• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಿಲಿಕಾನ್ ಸಿಟಿಯಲ್ಲಿ ಗಾಳಿಯ ಗುಣಮಟ್ಟ ತೀವ್ರ ಕುಸಿತ:ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲೂ ದೆಹಲಿಯಂತೆಯೇ ಉಸಿರಾಟವೇ ದೊಡ್ಡ ಸವಾಲಾಗುವ ಸಾಧ್ಯತೆ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಸಿಲಿಕಾನ್ ಸಿಟಿಯಲ್ಲಿ ಗಾಳಿಯ ಗುಣಮಟ್ಟ ತೀವ್ರ ಕುಸಿತ:ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲೂ ದೆಹಲಿಯಂತೆಯೇ ಉಸಿರಾಟವೇ ದೊಡ್ಡ ಸವಾಲಾಗುವ ಸಾಧ್ಯತೆ
0
SHARES
40
VIEWS
Share on FacebookShare on Twitter
  • ದೆಹಲಿಯಂತಾಗುತ್ತಿರುವ (bangalore AQI deteriorated) ಬೆಂಗಳೂರು
  • PM2.5, PM10 ಪ್ರಮಾಣ ಮಿತಿ ಮೀರಿದ್ದು ಆರೋಗ್ಯ ಸಮಸ್ಯೆಗಳ ಭೀತಿ
  • AQI 200 ಗಡಿ ದಾಟಿರುವುದರಿಂದ ಹೆಚ್ಚಿದ ಆತಂಕ

Bengaluru: ಬೆಂಗಳೂರು ಎಂದಾಕ್ಷಣ ಮೊದಲು ನೆನಪಿಗೆ ಬರುವುದೇ (bangalore AQI deteriorated) ಇಲ್ಲಿನ ಹವಾಮಾನ, ಹಸಿರು ಮರಗಳು ಮತ್ತು ಆರೋಗ್ಯಕರ ಜೀವನಶೈಲಿ.

ಆದರೆ ಇತ್ತೀಚಿನ ದಿನಗಳಲ್ಲಿ ಈ ಚಿತ್ರಣ ಸಂಪೂರ್ಣವಾಗಿ ಬದಲಾಗುತ್ತಿದೆ.

ನಗರದಲ್ಲಿ ದಿನೇ ದಿನೇ ವಾಯು ಗುಣಮಟ್ಟ ಹದಗೆಡುತ್ತಿದ್ದು, ಗಾಳಿಯ ಗುಣಮಟ್ಟ ಸೂಚ್ಯಂಕ (AQI) 200 ಗಡಿಯನ್ನು ದಾಟಿರುವುದು ಗಂಭೀರ ಆತಂಕಕ್ಕೆ ಕಾರಣವಾಗಿದೆ.

ಡಿಸೆಂಬರ್ 12ರಂದು AQI 175ರಷ್ಟಿದ್ದರೆ, ಡಿಸೆಂಬರ್ 13ಕ್ಕೆ ಅದು 186ರಿಂದ 206ರ ಮಟ್ಟಕ್ಕೆ ಏರಿಕೆ ಕಂಡಿದೆ.

ಈ ಬೆಳವಣಿಗೆ ಮುಂದುವರಿದರೆ, ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲೂ (bangalore AQI deteriorated) ದೆಹಲಿಯಂತೆಯೇ ಉಸಿರಾಟವೇ ದೊಡ್ಡ ಸವಾಲಾಗುವ ಸಾಧ್ಯತೆಯಿದೆ ಎಂಬ ಎಚ್ಚರಿಕೆಯನ್ನು ತಜ್ಞರು ನೀಡುತ್ತಿದ್ದಾರೆ.

ವಿಶೇಷವಾಗಿ PM2.5 ಮತ್ತು PM10 ಎನ್ನುವ ಸೂಕ್ಷ್ಮ ಕಣಗಳ ಪ್ರಮಾಣ ಮಿತಿಮೀರಿರುವುದು ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, PM2.5 ಪ್ರಮಾಣ 5 ಮೈಕ್ರೋಗ್ರಾಮ್‌ಗಿಂತ (Microgram) ಹೆಚ್ಚಾದರೂ ಉಸಿರಾಟದ ಸಮಸ್ಯೆಗಳು ಉಂಟಾಗಬಹುದು.

ಆದರೆ ಭಾರತೀಯ ಮಾನದಂಡಗಳಲ್ಲಿ 40ರ ಮಟ್ಟವರೆಗೆ ಸ್ವೀಕಾರಾರ್ಹ ಎಂದು ಪರಿಗಣಿಸಲಾಗಿದೆ.

ಇಂದಿನ ಸ್ಥಿತಿಯಲ್ಲಿ ಬೆಂಗಳೂರಿನಲ್ಲಿ PM2.5 ಪ್ರಮಾಣ 95 ಮೈಕ್ರೋಗ್ರಾಮ್ ಮತ್ತು PM10 ಪ್ರಮಾಣ 96 ಮೈಕ್ರೋಗ್ರಾಮ್ ದಾಖಲಾಗಿದೆ.

