POP Ganesha cannot be sold: Forest Minister Ishwar Khandre Khadak orders
Bengaluru : ಪರಿಸರಕ್ಕೆ ಹಾನಿಕಾರಕವಾಗಿರೋ ಪ್ಲಾಸ್ಟರ್ ಆಫ್ ಪ್ಯಾರೀಸ್(ಪಿಓಪಿ) (Plaster of Paris (POP) ನಿಂದ ತಯಾರಿಸಲಾಗುವ ಗಣೇಶನ ಮಾರಾಟ ಮಾಡುವಂತಿಲ್ಲ ಎಂದು ಅರಣ್ಯ,ಜೀವಿಶಾಸ್ತ್ರ ಮತ್ತು ಪರಿಸರ ಸಚಿವ (Minister of Forests, Biology and Environment) ಈಶ್ವರ್ ಖಂಡ್ರೆ (Ishwar Khandre) ಖಡಕ್ ಆದೇಶ ನೀಡಿದ್ದಾರೆ. ಪರಿಸರ ಸ್ನೇಹಿ ಗಣಪತಿ (Eco-friendly Ganpati) ಮೂರ್ತಿ ಮತ್ತು ಹಸಿರು ಪಟಾಕಿ ಮಾತ್ರ ಉತ್ತೇಜಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ ಪರಿಸರ ಮಾಲಿನ್ಯ ಉಂಟು ಮಾಡುವ ಪಿಓಪಿ ಗಣಪತಿ (POP Ganapati) ಮತ್ತು ಪಟಾಕಿಗೆ ಕಡಿವಾಣ ಹಾಕುವಂತೆ ಸೂಚಿಸಿದ್ದಾರೆ.
ಈಗಾಗಲೇ ಪರಿಸರಕ್ಕೆ ಬಹಳಷ್ಟು ಹಾನಿ ಆಗಿದೆ. ಮತ್ತೆ ಪಿಓಪಿ ಗಣೇಶ (pop Ganesha) ವಿಗ್ರಹಗಳನ್ನು ಬಳಸುವುದರಿಂದ ಪರಿಸರ ಇನ್ನಷ್ಟು ಹಾಳಾಗುತ್ತದೆ. ಪಿಒಪಿ ಗಣೇಶನನ್ನು ತಯಾರಿಸಲು ಕ್ಯಾಲ್ಸಿಯಂ, ಸಲ್ಫೇಟ್ ಹೆಮಿಹೈಡ್ರೇಟ್ ಯುಕ್ತ ಪುಡಿಯನ್ನು ಬಳಸಲಾಗುತ್ತದೆ. ಇದರಲ್ಲಿ ಸಲ್ಫರ್ (Sulphur) , ಜಿಪ್ಸಮ್, ರಂಜಕ ಮತ್ತು ಮೆಗ್ನೀಸಿಯಮ್ ಸೇರಿದಂತೆ ಅನೇಕ ಹಾನಿಕಾರಕ ಅಂಶ ಇರುತ್ತದೆ. ಇವುಗಳಿಗೆ ಕ್ಯಾಡ್ಮಿಯಂ, ಪಾದರಸ, ಆರ್ಸೆನಿಕ್, ಸೀಸ ಮತ್ತು ಇಂಗಾಲವನ್ನು ಒಳಗೊಂಡ ರಾಸಾಯನಿಕ ಬಣ್ಣ ಲೇಪಿಸಲಾಗುತ್ತದೆ. ಇದನ್ನು ನದಿ, ಕೆರೆ, ಕಟ್ಟೆಯಲ್ಲಿ ವಿಸರ್ಜಿಸಿದರೆ ಜಲಚರಗಳು ಸಾವಿಗೀಡಾಗುತ್ತವೆ. ಜನ, ಜಾನುವಾರುಗಳು (Cattle) ಕಾಯಿಲೆ ಬೀಳುವ ಸಾಧ್ಯತೆ ಹೆಚ್ಚಿರುತ್ತದೆ ಎಂದಿದ್ದಾರೆ.
ಸರ್ವೋಚ್ಛ ನ್ಯಾಯಾಲಯ (Supreme Court) ಆದೇಶದ ಪ್ರಕಾರ ರಾತ್ರಿ 8ರಿಂದ 10ಗಂಟೆಯೊಳಗೆ ಮಾತ್ರ ಪಟಾಕಿ ಸಿಡಿಸಲು (Burst firecrackers) , 125 ಡೆಸಿಬಲ್ ಗಿಂತ ಹೆಚ್ಚು ಶಬ್ದ ಹೊರಹೊಮ್ಮುವ ಮತ್ತು ಸರ ಪಟಾಕಿ ಹಚ್ಚುವುದನ್ನು ನಿಷೇಧಿಸಲು ನಿರ್ದೇಶನ ನೀಡಿದೆ.
ಹೀಗಾಗಿ ಪಟಾಕಿ(Crackers) ಮಾರಾಟ ಮಳಿಗೆ ತೆರೆಯುವವರಿಗೆ ಕಡ್ಡಾಯವಾಗಿ ಹಸಿರು ಪಟಾಕಿ ಮಾತ್ರ ಮಾರುವುದಾಗಿ ಮುಚ್ಚಳಿಕೆ ಬರೆಸಿಕೊಂಡು ಮಾರಾಟಕ್ಕೆ ಅನುಮತಿ ನೀಡಬೇಕು ಹಾಗೂ ಸಾರ್ವಜನಿಕ (Public) ಗಣೇಶೋತ್ಸವ ಸಮಿತಿಗಳಿಗೆ ಅನುಮತಿ ನೀಡುವಾಗ ಪಿಓಪಿ ಗಣಪತಿ ಪೂಜಿಸಿ, ವಿಸರ್ಜಿಸುವುದಿಲ್ಲ, ಶಬ್ದ ಮಾಲಿನ್ಯ, ವಾಯು ಮಾಲಿನ್ಯ ಉಂಟು ಮಾಡುವ ಪಟಾಕಿ ಸಿಡಿಸುವುದಿಲ್ಲ ಎಂದು ಮುಚ್ಚಳಿಕೆ ಬರೆಸಿಕೊಳ್ಳಿ ಎಂದು ಈಶ್ವರ ಖಂಡ್ರೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