ಬೆಂಗಳೂರು, ಡಿ. 04: ಮರಾಠಾ ಪ್ರಾಧಿಕಾರ ರಚನೆಯನ್ನು ವಿರೋಧಿಸಿ ನಾಳೆ ಬಂದ್‌ಗೆ ಕರೆ ನೀಡಿದ ಕನ್ನಡ ಪರ ಸಂಘಟನೆಗಳ ವಿಚಾರಕ್ಕೆ ಸಂಬಂಧಿಸಿದಂತೆ ಬಂದ್‌ನಿಂದಾಗುವ ಆರ್ಥಿಕ ನಷ್ಟಕ್ಕೆ ಆಯೋಜಕರೇ ಹೊಣೆ ಹಾಗೂ ಬೀದಿಬದಿ ವ್ಯಾಪಾರಿಗಳ ನಷ್ಟಕ್ಕೂ ಆಯೋಜಕರೇ ಹೊಣೆ ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ.
ಅಲ್ಲದೇ ಬಂದ್ ಅಥವಾ ರಾಲಿ ವೇಳೆ ಕೊರೋನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ರೆ ಕಟ್ಟುನಿಟ್ಟಿನ ಕ್ರಮಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ವಾಟಾಳ್ ಪಕ್ಷ ಸೇರಿ ರಾಜಕೀಯ ಪಕ್ಷಗಳಿಗೆ ಹೈಕೋರ್ಟ್ ನೋಟೀಸ್ ನೀಡಿದ್ದು, ಡಿಸೆಂಬರ್ ೧೭ರೊಳಗೆ ಪ್ರತಿಕ್ರಿಯೆ ಸಲ್ಲಿಸಲು ಪಕ್ಷಗಳಿಗೆ ತಾಕೀತು ಮಾಡಿದೆ.
ಲೈಟ್ಸ್ ಕಿಟ್ ಫೌಂಡೇಷನ್, ಸಾಯಿದತ್ತಾ ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ವೇಳೆ ಈ ಮೇಲಿನಂತೆ ಹೇಳಿದೆ ಎಂದು ಮೂಲಗಳು ತಿಳಿಸಿವೆ.