ಇದು ಸುರಕ್ಷಿತ ಮಿತಿಗಿಂತ ಬಹಳ ಹೆಚ್ಚಾಗಿದ್ದು, ಅಸ್ತಮಾ, ಶ್ವಾಸಕೋಶದ ತೊಂದರೆ, ಕಣ್ಣಿನ ಉರಿ, ಗಂಟಲು ಕೆರಕು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ.

ಈ ಮಾಲಿನ್ಯಕ್ಕೆ ಪ್ರಮುಖ ಕಾರಣಗಳು ದಿನೇ ದಿನೇ ಹೆಚ್ಚುತ್ತಿರುವ ವಾಹನಗಳ ಹೊಗೆ, ಕೈಗಾರಿಕಾ ಚಟುವಟಿಕೆಗಳು, ಕಟ್ಟಡ ನಿರ್ಮಾಣದ ಧೂಳು ಹಾಗೂ ಇಂಧನದ ದಹನ.

PM2.5 ಕಣಗಳು ಬಹುತೆಕವಾಗಿ ವಾಹನಗಳ ಹೊಗೆ ಮತ್ತು ಕೈಗಾರಿಕಾ ಉತ್ಸರ್ಗಗಳಿಂದ ಉತ್ಪತ್ತಿಯಾಗುತ್ತವೆ.

ಇವು ಅತ್ಯಂತ ಸೂಕ್ಷ್ಮವಾಗಿದ್ದು, ನೇರವಾಗಿ ಶ್ವಾಸಕೋಶದೊಳಗೆ ಪ್ರವೇಶಿಸಿ ರಕ್ತವಾಹಿನಿಗೂ ತಲುಪುವ ಸಾಮರ್ಥ್ಯ ಹೊಂದಿವೆ.

ಇನ್ನು PM10 ಕಣಗಳು ಕಟ್ಟಡ ಕಾಮಗಾರಿಗಳ ಧೂಳು, ರಸ್ತೆ ಧೂಳು ಹಾಗೂ ಪರಾಗಗಳಿಂದ ಉತ್ಪತ್ತಿಯಾಗುತ್ತವೆ.

ಇದಕ್ಕೆ ಜೊತೆಯಾಗಿ ಕಾರ್ಬನ್ ಮೊನಾಕ್ಸೈಡ್ (Carbon Monoxide) , ಓಜೋನ್ ಮತ್ತು ನೈಟ್ರೋಜನ್ ಡೈಆಕ್ಸೈಡ್‌ಗಳ (Nitrogen Dioxides) ಪ್ರಮಾಣವೂ ಏರಿಕೆಯಾಗುತ್ತಿರುವುದು ಗಾಳಿಯನ್ನು ಇನ್ನಷ್ಟು ಅಪಾಯಕಾರಿ ಮಾಡುತ್ತಿದೆ.

ಈ ಸಮಸ್ಯೆ ಕೇವಲ ಬೆಂಗಳೂರಿನ ಒಂದೇ ಏರಿಯಾಗೆ ಮಾತ್ರ ಸೀಮಿತವಾಗಿಲ್ಲ.

ಅರೆಕೆರೆ, ಬೆಳ್ಳಂದೂರು ಸೇರಿದಂತೆ ಸುತ್ತಮುತ್ತಲಿನ ಹಲವಾರು ಪ್ರದೇಶಗಳಲ್ಲಿಯೂ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದೆ.

AQI ಅಳತೆಯ ಪ್ರಕಾರ 0–50 ಉತ್ತಮ, 50–100 ಮಧ್ಯಮ, 100–150 ಕಳಪೆ, 150–200 ಅನಾರೋಗ್ಯಕರ, 200–300 ಗಂಭೀರ ಮತ್ತು 300 ಮೇಲ್ಪಟ್ಟರೆ ಅಪಾಯಕಾರಿ ಎಂದು ವರ್ಗೀಕರಿಸಲಾಗಿದೆ.

ಪ್ರಸ್ತುತ ಬೆಂಗಳೂರು ಸುಮಾರು 180 AQIಯೊಂದಿಗೆ ಅನಾರೋಗ್ಯಕರ ಹಂತದಲ್ಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಭೀರ ಹಂತಕ್ಕೂ ತಲುಪುತ್ತಿದೆ.

ಮಂಗಳೂರು, ಮೈಸೂರು, ಬೆಳಗಾವಿ, ಬಳ್ಳಾರಿ ಮೊದಲಾದ ನಗರಗಳಲ್ಲಿಯೂ ಗಾಳಿಯ ಗುಣಮಟ್ಟ ಚಿಂತಾಜನಕ ಮಟ್ಟದಲ್ಲಿರುವುದು ರಾಜ್ಯವ್ಯಾಪಿ ಸಮಸ್ಯೆಯಾಗಿ ಪರಿಣಮಿಸುತ್ತಿದೆ.

ಈ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವುದು ಅತ್ಯಂತ ಅಗತ್ಯ.

