್ಯಕ್ತಿ ಯಾರು ಅಂತೀರಾ..? ಅವರು ಬೇರಾರೂ ಅಲ್ಲ. ಪಾಕಿಸ್ತಾನ ತಂಡದ ಕ್ಯಾಪ್ಟನ್ ಬಾಬರ್ ಅಜಂ(Babar Azam) ತಂದೆ ಅಜಂ ಸಿದ್ದಕ್ಕಿ. ಹೌದು, ಭಾರತದ ವಿರುದ್ಧ ವಿಶ್ವಕಪ್ ನಲ್ಲಿ ಪದೇ ಪದೇ ಸೋಲು ಕಾಣುತ್ತಿದ್ದ ಪಾಕಿಸ್ತಾನ ತಂಡಕ್ಕೆ ಬಾಬರ್ ಅಜಂ ನಾಯಕತ್ವದಲ್ಲಿ ಐತಿಹಾಸಿಕ ಗೆಲುವು ದಕ್ಕಿದೆ. ಇದೇ ಖುಷಿಯಲ್ಲಿ ಬಾಬರ್ ಅಜಂ ತಂದೆ ಅಜಂ ಸಿದ್ದಕಿ ಕ್ರೀಡಾಂಗಣದಲ್ಲಿಯೇ ಆನಂದಭಾಷ್ಪ ಹರಿಸಿದ್ದಾರೆ.

ಭಾರತದ ವಿರುದ್ಧ ಗೆಲುವು ಸಾಧಿಸುತ್ತಿದ್ದಂತೆಯೇ(Historic Win) ಮೈದಾನ ಸೇರಿ ಪಾಕ್ ಡ್ರೆಸ್ಸಿಂಗ್ ರೂಂನಲ್ಲಿ ಸಂಭ್ರಮಾಚರಣೆ ಮುಗಿಲುಮುಟ್ಟಿತ್ತು. ಈ ವೇಳೆ ಮೈದಾನದಲ್ಲಿಯೇ ಕುಳಿತು ಪಂದ್ಯ ವೀಕ್ಷಿಸುತ್ತಿದ್ದ ಬಾಬರ್ ಅಜಂ ತಂದೆ ಗೆಲುವಿನ ರನ್ ಬರುತ್ತಿದ್ದಂತೆಯೇ ಚಿಕ್ಕಮಗುವಿನಂತೆ ಅಳಲು ಶುರುಮಾಡಿದರು. ಈ ವೇಳೆ ಅನೇಕ ಪಾಕಿಸ್ತಾನಿ ಅಭಿಮಾನಿಗಳು ಅವರನ್ನು ತಬ್ಬಿಕೊಂಡು ಸಮಾಧಾನಪಡಿಸಿದ್ದಾರೆ. ಅಲ್ಲದೆ ಅವರ ಕಣ್ಣೀರು ಒರೆಸಲು ಪ್ರಯತ್ನಿಸಿದ್ದಾರೆ. ಪಂದ್ಯ ಗೆದ್ದ ನಂತರ ಇಡೀ ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳ ಖುಷಿಯಿಂದ ಕೇಕೆ ಹಾಕಿದರು. ಅದ್ಭುತ ವಿಜಯದ ನಂತರ ಬಾಬರ್ ಅಜಂ ತಂದೆ(Babar Azam Father) ಭಾವುಕರಾಗಿ ಅಳುತ್ತಿರುವ ವಿಡಿಯೋ ವೈರಲ್ ಆಗಿದೆ

Latest News

ರಾಜ್ಯ

ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದಿದ್ದಕ್ಕಾಗಿ ಪ್ರಾಧ್ಯಾಪಕ ಅಮಾನತು!

ನಾವು ಸ್ವಯಂಪ್ರೇರಿತ ಕ್ರಮವನ್ನು ತೆಗೆದುಕೊಂಡಿದ್ದೇವೆ. ವಾಸ್ತವವಾಗಿ ಯಾರೂ ಇಲ್ಲದ ಕಾರಣ ವಿದ್ಯಾರ್ಥಿಯು ನಿಜವಾಗಿಯೂ ಆತಂಕಕ್ಕೊಳಗಾಗಿದ್ದಾನೆ.

ರಾಜಕೀಯ

ನೀವು ಬಡವರು ಎಂದು ಹೇಳಿಕೊಳ್ಳುತ್ತೀರಿ, ಆದ್ರೆ ನಾನು ಅಸ್ಪೃಶ್ಯರಲ್ಲಿ ಒಬ್ಬ : ಮಲ್ಲಿಕಾರ್ಜುನ ಖರ್ಗೆ

ನಾನು ಅಸ್ಪೃಶ್ಯರಲ್ಲಿ ಒಬ್ಬ. ಜನರು ನಿಮ್ಮ ಚಹಾವನ್ನು ಕುಡಿಯುತ್ತಿದ್ದರು,  ಆದರೆ ಯಾರೂ ನನ್ನ ಚಹಾವನ್ನು ಸೇವಿಸಲಿಲ್ಲ ಎಂದು ಖರ್ಗೆ ಅವರು ಪರೋಕ್ಷವಾಗಿ ಮೋದಿ ವಿರುದ್ದ ವಾಗ್ದಾಳಿ ನಡೆಸಿದರು.  

ರಾಜಕೀಯ

ಒಕ್ಕಲಿಗರಿಗೆ 4%-12% ಮೀಸಲಾತಿ ; ಇದು ಉತ್ತಮ ಬೇಡಿಕೆಯಾಗಿದೆ : ನಟ ಚೇತನ್

ಈ ಕುರಿತು ತಮ್ಮ ಫೇಸ್ಬುಕ್ ಮುಖಪುಟದಲ್ಲಿ ಬರೆದುಕೊಂಡಿರುವ ಅವರು, ಕರ್ನಾಟಕದ ಒಕ್ಕಲಿಗ ಲಾಬಿಗಳು ಒಕ್ಕಲಿಗರಿಗೆ 4% – 12% ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದಾರೆ.