ಕಿಡಿಗೇಡಿಗಳಿಗೆ ತಕ್ಕ ಪಾಠ – ಗೃಹ ಸಚಿವ ಆರಗ ಜ್ಙಾನೇಂದ್ರ

ಬೆಂಗಳೂರು, ಆ. 14: ಶಾಸಕ ಸತೀಶ್ ಅವರ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಇಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ . ಪೊಲೀಸರು ಮೂವರು ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸಿರುವುದು ಶ್ಲಾಘನೀಯ, ಆರೋಪಿಗಳು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವೆ ಇಲ್ಲ ಮತ್ತು ಆರೋಪಿಗಳಿಗೆ ತಕ್ಕ ಪಾಠ ಕಲಿಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಸ್ವಾತಂತ್ರೋತ್ಸವದ ಅಂಗವಾಗಿ ಕೆಎಸ್ಆರ್ಪಿ ಆಯೋಜಿಸಿದ್ದ ಐಕ್ಯತೆ ಮತ್ತು ದೈಹಿಕ ಸದೃಢತೆಗಾಗಿ ಸ್ವಾತಂತ್ರ್ಯತೆಯ ಒಟ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅಕ್ರಮ ಚಟುವಟಿಕೆ, ಮಾದಕ ವಸ್ತುಗಳನ್ನು ಕಳ್ಳಸಾಗಣಿಕೆ, ಹೀಗೆ ಹಲವು ಕಾನೂನು ಬಾಹಿರ ಚಟುವಟಿಕೆಗಳನ್ನು ಪೊಲೀಸರು ಬೇಧಿಸಿದ್ದಾರೆ. ಕಳ್ಳ ಸಾಗಣಿಕೆಮೇಲೆ ಇಗಾಗಳೆ ಪೊಲೀಸರು ತೀವ್ರ ನಿಗಾವಹಿಸಿದ್ದಾರೆ ಯಾವುದೇ ಅಕ್ರಮ ಚಟುವಟಿಕೆಗೆ ಆಸ್ಪದ ಕೊಡುವುದಿಲ್ಲ ಎಂದರು

ವಿದೇಶಿಯರು ಅಕ್ರಮವಾಗಿ ನೆಲಲೆಸಿರುವ ಬಗ್ಗೆ ಮಾತನಾಡಿದ ಅವರು ವೀಸಾ ಮುಗಿದ ಪ್ರಜೆಗಳನ್ನಯ ಯಾಕೆ ರಾಜ್ಯ ಬಿಟ್ಟು ಕಳಿಸಲಾಗುತ್ತಿಲ್ಲ, ಇದರಲ್ಲಿ ಕಾನೂನು ತೊಡಕು ಏನಿದೆ ಎಂಬ ಬಗ್ಗೆ ಪೊಲೀಸ್ ಅಧಿಕಾರಿಗಳೊಡನೆ ಚರ್ಚಿಸುತ್ತೇನೆ ಎಂದು ಸ್ಪಷ್ಟ ಪಡಿಸಿದರು

ಈ ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಮಾತನಾಡಿ ಪೊಲೀಸ್ ಇಲಾಖೆಯಲ್ಲಿ ಶೇ 2% ಕ್ರೀಡಾಪಟುಗಳಿಗೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

Exit mobile version