ವಿಶೇಷವಾಗಿ ಮಕ್ಕಳು, ವೃದ್ಧರು, ಗರ್ಭಿಣಿಯರು ಮತ್ತು ಉಸಿರಾಟ ಸಂಬಂಧಿ ಸಮಸ್ಯೆಗಳಿರುವವರು ಹೆಚ್ಚು ಜಾಗರೂಕರಾಗಬೇಕು.

ಅಗತ್ಯವಿಲ್ಲದ ಹೊರಗೆ ಹೋಗುವುದನ್ನು ತಪ್ಪಿಸುವುದು, ಮಾಸ್ಕ್ ಧರಿಸುವುದು, ಮನೆಗಳಲ್ಲಿ ಗಾಳಿಶುದ್ಧಿಕರಣ ಕ್ರಮಗಳನ್ನು ಕೈಗೊಳ್ಳುವುದು ಒಳಿತು.

ಜೊತೆಗೆ ಸರ್ಕಾರ ಮತ್ತು ಸ್ಥಳೀಯ ಆಡಳಿತಗಳು ವಾಹನ ನಿಯಂತ್ರಣ, ಹಸಿರು ವಲಯ ವಿಸ್ತರಣೆ, ಕಟ್ಟಡ ಕಾಮಗಾರಿಗಳ ಮೇಲ್ವಿಚಾರಣೆ ಹಾಗೂ ಕೈಗಾರಿಕಾ ಉತ್ಸರ್ಗಗಳ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ.

ಇಲ್ಲವಾದರೆ, “ಸಿಲಿಕಾನ್ ಸಿಟಿ” (Silicone City) ಎಂದೇ ಹೆಸರಾದ ಬೆಂಗಳೂರು ಮುಂದಿನ ದಿನಗಳಲ್ಲಿ “ಮಾಲಿನ್ಯ ನಗರ” ಎಂಬ ಅಸಹ್ಯ ಹೆಸರು ಪಡೆಯುವ ಅಪಾಯವಿದೆ.

ಇದನ್ನು ಓದಿ : ಇನ್ಮುಂದೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಸಿಗಲಿದೆ ನಂದಿನಿ ಉತ್ಪನ್ನ : ಜಿಬಿಎ ಹೊಸ ಯೋಜನೆ
Tags: airairpollutionbengaluruDelhiforecastesilicone cityweather

Related News

ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ: 27 ವರ್ಷಗಳ ಬಾಹ್ಯಾಕಾಶ ಪಯಣಕ್ಕೆ ಗುಡ್ ಬೈ
ದೇಶ-ವಿದೇಶ

ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ: 27 ವರ್ಷಗಳ ಬಾಹ್ಯಾಕಾಶ ಪಯಣಕ್ಕೆ ಗುಡ್ ಬೈ

January 21, 2026
ಡೀಪ್ ಫೇಕ್ ಹಾವಳಿಗೆ ಬ್ರೇಕ್ ಹಾಕಲು ಮುಂದಾದ ಕೇಂದ್ರ ಸರ್ಕಾರ: AI ಫೋಟೋ–ವೀಡಿಯೋಗಳಿಗೆ ಲೇಬಲ್ ಕಡ್ಡಾಯ
ದೇಶ-ವಿದೇಶ

ಡೀಪ್ ಫೇಕ್ ಹಾವಳಿಗೆ ಬ್ರೇಕ್ ಹಾಕಲು ಮುಂದಾದ ಕೇಂದ್ರ ಸರ್ಕಾರ: AI ಫೋಟೋ–ವೀಡಿಯೋಗಳಿಗೆ ಲೇಬಲ್ ಕಡ್ಡಾಯ

January 21, 2026
ಬ್ಯಾನರ್ ಗಲಾಟೆಗಳ ಬಳಿಕ ಎಚ್ಚೆತ್ತ ಜಿಬಿಎ: ಬೆಂಗಳೂರಿನಾದ್ಯಂತ ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು
ಪ್ರಮುಖ ಸುದ್ದಿ

ಬ್ಯಾನರ್ ಗಲಾಟೆಗಳ ಬಳಿಕ ಎಚ್ಚೆತ್ತ ಜಿಬಿಎ: ಬೆಂಗಳೂರಿನಾದ್ಯಂತ ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು

January 21, 2026
ಜಿಬಿಎ ಚುನಾವಣೆಗೆ ಆಯೋಗ ಸಜ್ಜು : ಬ್ಯಾಲೆಟ್ ಪೇಪರ್ ಮೂಲಕ ಮತದಾನ, ಕರಡು ಮತದಾರರ ಪಟ್ಟಿ ಪ್ರಕಟ
ಪ್ರಮುಖ ಸುದ್ದಿ

ಜಿಬಿಎ ಚುನಾವಣೆಗೆ ಆಯೋಗ ಸಜ್ಜು : ಬ್ಯಾಲೆಟ್ ಪೇಪರ್ ಮೂಲಕ ಮತದಾನ, ಕರಡು ಮತದಾರರ ಪಟ್ಟಿ ಪ್ರಕಟ

January 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.