ಬ್ಯಾಡ್ಮಿಂಟನ್: ಕ್ವಾರ್ಟರ್​ ಫೈನಲ್​ನಲ್ಲಿ ಪಿ.ವಿ.ಸಿಂಧೂ ಗೆಲುವು: ಜಪಾನ್​ನ ಆಟಗಾರ್ತಿ ಮಣಿಸಿ ಸೆಮಿಫೈನಲ್ ತಲುಪಿದ ಭಾರತದ ಬ್ಯಾಡ್ಮಿಂಟನ್​ ತಾರೆ

ಟೋಕಿಯೋ, ಜು. 30: ಜಿದ್ದಾಜಿದ್ದಿನಿಂದ ಕೂಡಿದ್ದ ಪಂದ್ಯದಲ್ಲಿ ಅದ್ಭುತ ಪದರ್ಶನ ನೀಡಿದ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧೂ, ಟೋಕಿಯೋ ಒಲಂಪಿಕ್ಸ್ ಮಹಿಳೆಯರ ಸಿಂಗಲ್ಸ್ ವಿಭಾಗದ ಕ್ವಾರ್ಟರ್​ ಫೈನಲ್​ನಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಸೆಮಿಫೈನಲ್ ಪ್ರವೇಶಿಸಿದ್ದಾರೆ.

ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ವಿಶ್ವದ 3ನೇ ಶ್ರೆಯಾಂಕದ ಆಟಗಾರ್ತಿ ಜಪಾನ್​ನ ಅಕಾನೆ ಯಮಗುಚಿ ಅವರನ್ನು ಮಣಿಸಿದ ಸಿಂಧೂ
ಸೆಮಿಫೈನಲ್ ತಲುಪಿದರು. ಇದರೊಂದಿಗೆ ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತದ ಪದಕದ ಕನಸಿಗೆ ಮತ್ತಷ್ಟು ಜೀವಬಂದಂತಾಗಿದೆ.

ಪಂದ್ಯದ ಆರಂಭದಿಂದಲೇ ಆಕ್ರಮಣಕಾರಿ ಆಟವಾಡಿದ ಪಿ.ವಿ.ಸಿಂಧೂ, ಮೊದಲ ಸೆಟ್ ನಲ್ಲಿ 21-13 ಅಂತರದಿಂದ ಮುನ್ನಡೆ ಸಾಧಿಸಿದರು. ಆದರೆ ಎರಡನೇ ಸೆಟ್ ನಲ್ಲಿ ಬಲಿಷ್ಠ ಕಮ್ ಬ್ಯಾಕ್ ಮಾಡಿದ ಯಮಗುಚಿ, ಭಾರತದ ಬ್ಯಾಡ್ಮಿಂಟನ್​ ತಾರೆ ಸಿಂಧೂಗೆ ಪ್ರಬಲ ಪೈಪೋಟಿ ನೀಡಿದರು. ಆದರೆ ಕೊನೆಯ ಕ್ಷಣದಲ್ಲಿ ತಿರುಗೇಟು ನೀಡಿದ ಸಿಂಧೂ, ಸತತ ಮೂರು ಪಾಯಿಂಟ್ಸ್ ಗಳಿಸುವ ಮೂಲಕ 22-20 ಅಂತರದಿಂದ 2-0 ನೇರ ಸೆಟ್ ಗಳಿಂದ ಗೆಲುವು ಸಾಧಿಸಿದರು.

Exit mobile version